
ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಶ್ರೀ ವಿನಯ ಕುಮಾರ್ ಸೊರಕೆ ರವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ “ಜನರು ಆರೊಗ್ಯದ ಬಗ್ಗೆ ಕಾಳಜಿ ವಹಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಬ್ಯಾಂಕಿAಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು, ಸಂಸ್ಥೆಯು ಇನ್ನೂ ಹೆಚ್ಚಿನ ಅಭಿವೃದ್ದಿ ಪಥದಲ್ಲಿ ಸಾಗಲಿ, ಸಾಮಾಜಿಕ ಸೇವೆ ನಿರಂತರವಾಗಿ ಮುಂದುವರಿಯಲಿ” ಎಂದು ಶುಭ ಹಾರೈಸಿದರು.
ರೋಟರಿ ಕ್ಲಬ್ (ರಿ.) ಕಾಪು ಇದರ ಮಾಜಿ ಅಧ್ಯಕ್ಷರಾದ ರೋ. ಶ್ರೀನಿವಾಸ್ ರಾವ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆಯೋಜಿಸಿರುವ ಉಚಿತ ವೈದ್ಯಕೀಯಹಾಗೂ ನೇತ್ರ ತಪಾಸಣೆ ಶಿಬಿರದಲ್ಲಿ ಕೈ ಜೋಡಿಸಿರುವುದು ಸಂತಸವಾಗಿದೆ. ಮುಂದೆಯೂ ಇಂತಹ ಜನಪರ ಕಾರ್ಯದಲ್ಲಿ ಸಂಘದೊAದಿಗೆ ಸದಾ ಸಹಕರಿಸುತ್ತೇವೆ” ಎಂದು ಹೇಳಿದರು.
ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು ಇದರ ವೈದ್ಯರಾದ ಡಾ. ಸದಾನಂದ ಎಲ್ ಭಟ್ ಇವರು ಮಾತನಾಡಿ “ನಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಉತ್ತಮವಾಗಿ ಜೀವನ ನಡೆಸಲು ನೆಮ್ಮದಿಯ ಆರೋಗ್ಯ ಅವಶ್ಯಕವಾಗಿ ಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಅನಾರೋಗ್ಯವನ್ನು ಪತ್ತೆ ಹಚ್ಚುವುದು ತುಂಬಾ ಅವಶ್ಯಕ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಾಪುವಿನಲ್ಲಿ ೯೪ನೇ ಶಿಬಿರ ನಡೆಸುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ, ಜನಸಾಮಾನ್ಯರ ಆರೋಗ್ಯದ ಕಾಳಜಿ ವಹಿಸಿ, ಎಲ್ಲಾ ಶಾಖೆಗಳಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿರುವುದಕ್ಕೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.
ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯರಾದ ಡಾ. ಪ್ರತಿಭಾ ರವರು ಮಾತನಾಡಿ “ಕಣ್ಣಿನ ಆರೋಗ್ಯ, ತಪಾಸಣೆ ಹಾಗೂ ಶಸ್ತç ಚಿಕಿತ್ಸೆಯ ಬಗ್ಗೆ ವಿವರಿಸಿದರು. ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕನ್ನಡಕ್ಕ ಹಾಗೂ ಕಣ್ಣಿನ ಪೊರೆಯ ಶಸ್ತçಚಿಕಿತ್ಸೆಯನ್ನು ಮಾಡಲಾಗುವುದು. ಶಿಬಿರಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇಲ್ಲಿಯವರೆಗೆ ೯೪ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಅದೇ ರೀತಿ ಇಂದಿನ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ , ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ಕಾಪು, ಇದರ ಆಡಳಿತ ವರ್ಗ, ವೈದ್ಯರು ಹಾಗೂ ಸಿಬ್ಬಂದಿ ವರ್ಗದವರಿಗೂ ಹಾಗೂ ಎಲ್ಲಾ ಸಂಸ್ಥೆಯ ಪದಾದಿಕಾರಿಗಳಿಗೂ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮನಾಥ್ ಸನಿಲ್, ಶ್ರೀ ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ಕಾಪು ಪುರಸಭೆಯ ಸದಸ್ಯರಾದ ಶ್ರೀಮತಿ ಸರಿತಾ, ಕಾಪು ಬಿಲ್ಲವ ಸಹಾಯಕ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಮಾಧವ ಪಾಲನ್, ಸುಜ್ಞಾನ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಿದ್ಯಾದರ್ ಪುರಾಣಿಕ್, ನೇತ್ರ ಜ್ಯೋತಿ ಚ್ಯಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ಪಿ.ಆರ್.ಓ ಆದ ಶ್ರೀ ಮೋಹನ್, ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್‌ನ ವೈದ್ಯರಾದ ಡಾ. ಸುಷ್ಮಾ ಎಸ್. ಭಟ್, ರೋಟರಿ ಕ್ಲಬ್ (ರಿ.) ಕಾಪು ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 150ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ, ನೇತ್ರ ತಪಾಸಣೆ, ಉಚಿತ ಕನ್ನಡಕ ವಿತರಣೆಯನ್ನು ನಡೆಸಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿಯಾದ ಕು. ಚೈತ್ರ ಎ ರವರು ಸ್ವಾಗತಿಸಿ, ಸಿಬ್ಬಂದಿಯಾದ ಶ್ರೀಮತಿ ಅಶ್ವಿನಿ ಯವರು ಧನ್ಯವಾದವಿತ್ತರು. ಕಾರ್ಯಕ್ರಮದ ನಿರೂಪಣೆಯನ್ನು ಶಾಖಾಧಿಕಾರಿಯಾದ ಶ್ರೀಮತಿ ಚೈತ್ರ ರವರು ನಿರ್ವಹಿಸಿದರು.