ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೂರಿಂಜೆ ನಿರ್ದೇಶಕರುಗಳಾದ ಶ್ರೀ ಬಿ. ನಿರಂಜನ್, ಶ್ರೀ ಟಿ.ಜಿ. ರಾಜಾರಾಮ ಭಟ್, ಶ್ರೀ ಎಸ್.ರಾಜು ಪೂಜಾರಿ, ಶ್ರೀ ಕೆ.ಎಸ್. ದೇವರಾಜ್, ಶ್ರೀ ಎಂ.ವಾದಿರಾಜ್ ಶೆಟ್ಟಿ, ಶ್ರೀ ಶಶಿಕುಮಾರ್ ರೈ ಬಿ., ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ಎಸ್.ಬಿ.ಜಯರಾಮ ರೈ, ಡಾ. ಐಕಳಬಾವ ದೇವಿ ಪ್ರಸಾದ್ ಶೆಟ್ಟಿ, ಶ್ರೀ ಕೆ. ಹರಿಶ್ಚಂದ್ರ, ಶ್ರೀ ಎಂ. ಮಹೇಶ್ ಹೆಗ್ಡೆ, ಶ್ರೀ ಬಿ. ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಮೋನಪ್ಪ ಶೆಟ್ಟಿ ಎಕ್ಕಾರು, ಶ್ರೀ ಕೆ.ಜೈರಾಜ್ ಬಿ. ರೈ, ಶ್ರೀ ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ರವೀಂದ್ರ ಬಿ. ಉಪಸ್ಥಿತರಿದ್ದರು, ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ (ನಿ.) ಇವರಿಂದ ಸತತ 7 ವರ್ಷದಿಂದ ಇ-ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿ, 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ವಿಶೇಷ ಪ್ರಶಸ್ತಿ , 71 ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವೆ ಸಂಘ-ಸಂಸ್ಥೆ ಕ್ಷೇತ್ರದಲ್ಲಿ ಅನುಪಮ ಸಾಧನೆಯನ್ನು ಪರಿಗಣಿಸಿ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ವಿಮಾ ಕ್ಷೇತ್ರದ ಸಾಧನೆಗೆ ರೆಲಿಗೇರ್ ಹೆಲ್ತ್ ಇನ್ಸೂರೆನ್ಸ್ ಕಂಪನಿ ಪ್ರಶಸ್ತಿ, ಯುವವಾಹಿನಿ ಕೇಂದ್ರ ಸಮಿತಿ (ರಿ.) ಯಿಂದ ಯುವವಾಹಿನಿ ಸಾಧನ ಶ್ರೇಷ್ಠ ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋಥ್ ಪೌಂಡೇಶನ್ ನಿಂದ ಆವಾರ್ಡ್ ಪೆÇೀರ್ ಎಕ್ಸ್‍ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ”ರಾಷ್ಟ್ರೀಯ ಪ್ರಶಸ್ತಿ ಹಾಗೂ ಸತತ 3 ವರ್ಷಗಳಿಂದ ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ `ಉತ್ತಮ ಸಹಕಾರಿ ಸಂಘ’ ಪ್ರಶಸ್ತಿ ಮುಂತಾದವುಗಳನ್ನು ಪಡೆದಿರುವುದರ ಜೊತೆಗೆ ಪ್ರಸ್ತುತ ಸತತ 5 ವರ್ಷಗಳಿಂದ ಸಂಘವು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿಯನ್ನು ಪಡೆದುಕೊಂಡಿರುವುದು ಸಂಘದ ಪ್ರತಿಷ್ಟೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸಂಘವು ಈಗಾಗಲೇ ಪಡೀಲ್‍ನಲ್ಲಿ ನೂತನ ಆಡಳಿತ ಕಛೇರಿ ಹಾಗೂ ಹಾಸ್ಟೇಲ್ ಕಟ್ಟಡದ ನಿರ್ಮಾಣ ಮಾಡುತ್ತಿದ್ದು ಕಾಮಗಾರಿಯು ಶೀಘ್ರಗತಿಯಲ್ಲಿ ನಡೆಯುತ್ತಿದೆ.