ಸಂಘಟನೆಗಳು ಸಂಸ್ಥೆಗಳಾಗಿ ಮುಂದೆ ಸಾಗಿದಾಗ ಸಂಘಟನೆಯ ಶಕ್ತಿಗೆ ಬೆಲೆ ಬರುತ್ತದೆ. ಈ ಸಹಕಾರ ಸಂಘವು ಕೇವಲ ಬ್ಯಾಂಕಿAಗ್ ವ್ಯವಹಾರವಷ್ಟೆ ಅಲ್ಲದೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ರಾಜ್ಯ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಐ.ತಾರಾನಾಥ ಪೂಜಾರಿ ಯವರು ಹೇಳಿದರು. ಮಂಗಳೂರಿನ ಪಡೀಲ್ ನಲ್ಲಿ ಸ್ವಂತ ಆಡಳಿತ ಕಟ್ಟಡ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ೩೫ನೇ ಶಾಖೆಯನ್ನು ಮೂಡುಬಿದಿರೆ ಅಂಚೆ ಕಚೇರಿ ಎದುರಿನ ರಾಮಯ್ಯ ಕಾಂಪ್ಲೆಕ್ಸ್ ನಲ್ಲಿ ರವಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಉತ್ತಮ ನಡವಳಿಕೆ ಹಾಗೂ ಉತ್ತಮ ಉದ್ದೇಶವಿದ್ದರೆ ಮತ್ತಷ್ಟು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ. ವ್ಯವಹಾರ ಕ್ಷೇತ್ರದಲ್ಲಿ ಎಚ್ಚರಿಕೆ ಅಗತ್ಯವಾಗಿದ್ದು, ವ್ಯಾಜ್ಯಗಳಿಂದ ಆದಷ್ಟು ದೂರವಿರಬೇಕು ಎಂದರು. ಮೂಲ್ಕಿ- ಮೂಡಬಿದ್ರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ್ಯ ಶ್ರೀ ಉಮಾನಾಥ ಎ ಕೋಟ್ಯಾನ್ ರವರು ಶುಭ ಹಾರೈಸಿದರು.

ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳಾ ಸಬಲೀಕರಣದ ಜತೆಗೆ ಆರ್ಥಿಕವಾಗಿ ಹಿಂದುಳಿದವರಿಗೆ ಹಾಗೂ ಹೆಣ್ಣು ಮಕ್ಕಳ ಮದುವೆಗೆ ಸಾಲ ನೀಡಲಾಗುತ್ತಿದೆ. ಶಿಕ್ಷಣ, ಸಾಮಾಜಿಕ ಸೇವೆಗಳಿಗೂ ಈ ಸಂಸ್ಥೆ ಆದ್ಯತೆ ನೀಡುತ್ತಿದೆ. ಶೇ.೯೫ರಷ್ಟು ಮಂದಿ ಮಹಿಳಾ ಸಿಬ್ಬಂದಿ ಇಲ್ಲಿದ್ದು, ದಕ್ಷ ಆಡಳಿತ ಮಂಡಳಿಯೂ ಇದೆ ಎಂದರು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿರುವ ಶ್ರೀ ಐ ತಾರನಾಥ ಪೂಜಾರಿ ಹಾಗು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ.೧೦೦ ಅಂಕ ಗಳಿಸಿದ ಕುಮಾರಿ ದಿಶಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಇದರ ಅಧ್ಯಕ್ಷರು ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು. ಇದರ ನಿರ್ದೇಶಕರಾದ “ಸಹಕಾರ ರತ್ನ” ಶ್ರೀ ಭಾಸ್ಕರ್ ಎಸ್ ಕೋಟ್ಯಾನ್, ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಮೂಡಬಿದ್ರಿಯ ಅಧ್ಯಕ್ಷರಾದ ಶ್ರೀ ಸುರೇಶ್ ಕೆ. ಪೂಜಾರಿ, ವಕೀಲರ ಸಂಘ ಮೂಡಬಿದ್ರಿಯ ಅಧ್ಯಕ್ಷರಾದ ಶ್ರೀ ಹರೀಶ್ ಪಿ. ಯುವವಾಹಿನಿ (ರಿ.) ಮೂಡಬಿದ್ರಿ ಘಟಕದ ಅಧ್ಯಕ್ಷರಾದ ಶ್ರೀ ಗಿರೀಶ್ ಕೋಟ್ಯಾನ್ ಮಾರೂರು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಬೆಳ್ತಂಗಡಿಯ ಉಪಾಧ್ಯಕ್ಷರಾದ ಶ್ರೀ ಜಗದೀಶ್ಚಂದ್ರ ಡಿ.ಕೆ, ಪ್ರೆಸ್ ಕ್ಲಬ್ ಮೂಡಬಿದ್ರಿಯ ಅಧ್ಯಕ್ಷರಾದ ಶ್ರೀ ಸೀತಾರಾಮ್ ಆಚಾರ್ಯ, ಆತ್ಮಶಕ್ತಿ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ ಎನ್., ಶ್ರೀ ರಾಮನಾಥ ಸನಿಲ್, ಶ್ರೀ ಮುದ್ದುಮೂಡುಬೆಳ್ಳೆ, ಶ್ರೀ ದಿವಾಕರ ಬಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯಾ ವಿಜಯ್ ರವರು ಸ್ವಾಗತಿಸಿದರು. ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪೂಜಾರಿ ರವರು ವಂದಿಸಿದರು. ಶ್ರೀ ವಿಶ್ವನಾಥ ರೆಂಜಾಳ ರವರು ನಿರೂಪಿಸಿದರು.

ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯುಕ್ತ ೫೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦. ಹಾಗೂ ೧೦೦೦ ದಿನಗಳ ಠೇವಣಿಗಳಿಗೆÂ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿದೆ.