ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಹಂಪನಕಟ್ಟೆ ಶಾಖೆಯ ದಶಮಾನೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ದ. ಕ. ಜಿಲ್ಲಾ ನಿವೃತ್ತ ಸರಕಾರಿ ನೌಕರರ ಸಂಘ (ರಿ.), ಎನ್.ಜಿ.ಓ ಕಟ್ಟಡ, ಹಂಪನಕಟ್ಟೆ, ಮಂಗಳೂರು ಇಲ್ಲಿ ಜರುಗಿತು. ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ (ರಿ.) ದ.ಕ ಜಿಲ್ಲೆಯ ಅಧ್ಯಕ್ಷರಾದ ಶ್ರೀ ನವೀನ್ ಕುಮಾರ್ ಎಮ್. ಎಸ್, ಸಂಘದ ಗ್ರಾಹಕರುಗಳಾದ ಶ್ರೀ ರಾಜಗೋಪಾಲ್ ಬಿ ಎಮ್, ಶ್ರೀಮತಿ ಚೂಡಮಣಿ, ಶ್ರೀ ಮೋಹನ್ ದಾಸ್ ಎಮ್, ಹಾಗೂ ಶ್ರೀಮತಿ ಬೋಳಾರ್ ರಮಣಿ ರವರುಗಳು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸದಸ್ಯರಾದ ಶ್ರೀ ಮಾಧವ ಎಮ್ ಅಮೀನ್ ರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉತ್ತಮ ಬ್ಯಾಂಕಿAಗ್ ಸೇವೆಯೊಂದಿಗೆ ೧೪ ವರ್ಷಗಳಲ್ಲಿ ೩೫ ಶಾಖೆಗಳನ್ನು ತೆರೆದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಶಾಖೆಗಳನ್ನು ತೆರೆದು ಸಾರ್ವಜನಿಕರಿಗೆ ಸೇವೆಯನ್ನು ನೀಡುವಂತಾಗಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ರಾಜಗೋಪಾಲ್ ಬಿ ಎಮ್ ಹಾಗೂ ಶ್ರೀ ರಾಮಚಂದ್ರ ರಾವ್ ರವರು ಶುಭ ಹಾರೈಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತ್ತಿದೆ. ಸಂಘವು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಸಂಘದಲ್ಲಿ ಲಭ್ಯವಿರುವ ವಿವಿಧ ಸೇವೆಗಳ ಬಗ್ಗೆ ಮಾಹಿತಿ ನೀಡಿದರು. ಹಂಪನಕಟ್ಟೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಸೀತಾರಾಮ ಎನ್, ಶ್ರೀ ದಿವಾಕರ್ ಬಿ ಪಿ, ಶ್ರೀ ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯ ನಿರ್ವಹಣಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತರರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಸುಮಲತಾ ರವರು ಸ್ವಾಗತಿಸಿ, ಶ್ರೀಮತಿ ಅಕ್ಷತ ರವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಪ್ರಣೀತಾ ರವರು ಕಾರ್ಯಕ್ರಮ ನಿರೂಪಿಸಿದರು.

Leave a Reply