
ಸಂಘದ ಸದಸ್ಯರಾದ ಶ್ರೀ ಕಾಸಿಮ್ ಕೆ ಇವರು ಮಾತನಾಡಿ “ಸಂಘವು ಅತೀ ಕಡಿಮೆ ಅವಧಿಯಲ್ಲಿ ಸಾಧಿಸಿರುವ ಬೆಳವಣಿಗೆÂಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಇನ್ನೂ ಹೆಚ್ಚಿನ ಶಾಖೆಯನ್ನು ತೆರೆಯುವಂತಾಗಲಿ” ಎಂದು ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಮುಡಿಪು ಶಾಖೆಯು ೯ನೇ ವಾರ್ಷಿಕೋತ್ಸವದ ಸುಸಂದರ್ಭದಲ್ಲಿ ಶಾಖೆಯ ಪ್ರಗತಿಗೆ ಕಾರಣಿಕಾರ್ತರಾದ ಎಲ್ಲಾ ಗ್ರಾಹಕರಿಗೆ ಅಭಿನಂದನೆಯನ್ನು ಸಲ್ಲಿಸಿ, ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 1000ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 10500/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿದ್ದು, ಗ್ರಾಹಕರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯವನ್ನು ನೀಡುತ್ತಿದ್ದೇವೆ. ಜನರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ಸಹ ಸತತವಾಗಿ ವಿವಿಧ ಸಂಘಗಳ ಸಹಯೋಗದೊಂದಿಗೆ ಹಮ್ಮಿಕೊಂಡು ಬರುತ್ತಿದ್ದೇವೆ. ಜೊತೆಗೆ ಸಂಘದ ಸದಸ್ಯರ ಮಕ್ಕಳಿಗೆ ಒಳ್ಳೆಯ ಅಂಕ ಬಂದಾಗ ವಿದ್ಯಾರ್ಥಿ ವೇತನ ನೀಡಿ ಅವರನ್ನು ಪ್ರೋತ್ಸಾಹಿಸುತ್ತಿದ್ದೇವೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಸAಘದ ಮುಡಿಪು ಶಾಖೆಯ ಶಾಖಾಧಿಕಾರಿಯಾದ ಕುಮಾರಿ ನಿಶ್ಮಿತಾ ರವರು ಸ್ವಾಗತಿಸಿ, ಶ್ರೀ ಪ್ರದೀಪ್ ರವರು ವಂದಿಸಿದರು. ಸಿಬ್ಬಂದಿಯಾದ ಕುಮಾರಿ ದೀಪ್ತಿ ರವರು ಕಾರ್ಯಕ್ರಮ ನಿರೂಪಿಸಿದರು.