ಮಂಗಳೂರು ಮಹಾನಗರ ಪಾಲಿಕೆಯ Corporater ಆದ ಶ್ರೀಮತಿ ವೀಣಾ ಮಂಗಳ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ನಿರಂತರವಾಗಿ ಇಂತಹ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾ ಬರುತ್ತಿದ್ದು ಈ ಸಂಘವು ಜನರಪರ ಕಾಳಜಿಯುಳ್ಳ ಒಂದು ಉತ್ತಮ ಸಹಕಾರಿ ಸಂಘವಾಗಿ ಸಮಾಜದಲ್ಲಿ ಒಂದು ಮಾದರಿ ಸಂಘವಾಗಿ ಕಾರ್ಯನಿರ್ವಹಿಸುತ್ತಿದೆ, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಸಂಘವು ಇಂತಹ ಶಿಬಿರವನ್ನು ಈ ಸಂಘವು ಆಯೋಜಿಸುವಂತಾಗಲಿ ಎಂದು ಶುಭ ಹಾರೈಸಿ ಪರಿಸರದ ಜನರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೇವಲ ಬ್ಯಾಂಕಿಂಗ್ ಕಾರ್ಯಕ್ಷೇತ್ರಕ್ಕಷ್ಟೇ ಸೀಮಿತವಾಗಿರದೆ ಸಾಮಾಜಿಕ ಕಳಕಳಿಯನ್ನೂ ತನ್ನ ಕಾರ್ಯವ್ಯಾಪ್ತಿಯಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದು, ಜನರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವ ಇಂತಹ ಸಾಕಷ್ಟು ಕಾರ್ಯಕ್ರಮವನ್ನು ಆಯೋಜಿಸಲು ಸಂಘವು ಸದಾ ಉತ್ಸುಕವಾಗಿದ್ದು ಜನರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು ಈ ಕಾರ್ಯಕ್ರಮವನ್ನು ಆಯೋಜಿಸಲು ಕೈ ಜೋಡಿಸಿದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರಿನ ಆಡಳಿತ ಮಂಡಳಿಗೆ ಸಂಘದ ಪರವಾಗಿ ಕೃತಜ್ಞತೆಯನ್ನು ಸಲ್ಲಿಸಿದರು.
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ದಿನೇಶ್ ಅಂಚನ್ ರವರು ಮಾತನಾಡಿ ಸಂಘವು ಸತತ 5 ವರ್ಷಗಳಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಪರಿಸರದ ಜನರಿಗೆ ಅನುಕೂಲಕರವಾಗುವ ನಿಟ್ಟಿನಲ್ಲಿ ಹಲವಾರು ವೈದ್ಯಕೀಯ ಶಿಬಿರವನ್ನು ಆಯೋಜಿಸಿ ಜನರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದು , ಈ ನಿಟ್ಟಿನಲ್ಲಿ ಈ ಬಾರಿಯೂ ನೇತ್ರ ತಪಾಸಣೆಯನ್ನು ಮಂಗಳೂರಿನ ಹೆಸರಾಂತ ಪ್ರಸಾದ್ ನೇತ್ರಾಲಯದ ಮೂಲಕ ಉಚಿತವಾಗಿ ಆಯೋಜಿಸಿದ್ದು ಜನರು ಈ ಶಿಬಿರದ ಸಂಪೂರ್ಣ ಉಪಯೋಗವನ್ನು ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಆನಂದ್ ಎಸ್. ಕೊಂಡಾಣ , ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯ ವೈಧ್ಯಾಧಿಕಾರಿ ಡಾ| ಫರೀನ್ ಆಸ್ಪತ್ರೆಯ ಪಿ.ಆರ್.ಓ ಆದ ಶ್ರೀ ಸೈಯದ್ , ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಉಷಾ ಸಿ. ಬೋಳಾರ್ ಉಪಸ್ಥಿತರಿದ್ದರು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಶಾಖಾಧಿಕಾರಿಯಾದ ಶ್ರೀಮತಿ ರವಿಕಲಾ ರವರು ಸ್ವಾಗತಿಸಿದರು, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಜೊತೆ ಕಾರ್ಯದರ್ಶಿಯಾದ ಶ್ರೀ ಚಿತ್ರಾಕ್ಷ ಪೂಜಾರಿ ಯವರು ವಂದಿಸಿದರು ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಾನವ ಸಂಪನ್ಮೂಲ ಅಧಿಕಾರಿಯವರಾದ ಶ್ರೀ ರಕ್ಷಿತ್ ಕುಮಾರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.