
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ,Œ “ಠೇವಣಿ ಸಂಗ್ರಹಣೆಯೊAದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ , ಸಿಬ್ಬಂದಿ ವರ್ಗ, ಗ್ರಾಹಕರ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ Œಸೇವೆ ನೀಡುತ್ತಿದ್ದೇವೆ. ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 7788/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುತ್ತಿದೆ. ಸಂಘದಲ್ಲಿ ಲಭ್ಯವಿರುವ ಇ-ಸ್ಟಾಂಪಿ0ಗ್ ಸೇವೆ, ವಿಮಾ ಸೇವೆ, ಭವಿಷ್ಯ ಸುರಕ್ಷಾ ಯೋಜನೆಯ ಜೊತೆಗೆ ಎಲ್ಲಾ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ ಸನಿಲ್, ಶ್ರೀ ಗೋಪಾಲ್ ಎಮ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ನೀರುಮಾರ್ಗ ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಅಕ್ಷತಾ ಪಿ ಸ್ವಾಗತಿಸಿ , ಕುಮಾರಿ ಲಾವಣ್ಯ ವಂದಿಸಿದರು. ಪ್ರಭಾರ ಶಾಖಾಧಿಕಾರಿ ಕುಮಾರಿ ಹರ್ಷಿತಾ ಕರ‍್ಯಕ್ರಮ ನಿರೂಪಿಸಿದರು.