ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಛೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಸಾಮರಸ್ಯ ಬಳಗ, ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಮಹಿಳಾ ದಿನಾಚರಣೆಯಂದು ಮಾತ್ರ ಮಹಿಳೆಯರನ್ನು ಗೌರವಿಸುವುದಲ್ಲ ದಿನನಿತ್ಯ ಮಹಿಳೆಯನ್ನು ಗೌರವದಿಂದ ಕಾಣಬೇಕು. ಮಹಿಳೆಯರು ತೊಂದರೆಯಲ್ಲಿದ್ದ ಸಂದರ್ಭದಲ್ಲಿ ಸ್ಪಂದಿಸಿದಾಗ ಮಾತ್ರ ಮಹಿಳಾ ದಿನಾಚರಣೆಯ ಅರ್ಥಪೂರ್ಣವಾಗುತ್ತದೆ. ಸಹಕಾರಿ ಸಂಘದಲ್ಲಿ ೯೫% ಮಹಿಳೆಯರಿಗೆ ಉದ್ಯೋಗ ನೀಡಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದು ಮಹಿಳೆಯರಿಗೆ ನೀಡಿದ ಗೌರವವಾಗಿದೆ” ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾದ ನ್ಯಾಯವಾದಿಗಳು ಹಾಗೂ ಪದವು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಮನಾ ಶರಣ್ ರವರು ಮಾತನಾಡಿ “ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಉದ್ಯೋಗದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಈ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೂಡ ಮಹಿಳೆಯೇ ಆಗಿದ್ದಾರೆ. ಮಹಿಳೆಯರು ಉನ್ನತ ಹುದ್ದೆಯನ್ನು ಅಲಂಕರಿಸುವುದು ತುಂಬಾ ಕಡಿಮೆ. ಆದರೆ ಆತ್ಮಶಕ್ತಿ ಸಹಕಾರಿ ಸಂಘದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ÷್ಯ ನೀಡಿರುವುದು ಶ್ಲಾಘನೀಯ. ಸಹಕಾರಿ ಚುನಾವಣೆಯಲ್ಲಿ ಮಹಿಳೆಯರಿಗೆ ೧೩ ಸೀಟುಗಳಲ್ಲಿ ಎರಡು ಸೀಟು ಮಾತ್ರ ಮೀಸಲಾತಿ ಇದೆ. ಮುಂದಿನ ದಿನಗಳಲ್ಲಿ ಈ ಮೀಸಲಾತಿಯು ೫೦% ಆಗಬೇಕು” ಎಂಬ ಆಶಯವನ್ನು ವ್ಯಕ್ತಪಡಿಸಿದರು
ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದಿರುವ ಸಾಧಕ ಮಹಿಳೆಯರಾದ ಸಾಹಿತಿಗಳು, ಸಮಾಜ ಸೇವಕರು ಹಾಗೂ ನಿವೃತ್ತ ಪ್ರಾಂಶುಪಾಲರಾರ ಶ್ರೀಮತಿ ಶಶಿಲೇಖಾ ಬಿ. ಹಾಗೂ ಪ್ರಾಣಿ ದಯಾಪರರಾದ ಶ್ರೀಮತಿ ಉಷಾ ಸುವರ್ಣ ರವರನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಅತಿಥಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸುವ ಮೂಲಕ ಗೌರವಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸಾಹಿತಿಗಳು, ಸಮಾಜ ಸೇವಕರು ಹಾಗೂ ನಿವೃತ್ತ ಪ್ರಾಂಶುಪಾಲರಾರ ಶ್ರೀಮತಿ ಶಶಿಲೇಖಾ ಬಿ. ರವರು “ಮಹಿಳಾ ದಿನವನ್ನು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು. ಮಹಿಳೆಯರು ಸಿಕ್ಕ ಅವಕಾಶವನ್ನು ಸೂಕ್ತವಾಗಿ ಬಳಸಿಕೊಂಡು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಗೆ ಬರಬೇಕು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಮುಂದಾಳತ್ವದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗವಕಾಶವನ್ನು ನೀಡಿದ್ದು, ಕೇವಲ ಬ್ಯಾಂಕಿAಗ್ ಸೇವೆಗೆ ಸೀಮಿತವಾಗಿರದೇ ಇತರ ಸಮಾಜಮುಖಿ ಚಟುವಟಿಕೆಗಳನ್ನು ವರ್ಷಂಪ್ರತಿ ಮಾಡುತ್ತಾ ಬರುತ್ತಿರುವುದು ಶ್ಲಾಘನೀಯ” ಎಂದರು.
ನAತರ ಮಾತನಾಡಿದ ಪ್ರಾಣಿ ದಯಾಪರರಾದ ಶ್ರೀಮತಿ ಉಷಾ ಸುವರ್ಣ ರವರು “ಇವತ್ತಿನ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವ ಮಹಿಳೆಯರನ್ನು ಗಮನಿಸಿದಾಗ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳೆಯರಿಗೆ ನೀಡುತ್ತಿರುವ ಗೌರವವು ಗೊತ್ತಾಗುತ್ತದೆ. ಈ ಸಂಘದಲ್ಲಿ ದುಡಿಯುವ ವರ್ಗದವರು ಹೆಚ್ಚಿನವರು ಮಹಿಳೆಯರೇ ಆಗಿದ್ದು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಹಿಳೆಯ ಮನೆಯನ್ನು ಬೆಳಗಿಸುವ ಕಾರ್ಯವನ್ನು ಮಾಡುತ್ತಿದೆ. ಮಹಿಳೆಯರು ದಯಾಮಾಯಿಯಾಗಿದ್ದು, ಅಶಕ್ತ ಪ್ರಾಣಿಗಳ ಪಾಲನೆಗಳಲ್ಲೂ ಕೂಡ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು” ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ವರ್ಷಂಪ್ರತಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಾಧಕ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಮೂಲಕ ಆಚರಿಸಿಕೊಂಡು ಬರುತ್ತಿದೆ. ಅದೇ ರೀತಿ ಈ ವರ್ಷವೂ ಕೂಡ ಸಾಧಕ ಮಹಿಳೆಯರಾದ ಸಾಹಿತಿಗಳು, ಸಮಾಜ ಸೇವಕರು ಹಾಗೂ ನಿವೃತ್ತ ಪ್ರಾಂಶುಪಾಲರಾರ ಶ್ರೀಮತಿ ಶಶಿಲೇಖಾ ಬಿ. ಹಾಗೂ ಪ್ರಾಣಿ ದಯಾಪರರಾದ ಶ್ರೀಮತಿ ಉಷಾ ಸುವರ್ಣ ರವರನ್ನು ಗುರುತಿಸಿ ಸನ್ಮಾನಿಸಲು ಸಂಘವು ತುಂಬಾ ಹೆಮ್ಮೆ ಪಡುತ್ತಿದೆ. ಸಂಘವು ಮಹಿಳಾ ಸಬಲೀಕರಣದ ಧ್ಯೇಯದೊಂದಿಗೆ ಶೇ. ೯೫% ರಷ್ಟು ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗವನ್ನು ನೀಡಿದ್ದು, ಮಹಿಳೆಯರು ಜೀವನದಲ್ಲಿ ಉತ್ತಮವಾದ ಸ್ಥಾನವನ್ನು ಇರಬೇಕು ಎಂಬುದು ಸಂಘದ ಆಶಯವಾಗಿದೆ. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ೩೦ ಶಾಖೆಗಳ ಶಾಖಾಧಿಕಾರಿಗಳು ಕೂಡ ಮಹಿಳೆಯರೇ ಆಗಿದ್ದಾರೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಗೋಪಾಲ್ ಎಂ. ಶ್ರೀಮತಿ ಚಂದ್ರಾವತಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ನ ಗೌರವ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಅಧ್ಯಕ್ಷರಾದ ಶ್ರೀ ಗೋಪಾಲ ಪೂಜಾರಿ ವೀರನಗರ, ಜೊತೆ ಕಾರ್ಯದರ್ಶಿ ಶ್ರೀ ವಿಶ್ವನಾಥ ರೆಂಜಾಳ, ಮತ್ತಿತ್ತರರು ಉಪಸ್ಥಿತರಿದ್ದರು.
ಸಂಘದ ಉಳ್ಳಾಲ ಶಾಖೆಯ ಶಾಖಾಧಿಕಾರಿಯಾದ ಶ್ರೀ ಸಚಿನ್ ರವರು ಸ್ವಾಗತಿಸಿ, ಗಂಜಿಮಠ ಶಾಖೆಯ ಶಾಖಾಧಿಕಾರಿಯಾದ ಶ್ರೀ ಸಂದೀಪ್ ರವರು ವಂದಿಸಿದರು. ಸಂಘದ ಸಹಾಯಕ ಪ್ರಬಂಧಕ ಶ್ರೀ ವಿಶ್ವನಾಥ ರವರು ಕಾರ್ಯಕ್ರಮವನ್ನು ನಿರೂಪಿಸಿದರು.