ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಮಾಡುವ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನಲ್ಲಿ ನಡೆಯಿತು.

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪುತ್ತೂರು ಶಾಖೆ ಮತ್ತು ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇವರ ಜಂಟಿ ಸಹಯೋಗದೊಂದಿಗೆ ಮಾತಾ ಅಮೃತಾನಂದಮಯಿ ಮಠ, ಬೋಳೂರು ಹಾಗೂ ಸಮುದಾಯ ದಂತ ವಿಭಾಗ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ಉಜ್ಜೋಡಿ ಮಂಗಳೂರು ಇಲ್ಲಿಯ ನುರಿತ ವೈದ್ಯರ ತಂಡದವರಿAದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಉಚಿತ ಕಣ್ಣಿನ ತಪಾಸಣೆ ಶಿಬಿರವು ಆಶ್ಮಿ ಕಂಫರ್ಟ್, ಬೈಪಾಸ್ ಸೆಂಟರ್, ಮಾಣಿ- ಮೈಸೂರು ಹೆದ್ದಾರಿ ರಸ್ತೆ, ಬಪ್ಪಲಿಗೆ, ಪುತ್ತೂರಿನಲ್ಲಿ ನಡೆಯಿತು.
ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಮಾಡುವ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರ ಅಧ್ಯಕ್ಷತೆಯಲ್ಲಿ ಪುತ್ತೂರಿನಲ್ಲಿ ನಡೆಯಿತು.
ಕಣ್ಣಿನ ತಪಾಸಣೆಯಲ್ಲಿ ಪಾಲ್ಗೊಂಡ ೫ ಶಿಬಿರಾರ್ಥಿಗಳಿಗೆ ಉಚಿತ ಕಣ್ಣಿನ ಶಸ್ತçಚಿಕಿತ್ಸೆಯನ್ನು ನಡೆಸಲಾಗಿದೆ. ೮೫ ಶಿಬಿರಾರ್ಥಿಗಳಿಗೆ ಈ ಸಂದರ್ಭದಲ್ಲಿ ಉಚಿತ ಕನ್ನಡವನ್ನು ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಇದರ ಅಧ್ಯಕ್ಷರಾದ ರೊ. ಸಂತೋಷ್ ಶೆಟ್ಟಿ ಎಸ್. ಹಾಗೂ ಕಾರ್ಯದರ್ಶಿಯಾದ ಶ್ರೀ ರಫೀಕ್ ಶಿಬಿರಾರ್ಥಿಗಳಿಗೆ ಕನ್ನಡಕ ವಿತರಿಸಿದರು. ಸಂಘದ ಶಾಖಾಧಿಕಾರಿ ಶ್ರೀಮತಿ ಯಶವಂತಿ ನಿರೂಪಿಸಿದರು, ಸಂಘದ ಲೆಕ್ಕಿಗರಾದ ಶ್ರೀ ವಿಶ್ವನಾಥ್ ಸ್ವಾಗತಿಸಿ, ಶಾಖಾ ಸಿಬ್ಬಂದಿ ಕುಮಾರಿ ಸುರಕ್ಷಾ ವಂದಿಸಿದರು.