ಈ ಕಾರ್ಯಕ್ರಮವನ್ನು ಶ್ರೀ ಬ್ರಹ್ಮಶ್ರೀ ಬೈದರ್ಕಳ ಗರೋಡಿ ಕ್ಷೇತ್ರ, ಕಂಕನಾಡಿ, ಗರೋಡಿ ಇದರ ಮೋಕ್ತಸರರಾದ ಶ್ರೀ ಚಂದ್ರನಾಥ್ ಅತ್ತಾವರ ರವರು ಉದ್ಘಾಟಿಸಿ ಮಾತನಾಡಿ, “ಉತ್ತಮ ಆರೋಗ್ಯವನ್ನು ನಮಗೆ ದೇವರು ಕರುಣಿಸುತ್ತಾರೆ ಎಂಬುದು ನಮ್ಮ ನಂಬಿಕೆ. ಆದರೆ ಈ ಆರೋಗ್ಯವನ್ನು ಕಾಪಾಡಿಕೊಂಡು ಬರುವಲ್ಲಿ ನಮ್ಮ ಪಾತ್ರ ಬಹಳ ಮುಖ್ಯವಾಗಿದೆ. ಉತ್ತಮವಾದ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು ನಮ್ಮ ಜವಾಬ್ದಾರಿ ಆಗಿರುವುದರಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಇಂತಹ ಶಿಬಿರಗಳು ಆಯೋಜಿಸುತ್ತಿರುವುದು ತುಂಬಾ ಪ್ರಯೋಜನಕಾರಿಯಾಗಿದೆ. ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆಯಿರಿ ಎಂದು ತಿಳಿಸಿದರು.
ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯರಾದ ಶ್ರೀಮತಿ ವೀಣಾ ಮಂಗಳ ರವರು ಮಾತಾನಾಡಿ “ಈ ಕಾರ್ಯಕ್ರಮದ ಉಪಯೋಗವನ್ನು ಎಲ್ಲರು ಪಡೆಯಬೇಕು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಹಾಗೂ ಸಹಭಾಗಿ ಸಂಸ್ಥೆಯವರು ಒಟ್ಟು ಸೇರಿ ನಮ್ಮೂರ ಜನರ ಆರೋಗ್ಯದ ಸಮಸ್ಯೆಗಳಿಗೆ ಹತ್ತಿರದಲ್ಲೇ ಪರಿಹಾರ ಸಿಗಬೇಕೆನ್ನುವ ಉದ್ದೇಶದಲ್ಲಿ ಆಯೋಜಿಸುತ್ತಿರುವ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ಶ್ಲಾಘನೀಯ” ಎಂದು ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ, ಜನರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬರುವ ಉದ್ದೇಶಕ್ಕಾಗಿ, ಜನರ ಆರೋಗ್ಯದ ದೃಷ್ಟಿಯಲ್ಲಿ ಎಲ್ಲಾ ಕಡೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದೇವೆ, ನಮ್ಮ ಆರೋಗ್ಯದ ಬಗ್ಗೆ ಮುಂಜಾಗೃತ ವಹಿಸಿದರೆ ನಮ್ಮ ಆರೋಗ್ಯ ಒಳ್ಳೆಯ ರೀತಿಯಲ್ಲಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಇನ್ನೂ ಇಂತಹ ಶಿಬಿರಗಳನ್ನು ಆಯೋಜಿಸಲು ಸಹಕಾರವನ್ನು ಕೋರಿದರು. ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ವೈದ್ಯರು, ಕೈ ಜೋಡಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಹಾಗೂ ಸಿಬ್ಬಂದಿ ವರ್ಗದವರಿಗೂ ಕೃತಜ್ನತೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಅಧ್ಯಕ್ಷರಾದ ಶ್ರೀ ಮನೋಜ್ ಪೂಜಾರಿ ರವರು ವಹಿಸಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಗೋಪಾಲ್ ಎಮ್., ಪಿಲಿಚಾಮುಂಡಿ ಕ್ಷೇತ್ರ , ಪಿಲಿಚಂಡಿ ಪಾದೆ ತಂದೋಳಿಗೆ ಇದರ ಅಧ್ಯಕ್ಷರಾದ ಶ್ರೀ ಹರಿಶ್ಚಂದ್ರ ತಂದೋಳಿಗೆ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸತೀಶ್ , ಶ್ರೀನಿವಾಸ್ ಇನ್ಸ್ಸ್ಟಿಟ್ಯೂಟ್ ಅಫ್ ಡೆಂಟಲ್ ಸಾಯನ್ಸ್ , ಮುಕ್ಕ , ಸುರತ್ಕಲ್ ಇಲ್ಲಿನ ವೈದ್ಯರಾದ ಡಾ| ಆದ್ರಾ ಮತ್ತು ಮಂಗಳ ಕಾಲೇಜು , ಮಂಗಳ ಆಸ್ಪತ್ರೆ ಮತ್ತು ಮಂಗಳ ಕಿಡ್ನಿ ಫೌಂಡೇಶನ್ , ಕದ್ರಿ ಮಂಗಳೂರು ಇಲ್ಲಿನ ಎಂ.ಎಸ್.ಡಬ್ಲೂ÷್ಯ ವಿದ್ಯಾರ್ಥಿ ಸುಷ್ಮಾ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಪದಾಧಿಕಾರಿಗಳು ಮತ್ತಿತ್ತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೧೧೦ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ನೇತ್ರ ತಪಾಸಣಾ, ದಂತ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಹಾಗೂ ಉಚಿತ ಔಷಧಿ ವಿತರಣೆಯನ್ನು ನಡೆಸಲಾಯಿತು ಹಾಗೂ ಅಗತ್ಯವುಳ್ಳವರಿಗೆ ಉಚಿತ ಕನ್ನಡಕ ವಿತರಣೆ ಯನ್ನು ಮಾಡಲಾಯಿತು.
ಈ ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಚಂದ್ರಹಾಸ್ ಕಟ್ಟಪುಣಿ ಯವರು ಸ್ವಾಗತಿಸಿ, ಕೋಶಾಧಿಕಾರಿ ಶ್ರೀ ಚಿತಾಕ್ಷ ಪೂಜಾರಿ ಯವರು ವಂದಿಸಿದರು, ಸಂಘದ ಸದಸ್ಯರಾದ ಶ್ರೀ ಅಶೋಕ್ ತಂದೋಳಿಗೆ ಯವರು ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.