ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ ,ಉಳ್ಳಾಲ , ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಹಾಗೂ ಶಿವಶಕ್ತಿ ಯುವಕ ಮಂಡಲ (ರಿ.) ಉಳ್ಳಾಲ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣ, ಉಳ್ಳಾಲದಲ್ಲಿ ಜರುಗಿತು. ವಿದ್ಯಾರಣ್ಯ ಯುವಕ ವೃಂದದ ಗೌರವಾಧ್ಯಕ್ಷರಾದ ಶ್ರೀ ವಿಜಯ ಕುಮಾರ್‌ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು.


ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ವಿಭಾಗದ ವೈದ್ಯರಾದ ಡಾ|| ಶ್ರೀಮತಿ ನವ್ಯ ಕೆ. ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಯಲ್ಲಿ ಸಾಮಾಜಿಕ ಕಳಕಳಿಯಿಂದ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಸಲಹೆ , ಹಲ್ಲುಗಳ ಶುಚೀಕರಣ, ಹಲ್ಲುಗಳ ಚಿಕ್ಕ ಚಿಕ್ಕ ಭರ್ತಿಗೊಳಿಸುವ ಚಿಕಿತ್ಸೆ, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಲ್ಲುಗಳನ್ನು ಕೀಳಿಸುವುದರ ಜೊತೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡಿ ಆಸ್ಪತ್ರೆಯಲ್ಲೂ ಹೆಚ್ಚಿನ ಸೇವೆಯನ್ನು ನೀಡಲಾಗುವುದು ಎಂದು ತಿಳಿಸಿದರು.
ಕೆ.ಎಂ.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಹರ್ಬಟ್ ಪಿರೈರಾ ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದ್ದು, ಇವರು ಶಿಬಿರಗಳನ್ನು ತುಂಬಾ ಅಚ್ಚುಕಟ್ಟಾಗಿ ಆಯೋಜನೆ ಮಾಡುತ್ತಿದ್ದಾರೆ. ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು, ಬಿ.ಪಿ. ಮತ್ತು ಮದುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆಯನ್ನು ನೀಡಲಾಗುವುದು ಶಿಬಿರಾರ್ಥಿಗಳು ಇದರ ಪ್ರಯೋಜನಗಳನ್ನು ಪಡೆಯುವಂತೆ ವಿನಂತಿಸಿದರು.
ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಮಾಜಿ ಅಧ್ಯಕ್ಷರಾದ ಶ್ರೀ ರವೀಂದ್ರ ರಾಜ್ ಮಾತನಾಡಿ, ಉಳ್ಳಾಲದ ಪರಿಸರದಲ್ಲಿ ಶ್ರೀಯುತ ಚಿತ್ತರಂಜನ್ ಬೋಳಾರವರ ನೇತ್ರತ್ವದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವ ಇಂತಹ ಸಮಾಜ ಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಮತ್ತು ಇಂತಹ ಶಿಬಿರದ ಪ್ರಯೋಜನವನ್ನು ನನ್ನಂತೆ ಹಲವು ಜನರು ಪಡೆದಿದ್ದಾರೆ ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, ‘ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ ೮೪ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಕಾರ್ಯಕ್ರಮವು ಉಳ್ಳಾಲದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಪ್ರಮುಖ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆ.ಎಂ.ಸಿ. ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ಆಡಳಿತ ವರ್ಗ , ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕ್ರತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ಗೌರವಾಧ್ಯಕ್ಷರಾದ ಶ್ರೀ ವಾಮನ್ ಕೆ, ಕೆ.ಎಂ.ಸಿ. ಆಸ್ಪತ್ರೆಯ ವೈದ್ಯರಾದ ಡಾ. ಅನನ್ಯ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ವಿಭಾಗದ ವೈದ್ಯರಾದ ಡಾ|| ಶಿನಾಜ್ ಕುಮಾರ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಬಂಡಿಕೊಟ್ಯ, ಉಳ್ಳಾಲ ಇದರ ಗೌರವ ಅಧ್ಯಕ್ಷರಾದ ಶ್ರೀ ಅಶೋಕ್ ಧರ್ಮನಗರ, ಅಧ್ಯಕ್ಷರಾದ ಶ್ರೀ ಪ್ರಶಾಂತ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ರೂಪ ಧರ್ಮನಗರ, ವಿದ್ಯಾರಣ್ಯ ಯುವಕ ವೃಂದದ ಗೌರವ ಅಧ್ಯಕ್ಷರಾದ ಶ್ರೀ ವಿಜಯ ಕುಮಾರ್, ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಅಧ್ಯಕ್ಷರಾದ ಶ್ರೀ ಜಯ ಉಳ್ಳಾಲ, ವಿದ್ಯಾರಣ್ಯ ಯುವಕ ವೃಂದದ ಅಧ್ಯಕ್ಷರಾದ ಶ್ರೀ ಪ್ರವೀಣ್ ಸುವರ್ಣ, ಕಾರ್ಯಾಧ್ಯಕ್ಷರಾದ ಶ್ರೀ ಧನು ಪೂಜಾರಿ ಉಳ್ಳಾಲ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೧೫೦ಕ್ಕೂ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಓಷಧಿ, ವಿತರಣೆ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾ ಸ್ವಾಗತಿಸಿ, ಹಿರಿಯ ಶಾಖಾಧಿಕಾರಿ ಶ್ರೀಮತಿ ಯಶವಂತಿ ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿಯಾದ ಶ್ರೀ ಸಚಿನ್ ಕೊಡ್ಮಾನ್ ರವರು ನಿರ್ವಹಿಸಿದರು.