ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಕಾಪು ಶಾಖೆ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ರೋಟರಿ ಕ್ಲಬ್ (ರಿ.) ಕಾಪು ಹಾಗೂ ಸುಜ್ಞಾನ ಚಾರಿಟೇಬಲ್ ಟ್ರಸ್ಟ್ (ರಿ.) ಕಾಪು ಇವರ ಜಂಟಿ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಹಾಗೂ ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು ಇವರ ನುರಿತ ವೈದ್ಯರ ತಂಡದವರಿ0ದ ಉಚಿತ ವೈದ್ಯಕೀಯ ಹಾಗೂ ನೇತ್ರ ತಪಾಸಣೆ ಶಿಬಿರವು ಕಾಪು ಹೊಸಮಾರಿಗುಡಿ ದೇವಸ್ಥಾನದ ಹತ್ತಿರದ ವಿವೇಕ್ ಕಾಂಪ್ಲೆಕ್ಸ್ ನಲ್ಲಿ ಜರುಗಿತು.

ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ ಕುಮಾರ್ ಸೊರಕೆ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಜನರು ಆರೊಗ್ಯದ ಬಗ್ಗೆ ಕಾಳಜಿ ವಹಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಬ್ಯಾಂಕಿAಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು, ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಲ್ಕಿ ಶಾಖೆಯ ವತಿಯಿಂದ ಲಯನ್ಸ್ ಕ್ಲಬ್ ಬಪ್ಪನಾಡು ಇ£iï್ಸಫಯರ್ ಹಾಗೂ ಶ್ರೀ ರಾಮ ಸೇವಾ ಮಂಡಳಿ ಕಾರ್ನಾಡು ಮುಲ್ಕಿ ಇವರ ಜಂಟಿ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ನೇತ್ರ ತಪಾಸಣಾ ಶಿಬಿರವು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಎದುರುಗಡೆಯ ನಾಗರಾಜ ಟವರ್ಸ್ನಲ್ಲಿ ಜರುಗಿತು. ಈ ಶಿಬಿರವನ್ನು ಮುಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿಯಾದ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಉದ್ಘಾಟಿಸಿದರು.

ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಈಗಾಗಲೇ ೩೩ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿದ್ದು, ಬಹಳಷ್ಟು ಜನರಿಗೆ ಉದ್ಯೋಗವಕಾಶವನ್ನು ಒದಗಿಸಿ ಕೊಟ್ಟಿದೆ, ಪಿಗ್ಮಿ ಸಂಗ್ರಾಹಕರಿಗೂ ವಿಮಾ ಸೇವಾ ಸೌಲಭ್ಯವನ್ನು ಒದಗಿಸಿಕೊಟ್ಟಿದೆ. ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಉಚಿತ ವೈದ್ಯಕೀಯ […]

ತುಳುನಾಡ ರಕ್ಷಣಾ ವೇದಿಕೆ ಹಾಗೂ ತುಳುನಾಡ ಸೂರ್ಯ ಪತ್ರಿಕೆ ವತಿಯಿಂದ ಸಹಕಾರ ಸಪ್ತಾಹ-2025ರ ಅಂಗವಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷರಾದ ಶ್ರೀ ಯೋಗಿಶ್ ಶೆಟ್ಟಿ ಜಪ್ಪು ರವರ ಅಧ್ಯಕ್ಷತೆಯಲ್ಲಿ ಮಂಗಳೂರಿನ ಉರ್ವಸ್ಟೋರ್‌ನ ತುಳುಭವನದ ಸಿರಿ ಚಾವಡಿಯಲ್ಲಿ ಜರುಗಿತು.

ಸಮಾರಂಭದಲ್ಲಿ ದಿವ್ಯ ಸಾನ್ನಿದ್ಯವನ್ನು ವಹಿಸಿದ್ದ ಮೂಡಬಿದಿರೆ ಜೈನ ಮಠದ ಜಗದ್ಗುರು ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಆಶೀರ್ವಚನವನ್ನು ನೀಡುತ್ತಾ “ಮಾನವ ಆದಿಯಿಂದಲೂ ಹುಟ್ಟಿನಾರಭ್ಯ ಸಹಕಾರ ತತ್ವದಿಂದಲೇ ಬದುಕನ್ನು ಬಹುವಾಗಿ ಸಿರಿವಂತಗೊಳಿಸಿದವ. ಅದರ ಮುಂದುವರಿದ ಭಾಗವೇ ಇಂದಿನ ಸಹಕಾರ ಸಂಘಗಳ ಸೇವಾ ಭಾವ, ಮನುಕುಲೋದ್ದಾರಕ್ಕೆ ಸಹಕಾರಿ ಸಂಘಗಳು ಮತ್ತಷ್ಟೂ ಹಿರಿದಾದ ಪಾಲನ್ನು ಸಲ್ಲಿಸುವಂತಾಗಲಿ. ಈ ನಿಟ್ಟಿನಲ್ಲಿ ಇವತ್ತಿನ ಈ ಅರ್ಥಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿರುವ ತುಳುನಾಡ ರಕ್ಷಣಾ ವೇದಿಕೆಯ ಕಾರ್ಯವು ಶ್ಲಾಘನೀಯ” ಎಂದು ಹರಸಿದರು. ಮಾಡೂರಿನ ಶಿವ ದುರ್ಗಾಂಭ […]

ಅಖಿಲ ಭಾರತ ಸಹಕಾರ ಸಪ್ತಾಹ 2025 ಇದರ ಪ್ರಯುಕ್ತ ದಿನಾಂಕ 16.11.2025 ರಂದು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ (ನಿ.) ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (.) ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ನಿ.), ಮಂಗಳೂರು ಇದರ ನೇತ್ರತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ (ನಿ.) ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ನಿ.), ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ (ರಿ.), ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಸೌಹಾರ್ದ ಸಹಕಾರ ಸಂಘಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ ಮಂಗಳೂರಿನಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಅಂಗವಾಗಿ ಉತ್ತಮ ಸಹಕಾರ ಸಂಘಗಳಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜರುಗಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ರವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025 ನೇ ಸಾಲಿನ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ನೀಡಿ ಗೌರವಿಸಿದರು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಧಾನ ಕಚೇರಿ ಆತ್ಮಶಕ್ತಿ ಸೌಧದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಪಂಜಿಮೊಗರು ಶಾಖೆಯ ಒಂಬತ್ತನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಪಂಜಿಮೊಗರು ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ, ಶ್ರೀ ಜಗದೀಶ್ ಸನಿಲ್, ಶ್ರೀ ಶ್ರೀಧರ್ ಪೂಜಾರಿ, ಶ್ರೀ ದಯಾನಂದ ಕುಮಾರ್, ಶ್ರೀ ಗಣೇಶ್ ಸನಿಲ್ ಹಾಗೂ ಶ್ರೀಮತಿ ಮೋಲಿ ಫೇರ್ನಾಂಡಿಸ್ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಕನಕದಾಸ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿ0ಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿ0ಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಹಾಗೂ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು”. ಸದಸ್ಯರಾದ ಶ್ರೀಮತಿ ಫಾತಿಮತುಲ್ ಜೋಹರ ರವರು ಮಾತನಾಡಿ “ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸುರತ್ಕಲ್ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಸತೀಶ್‌ಚಂದ್ರ, ಶ್ರೀ ಜಗದೀಶ ಕೋಟ್ಯಾನ್ , ಶ್ರೀ ಮಾಧವ ಎಮ್ ಅಂಚನ್, ಶ್ರೀ ಲಕ್ಷಣ್ ಸಾಲ್ಯಾನ್, ಶ್ರೀ ಚಂದ್ರಶೇಖರ್ ನಲಿಲು ರೈ , ಶ್ರೀಮತಿ ಸೀತಾಲಕ್ಷಿ ಕುಳಾಯಿ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.

ಸಂಘದ ಸದಸ್ಯರಾದ ಶ್ರೀ ಮಾಧವ ಎಮ್ ಅಂಚನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ನೇತ್ರತ್ವದಲ್ಲಿ ಉತ್ತಮ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು, ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ. ಸಂಘವು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಶುಭ ಹಾರೈಸಿದರು. ಸದಸ್ಯರಾದ ಶ್ರೀ ಚಂದ್ರಶೇಖರ್ ನಲಿಲು ರೈ ರವರು ಮಾತನಾಡಿ “ಸುರತ್ಕಲ್ ಶಾಖೆಯು ಇತ್ತೀಚಿಗೆ ನವೀಕೃತ ಹಾಗೂ ಸುಸಜ್ಜಿತ ಹವಾನಿಯಂತ್ರಣ ಕೊಠಡಿಗೆ ಸ್ಥಳಾಂತರ ಗೊಂಡಿರುವುದಕ್ಕೆ ಸಂತೋಷ ವ್ಯಕ್ತಪಡಿಸಿ, […]