
ಸಂಘದ ಅಧ್ಯಕ್ಷರಾದ “ಸಹಕಾರ ರತ”್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘವು ಪ್ರತಿ ವರ್ಷ ಸ್ವಾತಂತ್ಯೋತ್ಸವ ದಿನಾಚರಣೆಯ ಸಂದರ್ಭದಲ್ಲಿ ದೇಶಕ್ಕಾಗಿ ಸೇವೆಗೈದ ಯೋಧರನ್ನು ಸನ್ಮಾನಿಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಆಚರಿಸುತ್ತಾ ಬರುತ್ತಿದೆ. ಈ ಬಾರಿಯ ಸ್ವಾತಂತ್ಯೋತ್ಸವದಲ್ಲಿ ನಮ್ಮ ಕರಾವಳಿಯ ಹೆಮ್ಮೆಯ ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ರವರನ್ನು ಇವತ್ತಿನ ಸಮಾರಂಭದಲ್ಲಿ ಸನ್ಮಾನಿಸಲು ನಮ್ಮ ಸಂಘ ತುಂಬಾ ಹೆಮ್ಮೆ ಪಡುತ್ತಿದೆ, ದೇಶಕೋಸ್ಕರ ಹಲವು ಯುದ್ಧದಲ್ಲಿ ಭಾಗವಹಿಸಿ ದೇಶ ರಕ್ಷಣೆಯಲ್ಲಿ ತೊಡಗಿಸಿಕೊಂಡ ಯೋಧರನ್ನು ಸನ್ಮಾನಿಸುವುದು ನಮ್ಮ ಭಾಗ್ಯವೆಂದರು.
ಈ ಸಂದರ್ಭದಲ್ಲಿ ನಿವೃತ್ತ ಯೋಧ ನಾಯಕ್ ಜಗದೀಶ್ ಎಮ್. ಇವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ಸಂಘದ ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್ ಕೊಂಡಾಣ, ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ ಶ್ರೀಮತಿ ಚಂದ್ರಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಶಾಖಾಧಿಕಾರಿ ಶ್ರೀಮತಿ ಚೈತ್ರಾ ಸ್ವಾಗತಿಸಿ, ಸಂಘದ ಶಾಖಾಧಿಕಾರಿ ಶ್ರೀಮತಿ ಸುಜಾತ ರವರು ವಂದಿಸಿದರು. ಸಹಾಯಕ ಪ್ರಬಂದಕರಾದ ಶ್ರೀ ವಿಶ್ವನಾಥ ರವರು ಕಾರ್ಯಕ್ರಮ ನಿರೂಪಿಸಿದರು.