ರಾಜ್ಯ ಸರ್ಕಾರದ 2021 ನೇ ಸಾಲಿನ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಬೋಳಾರ್ ಅವರಿಗೆ ನಾಗರಿಕ ಸನ್ಮಾನ ಸಮಿತಿ ವತಿಯಿಂದ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಶುಕ್ರವಾರ ಅಯೋಜಿಸಿದ್ದ `ಚಿತ್ತ ಆತ್ಮಾಭಿನಂದನಾ’ ನಾಗರಿಕ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಶ್ರೀ ಚಿತ್ತರಂಜನ್ ಬೋಳಾರ್ ಅವರ ನಾಯಕತ್ವದಲ್ಲಿ ಸಮರ್ಥವಾಗಿ ಮುನ್ನಡೆದು ನೂರಾರು ಜನರಿಗೆ ಉದ್ಯೋಗ, ಸಾವಿರಾರು ಕುಟುಂಬಗಳಿಗೆ ಅರ್ಥಿಕ ಚೈತನ್ಯ ನೀಡಿದ ಸಂಸ್ಥೆ ಎಂದು ಶ್ಲಾಘಿಸಿದರು.
ಶ್ರೀ ಚಿತ್ತರಂಜನ್ ಬೋಳಾರ್ ರವರ ನಾಯಕತ್ವದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಜಿಲ್ಲೆಯಲ್ಲಿ ಪ್ರತಿಷ್ಠಿತ ಸಹಕಾರಿ ಸಂಘ ಆಗಿ ಹೊರ ಹೊಮ್ಮಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹೇಳಿದರು.
ಆತ್ಮಶಕ್ತಿಯ ಚಿತ್ತರಂಜನ್
ಸಾಮಾನ್ಯ ಕುಟುಂಬದಿಂದ ಬಂದ ಶ್ರೀ ಚಿತ್ತರಂಜನ್ ಬೋಳಾರ್ ಶ್ರಮ ಮತ್ತು ಬದ್ದತೆಯ ಮೂಲಕ ಉನ್ನತ ಸಾಧನೆ ಮಾಡಿದ್ದಾರೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೇವಲ 10 ವರ್ಷಗಳಲ್ಲಿ 20 ಶಾಖೆಗಳಿಗೇರಿ, ನೂರಾರು ಮಂದಿಗೆ ಉದ್ಯೋಗಾವಕಾಶ ನೀಡಿದೆ. ಇದರ ಹಿಂದಿರುವ ಶಕ್ತಿ ಚಿತ್ತರಂಜನ್ ಬೋಳಾರ್ ಎಂದು ಅಭಿನಂದನಾ ಭಾಷಣಗೈದ ಶ್ರೀ ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜು ಮಂಗಳೂರಿನ ಪ್ರಾಧ್ಯಾಪಕರಾದ ಶ್ರೀ ಕೇಶವ ಬಂಗೇರ ಹೇಳಿದರು.
ಸನ್ಮಾನ:
ಚಿತ್ತರಂಜನ್ ಬೋಳಾರ್ ಅವರನ್ನು ಹೆತ್ತವರಾದ ಶ್ರೀ ರಾಘವ ಬೋಳಾರ್ ಮತ್ತು ಶ್ರೀಮತಿ ಪುಷ್ಪಾ ರಾಘವ ಹಾಗೂ ಪತ್ನಿ ಶ್ರೀಮತಿ ಉಷಾ ಚಿತ್ತರಂಜನ್ ಬೋಳಾರ್ ಅವರೊಂದಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಬಂಟರ ಯಾನೆ ನಾಡವರ ಮಾತೃ ಸಂಘ ಅಧಕ್ಷರಾದ ಶ್ರೀ ಅಜಿತ್ ಕುಮಾರ್ ರೈ ಮಾಲಾಡಿ , ಕಸಾಪ ಮಾಜಿ ಅಧಕ್ಷರಾದ ಶ್ರೀ ಹರಿಕೃಷ್ಣ ಪುನರೂರು , ಕಂಕನಾಡಿ ಗರೋಡಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಚಿತ್ತರಂಜನ್ ಕೆ., ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಶ್ರೀ ಪದ್ಮರಾಜ್ ಆರ್., ಗುರು ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷೆ ಶ್ರೀಮತಿ ಸುಮಲತಾ ನವೀನ್ಚಂದ್ರ ಡಿ. ಸುವರ್ಣ , ನಾಗರಿಕ ಸನ್ಮಾನ ಸಮಿತಿ ಅಧ್ಯಕ್ಷರು ಹಾಗೂ ಬೆಳುವಾಯಿ ಸಹಕಾರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ್ ಕೋಟ್ಯಾನ್, ಆತ್ಮಶಕ್ತಿ ತ್ರೈಮಾಸಿಕ ಪತ್ರಿಕೆಯ ಶ್ರೀ ವಾಮನ್ ಕೆ ಅತಿಥಿಗಳಾಗಿದ್ದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ವಿಶ್ವಕರ್ಮ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಡಾ. ಎಸ್.ಆರ್. ಹರೀಶ್ ಆಚಾರ್, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಉದಯ ಅಮೀನ್ ಮಟ್ಟು, ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಕೆ. ಹರಿಶ್ಚಂದ್ರ, ನಮ್ಮ ಕುಡ್ಲ ವಾಹಿನಿ ನಿರ್ದೇಶಕರಾದ ಶ್ರೀ ಲೀಲಾಕ್ಷ ಕರ್ಕೇರ, ಒಡಿಯೂರು ಸೌಹಾರ್ದ ಸಹಕಾರಿ ಸಂಘ ಅಧ್ಯಕ್ಷರಾದ ಶ್ರೀ ಸುರೇಶ್ ರೈ, ಶ್ರೀಗುರು ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಶ್ರೀ ಶೇಷಪ್ಪ ಕೋಟ್ಯಾನ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್, ನಿಧಿಲ್ಯಾಂಡ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಪರ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ನ ಮ್ಯಾನೆಜಿಂಗ್ ಡೈರೆಕ್ಟರ್ ಶ್ರೀ ಪ್ರಶಾಂತ್ ಕುಮಾರ್ ಸನಿಲ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಜಿ ಪರಮೇಶ್ವರ ಪೂಜಾರಿ, ಶ್ರೀ ಆನಂದ್ ಎಸ್ ಕೊಂಡಾಣ, ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಾಹಾಸ ಮರೋಳಿ, ಶ್ರೀ ಗೋಪಾಲ್ ಎಮ್. ಶ್ರೀಮತಿ ಚಂದ್ರಾವತಿ, ಶ್ರೀಮತಿ ಉಮಾವತಿ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿಗಳಾದ ಶ್ರೀ ಬಾಬು ಎಸ್. ಕರ್ಕೇರ, ಶ್ರೀ ಶೇಷಪ್ಪ ಅಮೀನ್ ಮತ್ತಿತ್ತರರು ಉಪಸ್ಥಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಮುದ್ದು ಮೂಡುಬೆಳ್ಳೆ ಪ್ರಸ್ತಾವನೆಗೈದರು. ಶ್ರೀ ದಿನೇಶ್ ಸುವರ್ಣ ರಾಯಿ ಮತ್ತು ಶ್ರೀಮತಿ ನಳಿನಾ ಪ್ರಮೋದ್ ನಿರೂಪಿಸಿದರು.