ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮುಲ್ಕಿ ಶಾಖೆಯ ವತಿಯಿಂದ ಲಯನ್ಸ್ ಕ್ಲಬ್ ಬಪ್ಪನಾಡು ಇ£iï್ಸಫಯರ್ ಹಾಗೂ ಶ್ರೀ ರಾಮ ಸೇವಾ ಮಂಡಳಿ ಕಾರ್ನಾಡು ಮುಲ್ಕಿ ಇವರ ಜಂಟಿ ಸಹಯೋಗದೊಂದಿಗೆ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇವರ ನುರಿತ ತಜ್ಞ ವೈದ್ಯ ತಂಡದವರಿ0ದ ಉಚಿತ ನೇತ್ರ ತಪಾಸಣಾ ಶಿಬಿರವು ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘದ ಎದುರುಗಡೆಯ ನಾಗರಾಜ ಟವರ್ಸ್ನಲ್ಲಿ ಜರುಗಿತು. ಈ ಶಿಬಿರವನ್ನು ಮುಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿಯಾದ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಉದ್ಘಾಟಿಸಿದರು.


ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಮುಲ್ಕಿ ನಗರ ಪಂಚಾಯತ್‌ನ ಮಾಜಿ ಮುಖ್ಯಾಧಿಕಾರಿ ಹಾಗೂ ಹೊಸ ಅಂಗಣ ಪತ್ರಿಕೆಯ ಸಂಪಾದಕರಾದ ಶ್ರೀ ಹರಿಶ್ಚಂದ್ರ ಪಿ ಸಾಲ್ಯಾನ್ ರವರು ಮಾತನಾಡಿ, “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಈಗಾಗಲೇ ೩೩ಕ್ಕೂ ಮಿಕ್ಕಿ ಶಾಖೆಗಳನ್ನು ಹೊಂದಿದ್ದು, ಬಹಳಷ್ಟು ಜನರಿಗೆ ಉದ್ಯೋಗವಕಾಶವನ್ನು ಒದಗಿಸಿ ಕೊಟ್ಟಿದೆ, ಪಿಗ್ಮಿ ಸಂಗ್ರಾಹಕರಿಗೂ ವಿಮಾ ಸೇವಾ ಸೌಲಭ್ಯವನ್ನು ಒದಗಿಸಿಕೊಟ್ಟಿದೆ. ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಗಳನ್ನು ಹಮ್ಮಿಕೊಳ್ಳುತ್ತಾ, ಸಂಘದ ಸದಸ್ಯರ ಜೊತೆ ಸಾರ್ವಜನಿಕರೂ ಕೂಡ ಇದರ ಉಪಯೋಗ ಪಡೆಯುವಂತೆ ಮಾಡುತ್ತಿರುವುದು ಶ್ಲಾಘನೀಯ” ಎಂದರು.
ಲಯನ್ಸ್ ಕ್ಲಬ್ ಬಪ್ಪನಾಡು ಇ£iï್ಸಫಯರ್ ಇದರ ಅಧ್ಯಕ್ಷರಾದ ಲಯನ್ ಅನಿಲ್ ಕುಮಾರ್ ರವರು ಮಾತನಾಡಿ “ಲಯನ್ಸ್ ಕ್ಲಬ್ ಬಪ್ಪನಾಡು ಇ£iï್ಸಫಯರ್ ವತಿಯಿಂದ ಈಗಾಗಲೇ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು, ಈ ಬಾರಿಯು ಕೂಡ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದೊAದಿಗೆ ಗುಣಮಟ್ಟದ ಆರೋಗ್ಯ ಶಿಬಿರಗಳನ್ನು ಆಯೋಜಿಸಲು ಕೈ ಜೋಡಿಸಿರುವುದರ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ಶ್ರೀ ರಾಮ ಸೇವಾ ಮಂಡಳಿ ಕಾರ್ನಾಡು ಮುಲ್ಕಿ ಇದರ ಅಧ್ಯಕ್ಷರಾದ ಶ್ರೀ ಭಾಸ್ಕರ ಶೆಟ್ಟಿಗಾರ್ ರವರು ಮಾತನಾಡಿ “ಸಾರ್ವಜನಿಕರಿಗೆ ಸೇವೆ ಹಾಗೂ ಸಹಾಯ ಮಾಡುವ ಉದ್ದೇಶದಿಂದ ತಮ್ಮೊಂದಿಗೆ ಕೆಲವು ಸದಸ್ಯರನ್ನು ಒಟ್ಟುಗೂಡಿಸಿ ಈ ಬಾರಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದೊAದಿಗೆ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಕಾರ್ಯವನ್ನು ಮಾಡಲು ಶ್ರೀ ರಾಮ ಸೇವಾ ಮಂಡಳಿ ರವರಿಗೆ ಅವಕಾಶ ನೀಡರುವುದಕ್ಕೆ ಕೃತಜ್ಞತೆ ಸಲ್ಲಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಈ ಶಿಬಿರವು ಸಾರ್ವಜನಿಕರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಮುಲ್ಕಿಯಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇ£iï್ಸಫಯರ್ ಪ್ರತಿ ಬಾರಿಯೂ ನಮ್ಮೊಂದಿಗೆ ಸಾಮಾಜಿಕ ಸೇವೆಯಲ್ಲಿ ಕೈಜೋಡಿಸುತ್ತಾ ಬಂದಿದ್ದು, ಈ ಬಾರಿ ಶ್ರೀ ರಾಮ ಸೇವಾ ಮಂಡಳಿಯೂ ನಮ್ಮೊಂದಿಗೆ ಈ ಶಿಬಿರ ಆಯೋಜನೆಗೆ ಸಹಕಾರ ನೀಡಿದೆ. ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕಳೆದ 10 ವರ್ಷಗಳಿಂದ ನಿರಂತರವಾಗಿ ಆರೋಗ್ಯ ಶಿಬಿರ ನಡೆಯುತ್ತಿದ್ದು ಇದು ಸಂಘದ ೯೩ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ ಹಾಗೂ ಮುಂಬರುವ ದಿನಗಳಲ್ಲಿ 100ನೇ ವೈದ್ಯಕೀಯ ಶಿಬಿರವನ್ನು ವ್ಯವಸ್ಥಿತವಾಗಿ ಬಹಳ ದೊಡ್ಡ ಮಟ್ಟದಲ್ಲಿ ಆಯೋಜನೆ ಮಾಡಲಾಗುವುದು. ಶಿಬಿರಾರ್ಥಿಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಕಾರುಣ್ಯ ಟ್ರಾವೆಲ್ಸ್ನ ಮಾಲಕರಾದ ಶ್ರೀ ಅನಿಲ್ ಕುಮಾರ್ ಕೊಲಕಾಡಿ, ಶ್ರೀ ರಾಮ ಸೇವಾ ಮಂಡಳಿ ಕಾರ್ನಾಡು ಮುಲ್ಕಿ ಇದರ ಕಾರ್ಯದರ್ಶಿಯಾದ ಶ್ರೀ ಕೇಶವ ಸುವರ್ಣ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯರಾದ ಡಾ. ಮೇಘನಾ, ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಶ್ರೀ ಮೋಹನ್ ದಾಸ್, ಎಲ್ಲಾ ಸಂಘ-ಸ0ಸ್ಥೆಗಳ ಪಧಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು ೧೫೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ನೇತ್ರ ತಪಾಸಣೆಯನ್ನು ನಡೆಸಲಾಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿ ಶ್ರೀಮತಿ ಭಾಗ್ಯಶ್ರೀ ರವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ರಮ್ಯಾ ರವರು ವಂದಿಸಿದರು. ಶಾಖಾಧಿಕಾರಿಯಾದ ಶ್ರೀಮತಿ ಚೈತ್ರಾ ದಿನೇಶ್ ರವರು ಕಾರ್ಯಕ್ರಮ ನಿರೂಪಿಸಿದರು.