ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಶಾಖೆ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು. ಮಾತಾ ಅಮೃತಾನಂದಮಯಿ ಮಠ ಬೋಳೂರು, ಮಂಗಳೂರು. ಇದರ ನುರಿತ ತಜ್ಞ ವೈದ್ಯರ ತಂಡದವರಿಂದ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ, ಮಂಗಳೂರು. ಇವರ ಜಂಟಿ ಆಶ್ರಯದಲ್ಲಿ ಉಚಿತ ವೈದ್ಯಕೀಯ ಮತ್ತು ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ “ಆತ್ಮ ಶಕ್ತಿ ಸೌಧ”ದ ಸಭಾಂಗಣದಲ್ಲಿ ನಡೆಯಿತು.

ಈ ಕಾರ್ಯಕ್ರಮದ ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಕಾರ್ಯಕ್ರಮವು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಪಡೀಲ್ ಶಾಖೆಯಲ್ಲಿ ಜರುಗಿತು.
ಈ ಕಾರ್ಯಕ್ರಮದಲ್ಲಿ 200 ಕ್ಕೂ ಹೆಚ್ಚಿನ ಶಿಬಿರಾರ್ಥಿಗಳು ಪ್ರಯೋಜನವನ್ನು ಪಡಕೊಂಡಿರುತ್ತಾರೆ. ಸುಮಾರು 90 ಶಿಬಿರಾರ್ಥಿಗಳಿಗೆ ಈ ಸಂದರ್ಭದಲ್ಲಿ ಉಚಿತ ಕನ್ನಡಕವನ್ನು ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ವಾಮನ್ ಕೆ., ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಚಂದ್ರಹಾಸ್ ಮರೋಳಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯವಿಜಯ್, ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್, ಸಿಬ್ಬಂದಿಗಳಾದ ಶ್ರೀ ರಾಜೇಶ್ ಹಾಗೂ ಶ್ರೀ ಸಚಿನ್‍ರವರು ಉಪಸ್ಥಿತರಿದ್ದರು.