ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಗುರುಶ್ರೀ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಸ್ವ-ಉದ್ಯೋಗ ತರಬೇತಿ ಕಾರ್ಯಗಾರವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷ÷್ಯತೆಯಲ್ಲಿ ಮಾಡೂರು ಶಾಖೆಯ ಆವರಣದಲ್ಲಿ ಜರುಗಿತು.


ಈ ಕಾರ್ಯಕ್ರಮವನ್ನು ಮಾಡೂರು ಶಾಖೆಯ ಹಿರಿಯ ಸದಸ್ಯರಾದ ಶ್ರೀಮತಿ ಸುಂದರಿಯವರು ಉದ್ಘಾಟಿಸಿದರು.
ಸಂತ ಆಗ್ನೇಸ್ ಕಾಲೇಜಿನ ಸಹ ಪ್ರಾದ್ಯಾಪಕರಾಗಿರುವ ಡಾ. ಮೀರಾ ರಮೇಶ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಾ ಬರುತ್ತಿದೆ. ಸಂಘದ ಗುರುಶ್ರೀ ಸ್ವ-ಸಹಾಯ ಗುಂಪಿನ ಮಹಿಳಾ ಸದಸ್ಯರಿಗೆ ಇಂತಹ ಅಚ್ಚುಕಟ್ಟಾದ ಸ್ವ-ಉದ್ಯೋಗ ತರಬೇತಿ ಕಾರ್ಯಗಾರವನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮುಂದಾಳತ್ವದಲ್ಲಿ ಹಮ್ಮಿಕೊಂಡಿರುವುದು ಶ್ಲಾಘನೀಯ ಹಾಗೂ ಅಂತರಾಷ್ಟಿçÃಯ ಕಾರ್ಯಗಾರದಲ್ಲಿ ಈ ತರಬೇತಿಯ ಬಗ್ಗೆ ಮಂಡಿಸಲಿದ್ದೇನೆ ಎಂದು ತಿಳಿಸಿದರು.

ಕಾರ್ಯಕ್ರಮದ ತರಬೇತುದಾರರಾದ ಜಿಲ್ಲಾ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷರಾದ ಶ್ರೀಮತಿ ರೇಖಾಲತಾ ರವರು ಮಾತನಾಡಿ, ಸ್ವ-ಸಹಾಯ ಗುಂಪಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸ್ವ-ಉದ್ಯೋಗದ ತರಬೇತಿ ಪಡೆದು, ಈ ಕಾರ್ಯಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಸಂಘವು ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಶೇಕಡಾ ೯೫% ಮಹಿಳಾ ಸಿಬ್ಬಂದಿಯೊAದಿಗೆ ಸಂಘವನ್ನು ಮುನ್ನಡೆಸುತ್ತಿದ್ದು, ಗುರುಶ್ರೀ ಸ್ವ-ಸಹಾಯ ಸಂಘಗಳ ಮೂಲಕ ಸಮಾಜದ ಇತರ ಮಹಿಳೆಯರು ಮುಂಚೂಣಿಗೆ ಬರಲು ಸಹಾಯಕವಾಗಿದ್ದು, ಸ್ವ-ಉದ್ಯೋಗ ನಡೆಸಲು ಬೇಕಾದ ತರಬೇತಿ ನೀಡುವ ನಿಟ್ಟಿನಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ತರಬೇತಿಯನ್ನು ಆಯೋಜಿಸಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯಬೇಕೆಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು. ಮಾಡೂರು ಶಾಖೆಯ ಪ್ರಭಾರ ಶಾಖಾಧಿಕಾರಿ ಶ್ರೀಮತಿ ಭವ್ಯರವರು ಸ್ವಾಗತಿಸಿ, ಹಿರಿಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ರವರು ಕಾರ್ಯಕ್ರಮ ನಿರೂಪಿಸಿದರು.