ಸಂಘದ ಸದಸ್ಯರಾದ ಡಾ. ಹರೀಶ್ಚಂದ್ರ ಪಿ. ಸಾಲ್ಯಾನ್ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಜನರಿಗೆ ಉತ್ತಮ ಸೇವೆಯನ್ನು ನೀಡುವುದರ ಜೊತೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಹಲವಾರು ಬಡ ಜನರಿಗೆ ಸಹಾಯವಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.
ಲಯನ್ಸ್ ಕ್ಲಬ್ ಮುಲ್ಕಿ ಇದರ ಅಧ್ಯಕ್ಷೆ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಪ್ರತಿಭಾ ಹೆಬ್ಬಾರ್ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಮಾಡುತ್ತಿರುವುದು ಪ್ರಶಂಸನೀಯವಾಗಿದ್ದು, ಎಂದು ತಿಳಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘದ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಸಾಮಾಜಿಕ ಬದ್ಧತೆಯ ದೃಷ್ಟಿಯಿಂದ ಉಚಿತ ಆರೋಗ್ಯ ಶಿಬಿರ, ಉಚಿತ ಕನ್ನಡಕ ವಿತರಣೆ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ನಿರಂತರ ಮಾಡುತ್ತಾ ಬರುತ್ತಿದ್ದು , ಈಗಾಗಲೇ 2000 ಕ್ಕೂ ಮಿಕ್ಕಿ ಉಚಿತ ಆರೋಗ್ಯ ಕಾರ್ಡ್ ಹಾಗೂ 6000 ಕ್ಕೂ ಮಿಕ್ಕಿ ಉಚಿತ ಕನ್ನಡಕವನ್ನು ವಿತರಿಸಿರುವುದಷ್ಟೇ ಅಲ್ಲದೆ ಆರೋಗ್ಯ ಸಮಸ್ಯೆಯಲ್ಲಿರುವ ಆರ್ಥಿಕ ಬಡ ಕುಟುಂಬಗಳ ಸದಸ್ಯರನ್ನು ಗುರುತಿಸಿ ಅವರಿಗೂ ಆರ್ಥಿಕ ನೆರವನ್ನು ನೀಡಿರುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಶ್ರೀ ಸುರೇಶ್ ಪೂಜಾರಿ, ಶ್ರೀ ರಮಾನಾಥ್ ಸನಿಲ್, ಹಾಗೂ ಲಯನ್ಸ್ ಕ್ಲಬ್ ಮುಲ್ಕಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ವೆಂಕಟೇಶ್ ಹೆಬ್ಬಾರ್ ಇವರು ಉಪಸ್ಥಿತರಿದ್ದರು. ಸಂಘದ ವಸೂಲಾತಿ ಅಧಿಕಾರಿ ಶ್ರೀ ರಾಜೇಶ್ ಇವರು ಸ್ವಾಗತಿಸಿ, ಶಾಖಾಧಿಕಾರಿಯವರಾದ ಶ್ರೀಮತಿ ಸ್ವಾತಿ ವಂದಿಸಿದರು. ಸಂಘದ ಮಾನವ ಸಂಪನ್ಮೂಲ ಅಧಿಕಾರಿಯವರಾದ ಶ್ರೀ ರಕ್ಷಿತ್ ಕುಮಾರ್ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.