ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ರವರ ಗೌರವ ಉಪಸ್ಥಿತಿಯಲ್ಲಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ. ರವರು ಸಂಘದ 2022ರ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀ ಸಂದೀಪ್ ಗರೋಡಿ, ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಮ್ಯಾನೆಜರ್ ಕಿಶೋರ್ ಕುಮಾರ್, ಕ್ಷೇತ್ರದ ಆಡಳಿತ ಮೋಕ್ತೆಸರರಾದ ಶ್ರೀ ದಾಮೋದರ ನಿಸರ್ಗ, ಶ್ರೀ ವಾಮನ್ ಕೆ., ಶ್ರೀ ದಿನೇಶ್ ಅಂಚನ್, ಅರ್ಚಕರಾದ ಶ್ರೀ ಹರೀಶ್ ಶಾಂತಿ, ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ದಿವಾಕರ ಬಿ.ಪಿ., ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು.