
ಸಂಘದ ಸದಸ್ಯರಾದ ಶ್ರೀ ಕನಕದಾಸ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿ0ಗ್ ಸೇವೆಯ ಜೊತೆಯಲ್ಲಿ ಶೀಘ್ರಗತಿಯಲ್ಲಿ ಇ-ಸ್ಟಾಂಪಿ0ಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಹಾಗೂ ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು”.
ಸದಸ್ಯರಾದ ಶ್ರೀಮತಿ ಫಾತಿಮತುಲ್ ಜೋಹರ ರವರು ಮಾತನಾಡಿ “ಸಂಘದ ಸಿಬ್ಬಂದಿಗಳ ನಗುಮೊಗದ ಗ್ರಾಹಕ ಸ್ನೇಹಿ ಸೇವೆಯಿಂದಾಗಿ ಸಂಘವು ಅಭಿವೃದ್ದಿ ಹೊಂದುತ್ತಿದೆ ಎಂದು ಸಂತೋಷ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ಪಂಜಿಮೊಗರು ಶಾಖೆಯು 9ನೇ ವರ್ಷದ ಸಂಭ್ರಮದೊ0ದಿಗೆ ಮುನ್ನಡೆಯುತ್ತಿದೆ. ಠೇವಣಿ ಸಂಗ್ರಹಣೆಯೊAದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ. ಸಿಬ್ಬಂದಿ ವರ್ಗದವರ ಕಾರ್ಯ ವೈಖರಿ, ಗ್ರಾಹಕರ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಕಳೆದ ಮಾರ್ಚ್ ವರ್ಷಾಂತ್ಯಕ್ಕೆ 182 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ನೀಡಿದೆ. ಈಗಾಗಲೇ ಸಂಘವು ಈ ಸಾಲಿನ ಅರ್ಧ ಆರ್ಥಿಕ ವರ್ಷದಲ್ಲಿ 153 ಕೋಟಿಗೂ ಮಿಕ್ಕಿ ಚಿನ್ನಾಭರಣ ಸಾಲವನ್ನು ವಿತರಿಸಿದ್ದು, ಚಿನ್ನಾಭರಣ ಸಾಲ ನೀಡುವಿಕೆಯಲ್ಲಿ ಉತ್ತಮ ಪ್ರಗತಿಯನ್ನು ಸಾಧಿಸಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ, ಸೇವೆ ನೀಡುತ್ತಿದ್ದೇವೆ. ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ ಹಾಗೂ ಸಂಘದ ಎಲ್ಲಾ ಶಾಖೆಯಲ್ಲಿ ಇ ಸ್ಟಾ÷್ಯಂಪ್ ಸೇವಾ ಸೌಲಭ್ಯವನ್ನು ಗ್ರಾಹಕರಿಗೆ ನೀಡುತ್ತಿದೆ. ಸಂಘದಲ್ಲಿ ಲಭ್ಯವಿರುವ ಪ್ರತಿಯೊಂದು ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ, ಶ್ರೀಮತಿ ವಿದ್ಯಾಶ್ರೀ ಯವರು ಸ್ವಾಗತಿಸಿ, ಕುಮಾರಿ ಗೌತಮಿ ಯವರು ವಂದಿಸಿದರು. ಪ್ರಭಾರ ಶಾಖಾಧಿಕಾರಿ ಶ್ರೀಮತಿ ಮಾಧವಿ ರವರು ಕಾರ್ಯಕ್ರಮ ನಿರೂಪಿಸಿದರು.