ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ “ಆತ್ಮಸಮ್ಮಾನ” ಕಾರ್ಯಕ್ರಮವನ್ನು ಸಂಘದ ಪ್ರಧಾನ ಕಛೇರಿ ಪಡೀಲ್‌ನಲ್ಲಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಸಾಮರಸ್ಯ ಬಳಗ, ಮಂಗಳೂರು ಇದರ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ನಾಯಕ್ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಮಹಿಳಾ ದಿನಾಚರಣೆಯಂದು ಮಾತ್ರ ಮಹಿಳೆಯರನ್ನು ಗೌರವಿಸುವುದಲ್ಲ ದಿನನಿತ್ಯ ಮಹಿಳೆಯನ್ನು ಗೌರವದಿಂದ ಕಾಣಬೇಕು. ಮಹಿಳೆಯರು ತೊಂದರೆಯಲ್ಲಿದ್ದ ಸಂದರ್ಭದಲ್ಲಿ ಸ್ಪಂದಿಸಿದಾಗ ಮಾತ್ರ ಮಹಿಳಾ ದಿನಾಚರಣೆಯ ಅರ್ಥಪೂರ್ಣವಾಗುತ್ತದೆ. ಸಹಕಾರಿ ಸಂಘದಲ್ಲಿ ೯೫% ಮಹಿಳೆಯರಿಗೆ ಉದ್ಯೋಗ ನೀಡಿರುವುದು ಮಹಿಳಾ ಸಬಲೀಕರಣಕ್ಕೆ ಸಾಕ್ಷಿಯಾಗಿದೆ. ಇದು ಮಹಿಳೆಯರಿಗೆ ನೀಡಿದ ಗೌರವವಾಗಿದೆ” ಎಂದರು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ನ್ಯಾಯವಾದಿಗಳು ಹಾಗೂ ಪದವು ವ್ಯವಸಾಯ […]

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತರಿತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆಯ ಉದ್ಘಾಟನಾ ಸಮಾರಂಭವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು. ಬಿ.ಸಿ ರೋಡ್‌ನಲ್ಲಿ ೨೦೧೨ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಂಡಿದೆ.

ಕರ್ನಾಟಕ ಸರಕಾರದ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ಬಿ ರಮಾನಾಥ ರೈ ಯವರು ನವೀಕೃತ, ವಿಸ್ತöÈತ ಹಾಗೂ ಹವಾನಿಯಂತ್ರಿತ ಬಿ.ಸಿ ರೋಡ್ ಶಾಖೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಆತ್ಮ ಶಕ್ತಿ ಸಂಘವು ಮಂಗಳೂರಿನ ಪಡೀಲ್ ನಲ್ಲಿ ಸ್ವಂತ ಕಟ್ಟಡವನ್ನು ಹೊಂದಿದ್ದು, ದ.ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ೩೩ ಶಾಖೆಗಳನ್ನು ಹೊಂದಿದ್ದು, ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಮುಂದಾಳತ್ವದಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಸಾಧನೆಯನ್ನು ಮಾಡಿರುವ ಸಂಘವಾಗಿದೆ. ಇವತ್ತಿನ ಸಮಾರಂಭದಲ್ಲಿ ವೇದಿಕೆಯಲ್ಲಿ […]