ಈ ಕಾರ್ಯಕ್ರಮದಲ್ಲಿಕರ್ನಾಟಕ ರಾಜ್ಯಸರ್ಕಾರ ಮಾನ್ಯ ಸಹಕಾರಿ ಸಚಿವರು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ “ಉತ್ತವi ಸಹಕಾರ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರಿಗೆ ನೀಡಿ ಗೌರವಿಸಲಾಯಿತು.
ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ನಿ). ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು, ಅಧ್ಯಕ್ಷರಾದ ಸನ್ಮಾನ್ಯ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಮಾನ್ಯ ಶಾಸಕರು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ವೇದ ವ್ಯಾಸ ಡಿ. ಕಾಮತ್, ಮಂಗಳೂರು ವಿಧಾನ ಸಭಾ ಕ್ಷೇತ್ರ ಮಾನ್ಯ ಶಾಸಕರಾದ ಸನ್ಮಾನ್ಯ ಶ್ರೀ ಯು.ಟಿ. ಖಾದರ್, ಕ್ಯಾಂಪ್ಕೋ, ಮಂಗಳೂರು ಅಧ್ಯಕ್ಷರಾದ ಶ್ರೀ ಕಿಶೋರ್ ಕುಮಾರ್ ಕೊಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನೀ., ಮಂಗಳೂರು ಅಧ್ಯಕ್ಷರಾದ ಶ್ರೀ ಕೆ.ಪಿ .ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳ ನಿ., ಮಂಗಳೂರು ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಎ . ಸುವರ್ಣ, ಕರ್ನಾಟಕ ಸರಕಾರ, ಬೆಂಗಳೂರು ಸಹಕಾರ ಸಂಘಗಳ ನಿಬಂಧಕಾರದ ಕ್ಯಾಪ್ಟನ್ ಡಾ|| ಕೆ. ರಾಜೇಂದ್ರ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನಿ. ಮಂಗಳೂರು ಅಧ್ಯಕ್ಷರಾದ ಶ್ರೀ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಕರ್ನಾಟಕ ರಾಜ್ಯ ಸರಕಾರ ಮಹಾಮಂಡಳ ನಿ. ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅರಳಿ ಸೂರ್ಯಕಾಂತ, ಐ.ಸಿ.ಡಿ.ಪಿ. ಬೆಂಗಳೂರು ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರವೀಣ್ ಬಿ. ನಾಯಕ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ, ಮಂಗಳೂರು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಡಿ . ಅಶೋಕ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನೀ., ಬೆಂಗಳೂರು ನಿರ್ದೇಶಕರಾದ ಶ್ರೀ ಬಿ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ನಿರ್ದೇಶಕರಾದ ಶ್ರೀ ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿ ಬೆಳಪು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನೀ. ಬೆಂಗಳೂರು ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್. ಶ್ರೀಧರ್, ಸಹಕಾರ ಸಂಘಗಳ ಜಂಟಿ ನಿಬಂಧಕರು ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಡಾ. ಉಮೇಶ್ ಜಿ , ದಕ್ಷಿಣ ಮತ್ತು ಉಡುಪಿ ಜಿಲ್ಲೆಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಲಕ್ಷ್ಮೀ ನಾರಾಯಣ ಜಿ ಎನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ಮಂಗಳೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀ ಕೆ. ಗೋಪಾಲಕೃಷ್ಣ ಭಟ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ (ರಿ), ಮಂಗಳೂರು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಪೂರ್ಣಿಮಾ ಶೆಟ್ಟಿ, ಮತ್ತಿತ್ತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರೀ ಗೋಪಾಲ್ ಎಮ್, ಶ್ರೀ ದಿವಾಕರ ಬಿ.ಪಿ ಹಾಗೂ ಶ್ರೀಮತಿ ಉಮಾವತಿ ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ನಿ. ಇವರಿಂದ ಸತತ 9ವರ್ಷದಿಂದ ಇ-ಸ್ಟಾಂಪಿಂಗ್ ಸೇವೆಗೆ ಪ್ರಶಸ್ತಿ, ಸತತ 8 ವರ್ಷಗಳಿಂದ ಸಂಘವು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ `ಸಾಧನಾ’ ಪ್ರಶಸ್ತಿ, ಮಂಗಳೂರಿನಲ್ಲಿ ನಡೆದ 63ನೇ & ಹಾವೇರಿಯಲ್ಲಿ ನಡೆದ 65ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಸಂಘಕ್ಕೆ `ಉತ್ತಮ ಸಹಕಾರಿ ಸಂಘ’, ವಿಮಾ ಕ್ಷೇತ್ರದಲ್ಲಿ ಸಾಧನೆಗೆ ರೆಲಿಗೇರ್ ಹೆಲ್ತ್ ಇನ್ಸೂರೆನ್ಸ್ ಕಂಪನಿ ಪ್ರಶಸ್ತಿ, ಯುವವಾಹಿನಿ ಕೇಂದ್ರ ಸಮಿತಿ (ರಿ) ಯಿಂದ ಯುವವಾಹಿನಿ ಸಾಧನಶ್ರೇಷ್ಠ ಪ್ರಶಸ್ತಿ, ಹೊಸದಿಲ್ಲಿಯ ಇಕೋನಾಮಿಕ್ ಗ್ರೋತ್ ಪೌಂಡೇಶನ್ ನಿಂದ ಆವಾರ್ಡ್ ಪೆÇೀರ್ ಎಕ್ಸ್‍ಲೆನ್ಸ್ ಇನ್ ಬೆಸ್ಟ್ ಕೋ-ಅಪರೆಟೀವ್ ಸೊಸೈಟಿ”ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದು, ಈ ಎಲ್ಲ ಸಾಧನೆಯೊಂದಿಗೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸತತ 4 ವರ್ಷಗಳಿಂದ `ಉತ್ತಮ ಸಹಕಾರಿ ಸಂಘ’ ಪ್ರಶಸ್ತಿಯನ್ನು ಪಡೆದಿರುವುದು ಸಂಘದ ಹೆಗ್ಗಳಿಕೆಯಾಗಿದೆ.