ರೋಟರಿ ಕ್ಲಬ್ ಬಜ್ಪೆಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಶೆಟ್ಟಿ ರವರು ಮಾತನಾಡಿ, “ ಆರೋಗ್ಯವೇ ಭಾಗ್ಯ, ಆರೋಗ್ಯ ಎಲ್ಲರಿಗೂ ಮುಖ್ಯವಾಗಿ ಬೇಕಾಗಿರುವಂತದ್ದು. ಇಂದಿನ ಯುವ ಜನರಿಗೆ ಬಾಹ್ಯ ಸೌಂದರ್ಯ ಕಾಪಾಡಿಕೊಳ್ಳುವ ಬಗ್ಗೆ ಬಹುವಾದ ಕಾಳಜಿ ಇದೆ. ಆದರೆ ಆರೋಗ್ಯವನ್ನು ಕೆಡಿಸುವ ತಿನಿಸುಗಳ ವಿಚಾರಗಳ ಬಗ್ಗೆ ಜಾಗೃತೆ ಬಹಳ ಕಡಿಮೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೆ ಸೀಮಿತವಾಗಿರದೇ, ಸಂಘದ ಸದಸ್ಯರ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಸಂಘದ ಸಮಾಜಮುಖಿ ಕಾರ್ಯಚಟುವಟಿಕೆಗಳು ನಿರಂತರವಾಗಿರಲಿ” ಎಂದು ಶುಭ ಹಾರೈಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜ್ಪೆ, ಕರಂಬಾರು, ಇದರ ಅಧ್ಯಕ್ಷರಾದ ಶ್ರೀ ಶಿವರಾಮ ಪೂಜಾರಿ ರವರು ಮಾತನಾಡಿ “ಬಜ್ಪೆಯಲ್ಲಿ ಕಳೆದ ೧೨ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಿರುವುದು ಈ ಪರಿಸರದ ಜನರಿಗೆ ತುಂಬಾ ಉಪಯುಕ್ತವಾಗಿದೆ” ಎಂದರು.
ಕೆ.ಎA.ಸಿ. ಆಸ್ಪತ್ರೆ ಅತ್ತಾವರದ ವೈದ್ಯರಾದ ಡಾ. ತಾನಿಯಾ ಗೌಡ ರವರು ಮಾತನಾಡಿ “ಇವತ್ತಿನ ಶಿಬಿರದಲ್ಲಿ ಕಣ್ಣಿನ ತಪಾಸಣೆ, ಮಧುಮೇಹ ತಪಾಸಣೆ , ಬಿ. ಪಿ ತಪಾಸಣೆ , ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ-ಮೂಗು, ಗಂಟಲು ತಪಾಸಣೆ ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿರುತ್ತದೆ. ಶಿಬಿರಾರ್ಥಿಗಳು ಇಂತಹ ಶಿಬಿರಗಳಲ್ಲಿ ನಿಯಮಿತವಾಗಿ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ವೃದ್ದಿಸಿಕೊಳ್ಳಬಹುದು” ಎಂದರು.
ಮಣಿಪಾಲ ಕಾಲೇಜ್ ಆ¥s಼ï ಡೆಂಟಲ್ ಸಾಯನ್ಸಸ್ ಮಂಗಳೂರು ಇದರ ದಂತ ವೈದ್ಯರಾದ ಡಾ. ನವ್ಯಾರವರು ಮಾತನಾಡಿ, “ಈ ವೈದ್ಯಕೀಯ ಶಿಬಿರದಲ್ಲಿ ಬಾಯಿ ಮತ್ತು ಹಲ್ಲುಗಳ ಆರೋಗ್ಯ ತಪಾಸಣೆ, ಹುಳುಕು ಹಲ್ಲುಗಳನ್ನು ಭರ್ತಿ ಮಾಡುವುದು, ಹಲ್ಲುಗಳ ಶುಚಿಗೊಳಿಸುವುದು. ಅಲ್ಲದೇ ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಇತರ ವೈದ್ಯಕೀಯ ಸೇವೆಗಳು ಲಭ್ಯವಿದ್ದು, ಶಿಬಿರಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ ೧೪ ವರ್ಷಗಳಿಂದ ಸಂಘದ ಪ್ರತೀ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಾ ಬರುತ್ತಿದ್ದು, ಈ ವೈದ್ಯಕೀಯ ಶಿಬಿರವು ೧೦೪ನೇ ಶಿಬಿರವಾಗಿದ್ದು, ತುಂಬಾ ಜನರು ಇದರ ಸದುಪಯೋಗ ಪಡೆಯುತ್ತಿದ್ದಾರೆ. ಆರೋಗ್ಯದ ಬಗ್ಗೆ ಎಲ್ಲರೂ ಹೆಚ್ಚಿನ ಕಾಳಜಿಯನ್ನು ವಹಿಸಿ, ರೋಗ ಬರುವ ಮೊದಲೇ ನಿಯಮಿತ ಆರೋಗ್ಯ ತಪಾಸಣೆ ಮಾಡುವುದು ಉತ್ತಮ. ಉಚಿತ ವೈಧ್ಯಕೀಂiÀi ಶಿಬಿರವನ್ನು ಯಶಸ್ವಿ ಗೊಳಿಸಲು ಕೈ ಜೋಡಿಸಿರುವ ಎಲ್ಲಾ ಸಂಘ ಸಂಸ್ಥೆಗಳಿಗೆ ಕೃತಜ್ಞತೆಯನ್ನು ತಿಳಿಸಿದರು. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಸಂಘದ ೩೪ನೇ ನೂತನ ಶಾಖೆಯು ಮಂಗಳೂರಿನ ಬೋಳಾರದಲ್ಲಿ ಶುಭಾರಂಭಗೊAಡಿದ್ದು, ಈ ಪ್ರಯಕ್ತ ೧೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೮.೫೦, ೫೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೦೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೫೦, ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ಮುಂದಿನ ತಿಂಗಳಲ್ಲಿ ಸಂಘದ ನೂತನ ೩೫ನೇ ಶಾಖೆಯು ಮೂಡಬಿದ್ರಿಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಮತ್ತಿತರರು ಉಪಸ್ಧಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ರವರು ಸ್ವಾಗತಿಸಿ, ಸಿಬ್ಬಂದಿ ಕುಮಾರಿ ಅನುಜಿತ ರವರು ವಂದಿಸಿದರು. ಬ್ರಹ್ಮಶ್ರೀ ನಾರಾಯಣ ಗುರು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಜೊತೆ ಕಾರ್ಯದರ್ಶಿ ಶ್ರೀ ವಿಶ್ವನಾಥ ರೆಂಜಾಳ ಕಾರ್ಯಕ್ರಮ ನಿರೂಪಿಸಿದರು.