ಸಂಘದ ಸದಸ್ಯರಾದ ಶ್ರೀ ರೋನಾಲ್ಡ್ ಜೆ. ಅಮ್ಮಣ್ಣ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಗ್ರಾಮೀಣ ಪ್ರದೇಶದಲ್ಲಿ ಶಾಖೆಯನ್ನು ತೆರೆದಿರುವುದರಿಂದ ಈ ಭಾಗದ ಜನರಿಗೆ ಉತ್ತಮ ಬ್ಯಾಂಕಿAಗ್ ಸೌಲಭ್ಯಗಳು ದೊರಕಿದಂತಾಗಿದೆ” ಎಂದು ತಿಳಿಸಿದರು.
ಸಂಘದ ಸದಸ್ಯರಾದ ಶ್ರೀ ಶಿವಪ್ಪ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿಗಳು ಅಗತ್ಯ ಸಂದರ್ಭಗಳಲ್ಲಿ ಹಿರಿಯ ಸದಸ್ಯರಿಗೆ ಮನೆಗೆ ಬಂದು ಬ್ಯಾಂಕಿAಗ್ ಸೇವೆಯನ್ನು ನೀಡುತ್ತಿರುವುದು ಶ್ಲಾಘನೀಯ. ಇದರಿಂದ ಹಿರಿಯ ನಾಗರಿಕರಿಗೆ ಇದರಿಂದ ತುಂಬಾ ಪ್ರಯೋಜನವಾಗುತ್ತಿದೆ” ಎಂದು ತಿಳಿಸಿದರು.
ಸಂಘದ ಸದಸ್ಯರಾದ ಶ್ರೀಮತಿ ಸುಮಲತಾ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಇನ್ನಿತರ ಸೇವಾ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಜನ ಸಾಮಾನ್ಯರ ಕಾಳಜಿ ವಹಿಸುವುದರ ಜೊತೆಗೆ ಸಂಘವು ನಿರಂತರವಾಗಿ ಹಮ್ಮಿಕೊಂಡು ಬರುತ್ತಿರುವ ವೈದ್ಯಕೀಯ ಶಿಬಿರಗಳಿಂದ ಹೆಚ್ಚಿನ ಸಾರ್ವಜನಿಕರಿಗೆ ಪ್ರಯೋಜನವಾಗುತ್ತಿದೆ. ಇನ್ನೂ ಹೆಚ್ಚಿನ ಸಮಾಜ ಮುಖಿ ಕಾರ್ಯಗಳನ್ನು ಮಾಡುವಂತಾಗಲಿ ಹಾಗೂ ಈ ಭಾಗದ ಜನರು ಸದುಪಯೋಗ ಪಡೆಯುವಂತಾಗಲಿ” ಎಂದು ತಿಳಿಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದು ೩೫ ಶಾಖೆಯನ್ನು ಹೊಂದಲು ಕಾರಣೀಭೂತವಾಗಿದೆ. ಸಂಘದ ಗ್ರಾಹಕರ ಆರೋಗ್ಯದ ಕಾಳಜಿಯಿಂದ ಆರೋಗ್ಯ ಶಿಬಿರವನ್ನು ನಮ್ಮ ಸಂಘವು ನಿರಂತರವಾಗಿ ಹಮ್ಮಿಕೊಂಡು ಬರುತ್ತಿದೆ. ಸಂಘದಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗ ನೀಡಿದ್ದು, ಇದರಿಂದ ಒಂದು ಮನೆ ಬೆಳಗುವ ಕೆಲಸ ಸಂಘದಿAದ ಆಗುತ್ತಿದೆ ಎಂದು ತಿಳಿಸಿದರು. ಸಂಘವು ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲವು ನೀಡಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ. ಗೆ ಗರಿಷ್ಠ ಮೌಲ್ಯ ರೂ.೧೨,೦೦೦ ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ಲಭ್ಯವಿದ್ದು, ಅದೇ ರೀತಿ ಸಂಘದಲ್ಲಿ ವಿವಿಧ ರೀತಿಯ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ, ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು ಹಾಗೂ ಮೇ ತಿಂಗಳಲ್ಲಿ ಎಲ್ಯಾರ್‌ಪದವು ಶಾಖೆಯಲ್ಲಿ ಆರೋಗ್ಯ ಶಿಬಿರ ನಡೆಯಲ್ಲಿದ್ದು ಎಲ್ಲಾ ಗ್ರಾಹಕರು ಅದರ ಲಾಭ ಪಡೆಯುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯ ಕಾರ್ಯನಿರ್ವಹಣದಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ರವರು ಉಪಸ್ಥಿತಿಯಲ್ಲಿದ್ದರು.
ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಕವಿತಾ ರವರು ಸ್ವಾಗತಿಸಿ, ಶಾಖೆಯ ಶಾಖಾಧಿಕಾರಿಯಾದ ಶ್ರೀ ಕೌಶಿಕ್ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿದರು.