ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಜ್ಪೆ ಶಾಖೆಯ 11ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಶ್ರೀ ಗೋಪಾಲ್ ಅಮೀನ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ರವರು “ರಾಷ್ಟಿçಕೃತ ಬ್ಯಾಂಕುಗಳಲ್ಲಿ ಸ್ಥಳೀಯ ಸಿಬ್ಬಂದಿಗಳ ಕೊರತೆ ಇರುವುದರಿಂದ ನಾವುಗಳು ಅಲ್ಲಿ ತೆರಳದೆ ಸಹಕಾರಿ ಸಂಸ್ಥೆಗಳತ್ತಾ ಆಕರ್ಷಿತರಾಗುತ್ತಿದ್ದೇವೆ. ಅದರಲ್ಲೂ ಆತ್ಮಶಕ್ತಿಯ ಸಿಬ್ಬಂದಿಗಳು ಎಟಿಎಂ ಗಿಂತಲೂ ಅತೀ ವೇಗದಲ್ಲಿ ಸೇವೆಯನ್ನು ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಆತ್ಮಶಕ್ತಿಯ ಸಹಕಾರಿ ತನ್ನ ಸ್ವಂತ ಆಪ್ಲಿಕೇಶನ್ ಮಾಡುವ ಮೂಲಕ ಇನ್ನೂ ಹೆಚ್ಚಿನ ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವಂತಾಗಲಿ” ಎಂದು ಶುಭ ಹಾರೈಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಬೆಂದೂರ್‌ವೆಲ್ ಶಾಖೆಯ ಹದಿಮೂರನೇ ವಾರ್ಷಿಕೋತ್ಸವ ಪ್ರಯುಕ್ತ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಹಾಗೂ ಲಯನ್ಸ್ ಮತ್ತು ಲಿಯೋ ಕ್ಲಬ್ ಮಂಗಳೂರು , ಇವರುಗಳ ಜಂಟಿ ಸಹಯೋಗದೊಂದಿಗೆ ಬೋಳೂರು ಮಾತಾ ಅಮೃತಾನಂದಮಯಿ ಮಠ, ಸಮುದಾಯ ದಂತ ಆರೋಗ್ಯ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು, ಇವರುಗಳ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು, ಇಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಉದ್ಯಮಿ ಶ್ರೀ ಲಕ್ಷಿ÷್ಮÃನಾರಾಯಣ ರವರು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಲಯನ್ಸ್ ಕ್ಲಬ್, ಎಂಜೆಎಫ್ ಅಧ್ಯಕ್ಷರಾದ ಶ್ರೀ ಲಯನ್ ಜಯರಾಜ್ ಪ್ರಕಾಶ್ ರವರು ಮಾತನಾಡಿ “ಇಂದಿನ ಜನರ ಜೀವನ ಶೈಲಿಯು ಜನರ ಆರೋಗ್ಯದಲ್ಲಿ ಪರಿಣಾಮ ಬೀರುತ್ತದೆ, ಇಂತಹ ಶಿಬಿರದಿಂದ ಜನರು ತಮ್ಮ ಆರೋಗ್ಯದ ತಪಾಸಣೆ ಮಾಡಿಸುವುದು ಉತ್ತಮ” ಎಂದರು. ಯೆನೆಪೋಯ ದಂತಾ ವಿಭಾಗದ ಮುಖ್ಯಸ್ಥರಾದ ಡಾ|| ರೇಖಾ ಪಿ. ಶೆಣೈ ರವರು ಮಾತನಾಡಿ “ಕಾಯಿಲೆಗಳನ್ನು ಗುಣಪಡಿಸುವುದಕ್ಕಿಂತ ಮೊದಲು […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಲಾಲ್‌ಭಾಗ್ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ , ಇವರ ಜಂಟಿ ಸಹಯೋಗದೊಂದಿಗೆ ಎ.ಜೆ. ಇನ್ಸ್÷್ಟಟ್ಯೂಟ್ ಆಫ್ ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವನ್ನು ಕುದ್ರೋಳಿ ಯುವಕ ಸಂಘ (ರಿ) ಕುದ್ರೋಳಿ ಇಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ಲಯನ್ ಶ್ರೀ ರಾಘವ್ ಪಡೀಲ್ ರವರು ಉದ್ಘಾಟಿಸಿ, ಮಾತನಾಡಿ, ಗಣರಾಜೋತ್ಸವದ ದಿನದಂದು ವೈದ್ಯಕೀಯ ಶಿಬಿರವನ್ನು ಹಮ್ಮಿಕೊಂಡಿರುವುದು ಬಹಳ ಸಂತೋಷದ ವಿಷಯ, ವೈದ್ಯಕೀಯ ಶಿಬಿರವನ್ನು ಏರ್ಪಡಿಸುವುದು ಅಷ್ಟು ಸುಲಭದ ಸಂಗತಿ ಅಲ್ಲ ತುಂಬಾ ಕಷ್ಟಕರವಾದದ್ದು, ಆದರೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬಹಳ ಉತ್ತಮ ರೀತಿಯಲ್ಲಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಿದೆ ಎಂದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ಇವರು ಮಾತನಾಡಿ ನಮ್ಮ ಸಂಘದ ಪ್ರತಿ ಶಾಖೆಯ […]

ಒಳಮೊಗ್ರು ಗ್ರಾಮದ ಪರ್ಪುಂಜದಲ್ಲಿರುವ ಇತಿಹಾಸ ಪ್ರಸಿದ್ಧ ರಾಮಜಾಲು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಶ್ರೀ ಬ್ರಹ್ಮಬೈದೇರುಗಳ ಜಾತ್ರೋತ್ಸವವು ಜರುಗಿತು. ಜಾತ್ರೋತ್ಸವದ ಅಂಗವಾಗಿ ನಡೆದ ಶ್ರೀ ಕೂರೇಲುಗುತ್ತು ಸುಬ್ಬಪ್ಪ ಪೂಜಾರಿ ಧರ್ಮಚಾವಡಿಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ರವರು ದೀಪ ಬೆಳಗಿಸಿ, ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಧರ್ಮದ ಅರಿವು ನಮ್ಮಲ್ಲಿ ಬರಬೇಕಾದರೆ ನಾವು ಧರ್ಮ ಗ್ರಂಥಗಳನ್ನು ಓದುವವರಾಗಬೇಕು, ಕೇವಲ ಭಾಷಣದಿಂದ ನಮ್ಮಲ್ಲಿ ಧರ್ಮದ ಅರಿವು ಮೂಡಲು ಅಸಾಧ್ಯ ಪುಸ್ತಕ ಭಂಡಾರದಿ0ದ ಹಾಗೂ ಇಂತಹ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ನಮ್ಮಲ್ಲಿ ಧರ್ಮದ ಅರಿವು ಹೆಚ್ಚಾಗಲು ಸಾಧ್ಯವಿದೆ” ಎಂದರು.

ಈ ಕಾರ್ಯಕ್ರಮದಲ್ಲಿ ರಾಮಜಾಲು ಗರಡಿಯ ಗೌರವವಾಗಿ “ರಾಮಜಾಲು ಗರಡಿ ಗೌರವ ಪ್ರಶಸ್ತಿ’ಯನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ಪ್ರದಾನ ಮಾಡಿದರು. ಪ್ರತಿಷ್ಠಿತ “ರಾಮಜಾಲು ಗರಡಿ ಗೌರವ” ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು, “ರಾಮಜಾಲುವಿನ ಗರಡಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೊಟ್ಟಾರ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ’ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಕೊಟ್ಟಾರ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಜಯರಾಮ ಕಾರಂದೂರು, ಶ್ರೀ ಸದಾಶಿವ ಎನ್, ಶ್ರೀ ಭಾಸ್ಕರ ಬಿ, ಶ್ರೀ ಅಶ್ವಿನ್ ಕುಮಾರ್, ಶ್ರೀ ಎಚ್ ಜನಾರ್ಧನ ಗಡಿಯಾರ್, ಶ್ರೀಮತಿ ರಮಣಿ ಕೆ, ಶ್ರೀಮತಿ ನಿಶಾ ವಿಶ್ವನಾಥ ಹಾಗೂ ಶ್ರೀಮತಿ ಜ್ಯೋತಿ ವಿ ಸುವರ್ಣ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು.

ಶಾಖೆಯ ಸಲಹಾ ಸಮಿತಿ ಸದಸ್ಯರಾದ ಶ್ರೀ ಜಯರಾಮ್ ಕಾರಂದೂರ್ ರವರು ಮಾತನಾಡಿ, ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತಪಡಿಸಿ, ಸಂಘವು ಪ್ರತಿಯೊಂದು ಗ್ರಾಹಕರ ಮನೆಗೆ ಕ್ಯಾಲೆಂಡರ್ ನೀಡುತ್ತಿರುವುದರ ಬಗ್ಗೆ ಉತ್ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಸಂಘದ ಗ್ರಾಹಕರಾದ ಶ್ರೀ ಉಮ್ಮಪ್ಪ ಪೂಜಾರಿ ಪಿ. ಹಾಗೂ ಶ್ರೀಮತಿ ಪ್ರತಿಭಾ ಎಸ್ ರವರು ಸಂಘದ ಶಾಖೆಗಳು ಉತ್ತಮ ಸೇವೆಯನ್ನು ನೀಡುತ್ತಿರುವ ಬಗ್ಗೆ ಹಾಗೂ ಇನ್ನೂ ನೂತನ ಶಾಖೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಂಭಗೊಳ್ಳಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮಡಂತ್ಯಾರು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಮತ್ತು ಜೆಸಿಐ ಮಡಂತ್ಯಾರು ಇವರುಗಳ ಜಂಟಿ ಸಹಯೋಗದೊಂದಿಗೆ ಎ.ಜೆ ಮೆಡಿಕಲ್ ಸೈನ್ಸ್, ಮಂಗಳೂರು ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಕಲಾ ಸಭಾಂಗಣ, ಶ್ರೀ ದುರ್ಗಾ ಕಾಂಪ್ಲೆಕ್ಸ್ ಮುಖ್ಯರಸ್ತೆ ಮಡಂತ್ಯಾರು ಇಲ್ಲಿ ಜರುಗಿತು.

ಈ ಕರ‍್ಯಕ್ರಮವನ್ನು ಮಡಂತ್ಯಾರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಶ್ರೀಮತಿ ರೂಪಾ ನವೀನ್ ರವರು ಉದ್ಘಾಟಿಸಿ, ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು. ಈ ಕರ‍್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ಜೆ.ಸಿ.ಐ ಇದರ ಅಧ್ಯಕ್ಷರಾದ ಶ್ರೀಮತಿ ಅಮಿತಾ ಆಶೋಕ್ ರವರು ಮಾತನಾಡಿ, ಯಾವುದೇ ಸಹಕಾರಿ ಸಂಘವು ಆರೋಗ್ಯ ಶಿಬಿರವನ್ನು ಆಯೋಜಿಸುವುದಿಲ್ಲ, ಆದರೆ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಕಾಪು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ರೋಟರಿ ಕ್ಲಬ್ ಇವರ ಸಹಭಾಗಿತ್ವದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ಸಹಕಾರದೊಂದಿಗೆ ಹೊಸ ಮಾರಿಗುಡಿ ಬಳಿಯಲ್ಲಿರುವ ಸಂಘದ ವಠಾರದಲ್ಲಿ ನ. 22 ರಂದು ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ವ್ಯ.ಸೇ.ಸ. ಸಂಘದ ಅಧ್ಯಕ್ಷರು ಮತ್ತು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕರಾದ ಐಕಳಭಾವ ದೇವಿಪ್ರಸಾದ್ ಶೆಟ್ಟಿ ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಂಗಳೂರಿನಲ್ಲಿ ಸ್ವಂತ ಕಟ್ಟಡವನ್ನು ಹೊಂದಿ, ಅಲ್ಪಾವಧಿಯಲ್ಲಿಯೇ 33 ಶಾಖೆಗಳನ್ನು ತೆರೆದು, ಠೇವಣಿ ಮತ್ತು ಸಾಲ ನೀಡುವಿಕೆಯಲ್ಲಿ ಪ್ರತಿ ವರ್ಷ ಲಾಭಗಳಿಸಿ, ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆತ್ಮಕ್ಕೆ ಹತ್ತಿರವಾಗಿರುವ ಸಹಕಾರಿ ಸಂಘವಾಗಿ ವಿಶ್ವಾಸವನ್ನು ಗಳಿಸಿ ರಾಜ್ಯಕ್ಕೆ ಮಾದರಿಯಾದ ಸಂಸ್ಥೆಯಾಗಿ ಮೂಡಿ ಬರುತ್ತಿದೆ. ಬ್ಯಾಂಕಿ0ಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು, ಕಾಪುವಿನ ಜನತೆಯ ಪೂರ್ಣ ಆಶೀರ್ವಾದ ಮತ್ತು ಸಹಕಾರ ಸಂಘದ ಮೇಲಿರಲಿ ಎಂದು ಶುಭ ಹಾರೈಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಕುಮಾರಿ ಹರಿಣಾಕ್ಷಿ ದೇವಾಡಿಗರವರು ಮಾತನಾಡಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇತರೆಲ್ಲಾ ಸಹಕಾರಿ ಸಂಘಗಳಿಗೆ ಮಾದರಿಯಾಗಿ ಉನ್ನತವಾಗಿ ಅಭಿವೃದ್ಧಿ ಹೊಂದಲಿ ಎಂದರು. ರೋಟರಿ ಕ್ಲಬ್ ಕಾಪು ಇದರ ಅಧ್ಯಕ್ಷರಾದ ರೋ. ಬಾಲಕೃಷ್ಣ ಎಸ್. ಆಚಾರ್ಯ ಇವರು ಮಾತನಾಡಿ ನಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಉತ್ತಮವಾಗಿ ಜೀವನ ನಡೆಸಲು ನೆಮ್ಮದಿಯ ಆರೋಗ್ಯ ಅವಶ್ಯಕವಾಗಿ ಬೇಕಾಗಿರುತ್ತದೆ. ಇಂತಹ ಆರೋಗ್ಯ ಶಿಬಿರವನ್ನು ನಡೆಸುತ್ತಾ ಬಂದಿರುವ0ತಹ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಜರುಗಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ ರವರು 2025 ನೇ ಸಾಲಿನ ಕ್ಯಾಲೆಂಡರನ್ನು ಬಿಡುಗಡೆಗೊಳಿಸಿದರು..

.. ಈ ಸಂದರ್ಭದಲ್ಲಿ ಕ್ಷೇತ್ರದ ಮ್ಯಾನೇಜರ್ ಶ್ರೀ ಜೆ. ಕಿಶೋರ್ ಮಜಿಲ, ಟ್ರಸ್ಟಿಗಳಾದ ಶ್ರೀ ವಾಮನ್ ಪೂಜಾರಿ, ಶ್ರೀ ವಿಠ್ಠಲ ಪೂಜಾರಿ , ಶ್ರೀ ದಿವ ರಾಜ್ , ಶ್ರೀ ದಿನೇಶ್ ಅಂಚನ್ , ಶ್ರೀ ಜಗದೀಪ್ ಸುವರ್ಣ, ಶ್ರೀ ಚಂದ್ರನಾಥ್ ಅತ್ತಾವರ್ ,ಹಾಗೂ ಮಾಜಿ ಟ್ರಸ್ಟಿಯಾದ ಶ್ರೀ ಮೋಹನ್ ನೆಕ್ಕರೆಮಾರ್, ಮ.ನ.ಪಾ ಸದಸ್ಯರಾದ ಶ್ರೀ ಸಂದೀಪ್ ಗರೋಡಿ, ಮತ್ತು ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೆಶಕರಾದ ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ […]

71ನೇ ಅಖಿಲ ಭಾರತ ಸಹಕಾರ ಸಪ್ತಾಹ 2024 ಇದರ ಪ್ರಯುಕ್ತ ದಿನಾಂಕ 16.11.2024 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.)ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ಸಹಕಾರ ಇಲಾಖೆ ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಶ್ರೀ ಲಕ್ಷ್ಮಣ ಸಂಗಪ್ಪ ಸವದಿ ಯವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ೨೦೨೪ ನೇ ಸಾಲಿನ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು. ಸಂಘದ ಸದಸ್ಯರಿಗೆ ಸಹಕಾರಿ ಸಪ್ತಾಹದ ಅಂಗವಾಗಿ 1000 ದಿನಗಳ ಠೇವಣಿಗಳಿಗೆÂ ಶೇ. 10.50 ವರಗೆ ಆಕರ್ಷಕ ಬಡ್ಡಿ ಯೋಜನೆಯನ್ನು ಜಾರಿಗೊಳಿಸಿದೆ. ಜೊತೆಗೆ ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 6262/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲ ನೀಡಲಾಗುವುದೆಂದು ತಿಳಿಸಿದರು.