ಸಂಘದ ಸಲಹಾ ಸಮಿತಿ ಸದಸ್ಯರಾದ ಶ್ರೀ ಪ್ರದೀಪ್ ಕುಮಾರ್ ಸುವರ್ಣ ಹಾಗೂ ಸಂಘದ ಗ್ರಾಹಕರಾದ ಶ್ರೀ ಮಾಧವ ಅಮೀನ್ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀಯುತ ಪ್ರದೀಪ್ ಕುಮಾರ್ ಸುವರ್ಣ ಇವರು ಆತ್ಮಶಕ್ತಿಯ ಪ್ರಗತಿಯಲ್ಲಿ ಸಂಸ್ಥೆಯ ಸಿಬ್ಬಂದಿಗಳ ಸೇವೆ ಅಮೂಲ್ಯವಾಗಿದ್ದು, ಗ್ರಾಹಕರು ತ್ವರಿತಗತಿಯಲ್ಲಿ ತನ್ನ ಎಲ್ಲಾ ಬ್ಯಾಂಕಿಂಗ್ ಸೇವೆಯನ್ನು ಪಡೆಯುತಿದ್ದು ಈ ಶಾಖೆಯು ಇತರ ರಾಷ್ಟ್ರೀಯ ಬ್ಯಾಂಕಿಂಗ್ಗೆ ಸರಿಸಮಾನವಾಗಿ ಬೆಳೆಯುತ್ತಿರುವುದು ಶ್ಲಾಘನೀಯ ಎಂದರು.
ಸಭೆಯ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ರವರು ಮಾತನಾಡಿ ಎಲ್ಲಾ ಸದಸ್ಯರ ಸಹಕಾರದಿಂದ ಠೇವಣಿಗಳ ಸಂಗ್ರಹಣೆಯಲ್ಲಿ ಸಾಲ ನೀಡುವಿಕೆಯಲ್ಲಿ ಹಾಗೂ ವಸೂಲಾತಿಯಲ್ಲಿ ಹೆಚ್ಚಿನ ಪ್ರಗತಿಯನ್ನು ಈ ಶಾಖೆ ಸಾಧಿಸಿದೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆಯನ್ನು ಗ್ರಾಹಕರಿಗೆ ತಲುಪಿಸಲು ನಾವು ಪ್ರಯತ್ನಿಸುತ್ತೇವೆ ಎಂದರು. ಸದಸ್ಯರಾದ ಬಾಲಕೃಷ್ಣ ಸುವರ್ಣ, ದಯಾನಂದ ಪೂಜಾರಿಯವರು ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ಉಪಾಧ್ಯಕ್ಷರಾದ ಶ್ರೀಯುತ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀಯುತ ಆನಂದ ಎಸ್ ಕೊಂಡಾಣ, ಶ್ರೀಯುತ ಚಂದ್ರಹಾಸ್ ಮರೋಳಿ, ಶ್ರೀಮತಿ ಕುಶಲಾಕ್ಷಿ ಯಶವಂತ್ ಉಪಸ್ಥಿತರಿದ್ದರು. ಬಜ್ಪೆ ಶಾಖೆಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ಸ್ವಾಗತಿಸಿ, ಗುಮಾಸ್ತೆಯಾದ ಕುಮಾರಿ ಭಾಗ್ಯಶ್ರೀ ವಂದಿಸಿದರು.