ಈ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಪೆÇ್ರಪೆಸರ್ ಹಾಗೂ ಎಚ್.ಓ.ಡಿ ಡಾ| ಬದ್ರಿನಾಥ್ ತಲ್ವಾರ್ , ಮಾತಾ ಅಮೃತಾನಂದಮಯಿ ಮಠದ ವೈದ್ಯರಾದ ಡಾ| ದೇವದಾಸ್ ಹಾಗೂ ಡಾ| ಸುಚಿತ್ರಾ ಸೊರಕೆರವರು ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ| ಬದ್ರಿನಾಥ್ ತಲ್ವಾರ್ ಇವರು ಮಾತನಾಡಿ ವೈದ್ಯಕೀಯ ಚಿಕಿತ್ಸೆಯ ಖರ್ಚು ವೆಚ್ಚಗಳ ಬಗ್ಗೆ ವಿವರಿಸಿದರು. ಇಂತಹ ಶಿಬಿರಗಳಿಂದ ಬಡ ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಡಾ|| ದೇವದಾಸ್ ರವರು ಮಾತನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಅನೇಕ ಸಮಾಜಮುಖಿ ಕೆಲಸ ಮಾಡುತ್ತಿದೆ. ಇದಕ್ಕೆ ನಮ್ಮ ಸಹಕಾರ ಸದಾ ಇರುತ್ತದೆ. ಮುಂದೆಯೂ ನಿರಂತರವಾಗಿ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕಳೆದ 10 ವರ್ಷಗಳಿಂದ ವೈದ್ಯಕೀಯ ಶಿಬಿರವನ್ನು ಏರ್ಪಡಿಸುತ್ತಿದ್ದು, ಸಾರ್ವಜನಿಕರು ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ನಮ್ಮ ಸಂಘದ ವತಿಯಿಂದ 50ನೇ ವೈದ್ಯಕೀಯ ಶಿಬಿರವು ದಿನಾಂಕ 23/04/2023 ರಂದು ಪ್ರಧಾನ ಕಚೇರಿ , ಪಡೀಲಿನಲ್ಲಿ ಜರಗಲಿದೆ. ಇದರ ಪ್ರಯೋಜನವನ್ನು ಎಲ್ಲರೂ ಪಡೆಯಬೇಕೆಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 200ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ವೈದ್ಯಕೀಯ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.
ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಆನಂದ್ ಎಸ್ ಕೊಂಡಾಣ , ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ ಎಂ, ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ಮತ್ತಿತ್ತತರು ಉಪಸ್ಥಿತರಿದ್ದರು.
ಸಂಘದ ಸಹಾಯಕ ಪ್ರಬಂಧಕರಾದ ಶ್ರೀ ವಿಶ್ವನಾಥ್ ಸ್ವಾಗತಿಸಿ, ಕೆ.ಸಿ ರೋಡ್ ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿಯವರು ವಂದಿಸಿದರು. ಮಾಡೂರು ಶಾಖೆಯ ಶಾಖಾಧಿಕಾರಿ ಶ್ರೀಮತಿ ಸೌಮ್ಯಲತಾರವರು ಕಾರ್ಯಕ್ರಮ ನಿರೂಪಿಸಿದರು.