ಈ ಕಾರ್ಯಕ್ರಮದಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲುರವರು, ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಡಿ. ಕಾಮತ್ ರವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರು ಆದ ಸಹಕಾರ ರತ್ನ ಡಾ! ಎಂ. ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ತಿತಿಯಲ್ಲಿ ಕರ್ನಾಟಕ ಸರ್ಕಾರದ ಸಹಕಾರ ಸಚಿವರಾದ ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್ ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ 2019-20ನೇ ಸಾಲಿನಲ್ಲಿ ಸಂಘವು ಸಾಧಿಸಿದ ಸರ್ವಾಂಗೀಣ ಸಾಧನೆಯನ್ನು ಪರಿಗಣಿಸಿ “ವಿಶೇಷ ಪ್ರಶಸ್ತಿ”ಯನ್ನು ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನೀರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆದ ಶ್ರೀ ದಿವಾಕರ್ ಪಾಂಡೇಶ್ವರ, Campco ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಎಸ್. ಆರ್. ಸತೀಶ್ಚಂದ್ರ, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಮಹಾಮಂಡಳ ನಿ. ಇದರ ಅಧ್ಯಕ್ಷರಾದ ಶ್ರಿ ಯಶ್ಪಾಲ್ ಸುವರ್ಣ, ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಇದರ ಅಧ್ಯಕ್ಷರಾದ ಶ್ರೀ ರವಿರಾಜ ಹೆಗ್ಡೆ ಕೊಡವೂರು, ಸ್ಕ್ಯಾಡ್ಸ್ ಅಧ್ಯಕ್ಷರಾದ ರವೀಂದ್ರ ಕಂಬಳಿ, ದ.ಕ ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ಸಹಕಾರಿಗಳಾದ ವಿನಯ ಕುಮಾರ್ ಸೂರಿಂಜೆ, ಷಡಾಕ್ಷರಿ, ಎಸ್. ಜಿಯಾವುಲ್ಲಾ, ಶ್ರೀ ಬಿ. ಪ್ರಸಾದ್ ಕೌಶಲ್ ಶೆಟ್ಟಿ, ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ, ದೇವರಾಜ್ ಸಿ.ಎನ್. , ಆರ್ ಶ್ರೀಧರ್, ಪ್ರಕಾಶ್ ರಾವ್, ಬಿ.ಕೆ ಸಲೀಂ, ರವೀಂದ್ರ ಬಿ. ಡಾ! ಕೆ.ಸಿ ಯತೀಶ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರಾದ ಶ್ರೀ ವಾಮನ್ ಕೆ., ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸುರೇಶ್ ವಿ. ಪೂಜಾರಿ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ ಮರೋಳಿ ಮತ್ತು ಶ್ರೀಮತಿ ಸುಜಯ ಹೇಮಚಂದ್ರ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಇವರಿಂದ ಸತತ 7 ವರ್ಷದಿಂದ ಇ-ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿ, ಸತತ 4 ವರ್ಷಗಳಿಂದ ಸಂಘವು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ, ವಿಮಾ ಕ್ಷೇತ್ರದ ಸಾಧನೆಗೆ ರೆಲಿಗೇರ್ ಹೆಲ್ತ್ ಇನ್ಸೂರೆನ್ಸ್ ಕಂಪನಿ ಪ್ರಶಸ್ತಿ, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ ಯುವವಾಹಿನಿ ಸಾಧನ ಶ್ರೇಷ್ಠ ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋಥ್ ಪೌಂಡೇಶನ್ ನಿಂದ ಆವಾರ್ಡ್ For ಎಕ್ಸ್ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ”ರಾಷ್ಟ್ರೀಯ ಪ್ರಶಸ್ತಿ ಹಾಗೂ ಸತತ 3 ವರ್ಷಗಳಿಂದ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ `ಉತ್ತಮ ಸಹಕಾರಿ ಸಂಘ’ ಪ್ರಶಸ್ತಿ ಮುಂತಾದವುಗಳನ್ನು ಪಡೆದಿರುವುದರ ಜೊತೆಗೆ ಪ್ರಸ್ತುತ ಅಖಿಲ ಭಾರತ ಸಹಕಾರಿ ಸಪ್ತಾಹ – 2020 ರಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ವಿಶೇಷ ಪ್ರಶಸ್ತಿಯನ್ನು ಪಡೆದುಕೊಂಡ ರಾಜ್ಯದ ಏಕಮಾತ್ರ ಸಹಕಾರಿ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.