ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ದಶಮಾನೋತ್ಸವ ಸವಿನೆನಪಿನ ಆಡಳಿತ ಕಚೇರಿ ಮತ್ತು ಹಾಸ್ಟಲ್ ಕಟ್ಟಡ “ಆತ್ಮಶಕ್ತಿ ಸೌಧ” ದ ಉದ್ಘಾಟನಾ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಸನ್ಮಾನ್ಯ ಶ್ರೀ ಎಸ್. ಟಿ. ಸೋಮಶೇಖರ್ ರವರು ಮಂಗಳೂರು ಮಹಾನಗರ ಪಾಲಿಕೆಯ ಮಹಾಪೌರರಾದ ಸನ್ಮಾನ್ಯ ಶ್ರಿ ಪ್ರೇಮಾನಂದ ಶೆಟ್ಟಿಯವರ ಗೌರವ ಉಪಸ್ಥಿತಿಯಲ್ಲಿ ಸಂಘದ ಅದ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಉಪಾಧ್ಯಕ್ಷ ಶ್ರೀ ನೇಮಿರಾಜ್ ಪಿ. ರವರಿಗೆ ಸಂಘದ ದಶಮಾನೋತ್ಸವ ಸವಿನೆನಪಿನಗಾಗಿ ಸನ್ಮಾನಿಸುವ ಮೂಲಕ ಗೌರವಿಸಿದರು.

ಮುಖ್ಯ ಅತಿಥಿಗಳಾಗಿ ಮುಡಾ ಅಧ್ಯಕ್ಷರಾದ ಶ್ರೀ ರವಿಶಂಕರ ಮಿಜಾರ್, ಮೈಸೂರು ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರಕಾಶ್ ರಾವ್, ದ.ಕ. ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರಾದ ಶ್ರೀ ಪ್ರವೀಣ್ ನಾಯಕ್, ಕಾರ್ಪೊರೇಟರ್‌ಗಳಾದ ಶ್ರೀ ಸಂದೀಪ್ ಗರೋಡಿ, ಶ್ರೀಮತಿ ರೂಪಶ್ರೀ ಪೂಜಾರಿ ಮತ್ತು ಶ್ರೀ ಅನಿಲ್ ಕುಮಾರ್, ಸಹಕಾರ ಸಚಿವರ ಸಹಾಯಕ ಶ್ರೀ ರೇವಣ್ಣ ಹಾಗೂ ಆತ್ಮಶಕ್ತಿ ಪತ್ರಿಕೆಯ ಸಂಪಾದಕರಾದ ಶ್ರೀ ವಾಮನ್ ಕೆ. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ಪರಮೇಶ್ವರ ಜಿ. ಪೂಜಾರಿ, ಶ್ರೀ ಆನಂದ್‌ಎಸ್. ಕೊಂಡಾಣ, ಶ್ರೀ ಸೀತಾರಾಮ್‌ಎನ್., ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ್ ಮರೋಳಿ, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಂ., ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯಾ ವಿಜಯ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಶ್ರೀ ದಿನೇಶ್ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು.

ಸಂಘದ ಅಧ್ಯಕ್ಶರಾದ ಶ್ರೀಯುತ ಚಿತ್ತರಂಜನ್ ಬೋಳಾರ್‌ರವರು ಸಹಕಾರ ಕ್ಷೇತ್ರದಲ್ಲಿ ಸಾಮಾಜಿಕ ಕಳಕಳಿಯೊಂದಿಗೆ ಸೇವೆಗೈದು ರಾಜ್ಯದಲ್ಲಿ ಅಲ್ಲದೆ ರಾಷ್ಟç ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇವರಿಗೆ “ಭಾರತರತ್ನ ಡಾ| ಎ.ಪಿ.ಜೆ ಅಬ್ದುಲ್ ಕಲಾಂ ರಾಷ್ಟಿಯ ಪ್ರಶಸ್ತಿ”, 2020ರಲ್ಲಿ “ಸಜ್ಜನ ಚಂದನ ಸದ್ಭಾವನಾ ಪ್ರಶಸ್ತಿ”, 2019ರಲ್ಲಿ 63ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ “ಉತ್ತಮ ಸಹಕಾರಿ ಪ್ರಶಸ್ತಿ”, “ರಾಷ್ಟಿಯ “ಬಸವಶ್ರೀ” ಪ್ರಶಸ್ತಿ”, “ಸಮಾಜ ರತ್ನ ಪ್ರಶಸ್ತಿ”, ““ಪರಿವರ್ತನಶ್ರೀ ರಾಜ್ಯ ಪ್ರಶಸ್ತಿ”ಜೊತೆಯಲ್ಲಿ ಹಲವಾರು ಸಂಘ -ಸಂಸ್ಠೆಗಳಲ್ಲಿ ಸಕ್ರೀಯವಾಗಿರುವ ಇವರನ್ನು ಹಲವಾರು ಸಹಕಾರ ಸಂಘ- ಸಂಸ್ಥೆಗಳು ಇವರನ್ನು ಗುರುತಿಸಿ ಸನ್ಮಾನಿಸಿದೆ.

ಶ್ರೀಯುತ ಚಿತ್ತರಂಜನ್ ಬೋಳಾರ್‌ರವರು ಸಂಘದ ಸಕ್ರೀಯ ಚಟುವಟಿಕೆಯೊಂದಿಗೆ ಅಧ್ಯಕ್ಷರ ಕ್ರಿಯಾಶೀಲತೆಯು ಉಲ್ಲೇಖನೀಯ. ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ಮತ್ತು ದ.ಕ. ಕೇಂದ್ರ ಸಹಕಾರ ಸಗಟು ಮಾರಾಟ ಸಂಘ ನಿ. ಜನತಾ ಬಜಾರ್ ಇದರ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ.