ಸಂಘದ ಸದಸ್ಯರಾದ ಶ್ರೀ ಮಾರಪ್ಪ ಪೂಜಾರಿ ಯವರು ಮಾತನಾಡಿ “ಸಂಘದ ಬೆಳವಣಿಗೆಯನ್ನು ಶ್ಲಾಘಿಸಿದರು ಹಾಗೂ ಆತ್ಮಶಕ್ತಿ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದರ ಮಾಹಿತಿಯನ್ನು ನಾನು ದಿನಂಪ್ರತಿ ಪ್ರತಿಕೆಗಳಲ್ಲಿ ಗಮನಿಸುತ್ತಿದ್ದೇನೆ. ಸಂಘವು ಇನ್ನಷ್ಟು ಸೇವಾ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಿ ಎಂದು ಶುಭ ಹಾರೈಸಿದರು.
ಸಂಘದ ಸದಸ್ಯರಾದ ಶ್ರೀ ನಾಗೇಶ್ ಶೆಣೈ ರವರು ಮಾತನಾಡಿ, “ಸಂಘದ ಸಿಬ್ಬಂದಿಗಳು ನಗುಮೊಗದಿಂದ ಗ್ರಾಹಕರಿಗೆ ಗುಣಮಟ್ಟದ ಬ್ಯಾಂಕಿAಗ್ ಸೇವೆಯನ್ನು ನೀಡುತ್ತಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಸದಸ್ಯರುಗಳಾದ ಶ್ರೀ ಎನ್.ಪಿ ಪೂವಪ್ಪ ರವರು ಮಾತನಾಡಿ, “ಆತ್ಮಶಕ್ತಿ ಸಹಕಾರಿ ಸಂಘವು ಹೆಸರಿಗೆ ತಕ್ಕಂತೆ ಆತ್ಮಸಾಕ್ಷಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲಾ ಸಂದರ್ಭದಲ್ಲಿಯೂ ಕೂಡ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಿದೆ” ಎಂದು ತಿಳಿಸಿದರು.
ಸಂಘದ ಸದಸ್ಯರುಗಳಾದ ಶ್ರೀ ಸುಮನ್ ಕುಮಾರ್ ಕಂದಕ್, ಶ್ರೀ ಬಿ ಸತೀಶ್ ಕುಮಾರ್ ಹಾಗೂ ಶ್ರೀ ಅಶೋಕ್ ಮೊಯ್ಲಿ ರವರು ಶುಭ ಹಾರೈಸಿದರು
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಸಂಘವು ಬೆಳೆದು ಬಂದ ದಾರಿಯ ಬಗ್ಗೆ ಪ್ರಾಸ್ತವಿಕವಾಗಿ ಮಾತನಾಡಿŒ, “ಮಹಿಳಾ ಸಬಲೀಕರಣದ ಉದ್ದೇಶದಿಂದ ಸಂಘದಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಗಳಿಗೆ ಉದ್ಯೋಗವಕಾಶವನ್ನು ನೀಡಲಾಗಿದೆ. ಸಂಘವು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಕರಂಗಲ್ಪಾಡಿ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಸೀತಾರಾಮ್ ಎನ್, ಶ್ರೀ ಗೋಪಾಲ್ ಎಮ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
ಸಂಘದ ಕರಂಗಲ್ಪಾಡಿ ಶಾಖೆಯ ಸಿಬ್ಬಂದಿಯಾದ ಕುಮಾರಿ ಪ್ರಮೀಳಾ ರವರು ಸ್ವಾಗತಿಸಿ , ಕುಮಾರಿ ಲಾವಣ್ಯ ರವರು ವಂದಿಸಿದರು. ಶಾಖಾಧಿಕಾರಿ ಶ್ರೀಮತಿ ಅನ್ವಿತಾ ರವರು ಕಾರ್ಯಕ್ರಮ ನಿರೂಪಿಸಿದರು.