ಸAಘದ ಸದಸ್ಯರಾದ ಶ್ರೀ ಜಯಶೀಲ ಅಡ್ಯಂತಾಯ ರವರು ಮಾತನಾಡಿ ” ಸಂಘವು ೩೫ ಶಾಖೆಗಳನ್ನು ಹೊಂದಿದ್ದು ಇನ್ನಷ್ಟೂ ಎತ್ತರಕ್ಕೆ ಬೆಳೆಯಲಿ ಹಾಗೂ ಇನ್ನು ಮುಂದಕ್ಕೆ ಹೆಚ್ಚಿನ ಶಾಖೆಗಳನ್ನು ಹೊಂದಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಹರೀಶ್ ಅಡ್ಯಾರ್ ಅವರು ಮಾತನಾಡಿ “ಅಡ್ಯಾರು ಶಾಖೆಯು ಗ್ರಾಹಕರಿಗೆ ಉತ್ತಮ ಶಾಖೆಯಾಗಿದ್ದು, ಉತ್ತಮ ಸೇವೆಯನ್ನು ನೀಡುತ್ತಿದೆ” ಎಂದು ಶ್ಲಾಘಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ನಮ್ಮ ಸಂಸ್ಥೆ ಯಲ್ಲಿ ಹೆಚ್ಚಿನ ಸಿಬ್ಬಂದಿಗಳು ಮಹಿಳೆಯರಾಗಿದ್ದು, ಗ್ರಾಹಕರ ಸಹಕಾರದಿಂದ ಈ ಸಂಸ್ಥೆಯನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಬರಲು ಸಾಧ್ಯವಾಗಿದೆ. ಸಂಘದ ಸದಸ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಚಿನ್ನಾಭರಣ ಸಾಲದ ಸೇವೆಯನ್ನು ಹೆಚ್ಚಾಗಿ ನೀಡುತ್ತಿದೆ. ಸಂಘವು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ, ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಜೊತೆಯಲ್ಲಿ ಸದಸ್ಯರ ಆರೋಗ್ಯದ ಕಾಳಜಿಯಿಂದ ನಿರಂತರವಾಗಿ ವೈದ್ಯಕೀಯ ಶಿಬಿರಗಳನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘದ ಸದಸ್ಯರಿಗೆ ಸ್ಮರ್ಧಾತ್ಮಕ ದರದಲ್ಲಿ ವಿಮಾ ಸೌಲಭ್ಯಗಳನ್ನು ನೀಡುತ್ತಿದೆ. ಅಡ್ಯಾರ್ ಶಾಖೆಯ ಚತುರ್ಥ ವಾರ್ಷಿಕೋತ್ಸವ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು” ಎಂದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ನಿರ್ದೇಶಕರಾದ ಶ್ರೀ ಗೋಪಾಲ್ ಎಮ್ ಸಂಘದ ಮುಖ್ಯ ಕಾರ್ಯ ನಿರ್ವಹಣಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ನವ್ಯ ರವರು ಸ್ವಾಗತಿಸಿ, ಶ್ರೀಮತಿ ಅಶ್ವಿನಿ ರವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕವಿತಾ ರವರು ಕಾರ್ಯಕ್ರಮ ನಿರೂಪಿಸಿದರು.