ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ(ನಿ.) ಮುಲ್ಕಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರವು ಲಯನ್ಸ್ ಕ್ಲಬ್ ಮುಲ್ಕಿ MJF, ಲಿಯೋ ಕ್ಲಬ್ ಮುಲ್ಕಿ ಹಾಗೂ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ಫಯರ್ ಇವರ ಜಂಟಿ ಸಹಯೋಗದೊಂದಿಗೆ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ, ಇವರ ನುರಿತ ತಜ್ಞ ವೈದ್ಯರ ತಂಡದೊ0ದಿಗೆ ಶಾಖೆಯ ಆವರಣದಲ್ಲಿ ಜರುಗಿತು.

ಈ ಕಾರ್ಯಕ್ರಮವನ್ನು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷರಾದ ಶ್ರೀ ಸತೀಶ್ ಅಂಚನ್‌ರವರು ಉದ್ಘಾಟಿಸಿ ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವಿವಿಧ ಸಂಘ ಸಂಸ್ಥೆಗಳೊAದಿಗೆ ಸೇರಿ ನಡೆಸುವ ಈ ಶಿಬಿರವು ಮುಲ್ಕಿ ಪರಿಸರದ ಜನರಿಗೆ ಆರೋಗ್ಯದ ಉತ್ತಮ ಸೇವೆ ನೀಡುವಂತಾಗಲಿ ಎಂದರು. ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ಮುಖ್ಯಸ್ಥರಾದ ಡಾ|| ರೇಖಾ ಪಿ ಶೆಣೈರವರು ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘದೊAದಿಗೆ ನಿರಂತರ ಶಿಬಿರ ನಡೆಸುತ್ತಿದ್ದೇವೆ. ದಕ್ಷಿಣ ಕನ್ನಡ ಜಿಲ್ಲೆಯು […]