ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ನ ಅಧ್ಯಕ್ಷರಾದ ಶ್ರೀ ವಾಮನ್ ಕೆ. ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ಸೇವೆಯೊಂದಿಗೆ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸವಾಗಿದೆ. ಜನರು ಇನ್ನಷ್ಟು ಹೆಚ್ಚಿನ ಪ್ರಯೋಜನವನ್ನು ಪಡೆಯುವಂತಾಗಲಿ ಎಂದು ಶುಭ ಹಾರೈಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಮಾತನಾಡಿ ಸಂಘವು ಹಣಕಾಸಿನ ವ್ಯವಹಾರದೊಂದಿಗೆ ಸಾಮಾಜಿಕ ಸೇವೆಗೂ ಕೂಡ ಹೆಚ್ಚಿನ ಮಹತ್ವ ನೀಡುತ್ತಿದ್ದು ಸಂಘದ ವತಿಯಿಂದ ಗ್ರಾಹಕರು ಹಾಗೂ ಸಾರ್ವಜನಿಕರಿಗೆ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಶಿಬಿರ ಆಯೋಜಿಸುತ್ತಿದ್ದು, ವರ್ಷದಿಂದ ವರ್ಷಕ್ಕೆ ಶಿಬಿರದ ಪ್ರಯೋಜನ ಪಡೆಯುವವರ ಸಂಖ್ಯೆಯು ಹೆಚ್ಚಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಇದರ ಅಧ್ಯಕ್ಷರಾದ ಶ್ರೀ ನಾಗರಾಜ್ ಬಿ.ವಿ , ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಮತಿ ಮೇಗಿನ ಮನೆ , ಮ.ನ.ಪಾ ಸದಸ್ಯರಾದ ಶ್ರೀಮತಿ ವೀಣಾ ಮಂಗಳ , ಮಾತಾ ಅಮೃತಾನಂದಮಯಿ ಮಠ ಬೋಳೂರು ಇಲ್ಲಿಯ ವೈದ್ಯರಾದ ಡಾ| ದೇವ್‍ದಾಸ್ , ಡಾ| ಸುಚಿತ್ರಾ , ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಜ್ಜೋಡಿ ಇಲ್ಲಿಯ ವೈದ್ಯರಾದ ಡಾ| ಅರ್ಚನಾ , ಬ್ರಹ್ಮ ಬೈದರ್ಕಳ ಗರೋಡಿ ಕ್ಷೇತ್ರ ಕಂಕನಾಡಿ ಇಲ್ಲಿಂiÀi ಮೊಕ್ತೇಸರರಾದ ಶ್ರೀ ದಿನೇಶ್ ಅಂಚನ್ , ಎಲ್.ಐ.ಸಿ ಅಭಿವೃದ್ದಿ ಅಧಿಕಾರಿಯಾದ ಶ್ರೀ ಮನೋಜ್ ಕುಮಾರ್, ಉದ್ಯಮಿಗಳಾದ ಶ್ರೀ ಸೀತಾರಾಮ್ ಬಂಗೇರ , ಉದ್ಯಮಿಯಾದ ಶ್ರೀ ನಿತಿನ್ ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಆನಂದ್ ಎಸ್. ಕೊಂಡಾಣ , ಶ್ರೀ ಚಂದ್ರಹಾಸ್ ಮರೋಳಿ , ಶ್ರೀ ಗೋಪಾಲ್ ಎಮ್. , ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ (ರಿ.) ಇದರ ಪದಾಧಿಕಾರಿಗಳು ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಮತ್ತಿತ್ತರರು ಭಾಗವಹಿಸಿದ್ದರು. ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಮೇಲ್ವಿಚಾರಕರಾದ ಶ್ರೀ ಅಶೋಕ್ ಕುಮಾರ್ ರವರು ಸ್ವಾಗತಿಸಿದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ವಂದಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಪ್ರಧಾನ ಕಾರ್ಯದರ್ಶಿಯಾದ ಶ್ರೀ ಚಂದ್ರಹಾಸ್ ಕಟ್ಟಪುಣಿ ರವರು ಕಾರ್ಯಕ್ರಮ ನಿರೂಪಣೆ ಮಾಡಿದರು.