ಆತ್ಮಶಕ್ತಿ ವಿವಿದ್ಧೋದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ 50ನೇ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ದಿನಾಂಕ 23-04-2023ನೇ ರವಿವಾರ ಬೆಳಗ್ಗೆ ಸಮಯ 9.00ರಿಂದ ಮಧ್ಯಾಹ್ನ 1.00ರ ವರೆಗೆ “ಆತ್ಮಶಕ್ತಿ ಸೌಧ” ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರುನಲ್ಲಿ ಜರುಗಿತು.


ಶಿಬಿರವು ಜುಲೇಖಾ ಯೆನೆಪೋಯ ಇನ್ಸಿಟ್ಯೂಟ್ ಆಫ್ ಓಂಕೋಲಜಿ ಮತ್ತು ಸಮುದಾಯ ದಂತ ವಿಭಾಗ, ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ , ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ದೇರಳಕಟ್ಟೆ ಯೆನೆಪೋಯ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ದ.ಕ. ಇವರ ಜಂಟಿ ಸಹಯೋಗದೊಂದಿಗೆ ಆಯೋಜಿಸಲಾಯಿತು.
ಗಣ್ಯರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀಯುತ ಚಿತ್ತರಂಜನ್ ಬೋಳಾರ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉಡುಪಿ ಹಾಗು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಟ್ಟು 29 ಶಾಖೆಗಳನ್ನು ಹೊಂದಿದ್ದು ಬ್ಯಾಂಕಿಂಗ್ ಸೇವೆಯ ಜೊತೆಗೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿ ಕಳೆದ ಹತ್ತು ವರ್ಷಗಳಿಂದ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿದೆ. ಸಂಘವು 49 ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸ್ಥಳೀಯ ಸಂಘ ಸಂಸ್ಥೆಗಳೊಂದಿಗೆ ಜಂಟಿಯಾಗಿ ಆಯೋಜನೆ ಮಾಡಿ ಸುಮಾರು 10000ಕ್ಕೂ ಮಿಕ್ಕಿ ಜನರಿಗೆ ಉಚಿತ ಆರೋಗ್ಯ ತಪಾಸಣೆ ,ಉಚಿತ ಶಸ್ತ್ರ ಚಿಕಿತ್ಸೆಗಳ ವ್ಯವಸ್ಥೆ ,ಉಚಿತ ಕನ್ನಡಕ ವಿತರಣೆ ಹಾಗೂ 300 ಕ್ಕೂ ಮಿಕ್ಕಿ ಅಗತ್ಯವುಳ್ಳವರಿಗೆ ಕಣ್ಣಿನ ಪೆÇರೆಯ ಶಸ್ತ್ರ ಚಿಕಿತ್ಸೆಯನ್ನು ಮಾಡಲಾಗಿದೆ ಎಂದು ತಿಳಿಸಿದರು ಹಾಗೂ ಸಂಘದ 30ನೇಯ ನೂತನ ಶಾಖೆಯನ್ನು ಮಾಣಿಯಲ್ಲಿ ಎಪ್ರಿಲ್ 30ರಂದು ತೆರೆಯಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸಮುದಾಯ ದಂತ ವಿಭಾಗ ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಪ್ರಿನ್ಸಿಪಾಲ್ ಡಾ. ಲಕ್ಷ್ಮೀಕಾಂತ್ ಚಾತ್ರ ಅವರು ಮಾತನಾಡಿ ಆರೋಗ್ಯವು ಎಲ್ಲರಿಗೂ ಅಗತ್ಯವಾದ ಒಂದು ಆಂಶ, ಎಲ್ಲರೂ ಇಂತಹ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು. ಹಾಗೂ 50ನೇ ಉಚಿತ ಬೃಹತ್ ಆರೋಗ್ಯ ಶಿಬಿರವನ್ನು ಏರ್ಪಡಿಸಿದಂತಹ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಶುಭ ಹಾರೈಸಿದರು.
ನಂತರ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರಿನ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆಯ ಮುಖ್ಯಸ್ಥರಾದ ಸಿ ಎ ಶಾಂತರಾಮ್ ಶೆಟ್ಟಿ ಅವರು ಮಾತನಾಡಿ ಅತ್ಯುತ್ತಮವಾದ ಆರೋಗ್ಯ ಶಿಬಿರವನ್ನು ಏರ್ಪಡಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಯೆನೆಪೋಯ ಆರ್ಯುವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವ್ಯವಸ್ಥಾಪಕರಾದ ಡಾ. ಲಕ್ಷ್ಮೀಶ ಉಪಾಧ್ಯಾಯ ಅವರು ಮಾತನಾಡಿ ಆರೋಗ್ಯವನ್ನು ಎಲ್ಲರೂ ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು. ಹಾಗೂ ಈ ಶಿಬಿರದಲ್ಲಿ ಎಲ್ಲರೂ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಹೃದಯ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿರುವ ಬಾಲಕಿ ಕುಮಾರಿ ಚಿಂತನ ಇವರಿಗೆ ಆತ್ಮಶಕ್ತಿ ವಿವಿದ್ದೋದೇಶ ಸಹಕಾರಿ ಸಂಘದ ವತಿಯಿಂದ ಹಣಕಾಸಿನ ನೆರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ 50ನೇ ಉಚಿತ ಬೃಹತ್ ಆರೋಗ್ಯ ಶಿಬಿರದ ಪ್ರಯುಕ್ತ ಸಂಘದ ಎಲ್ಲಾ ಆರೋಗ್ಯ ಶಿಬಿರಗಳನ್ನು ಯಶಸ್ವಿಯಾಗಿ ಆಯೋಜನೆ ಮಾಡಲು ಸಹಕರಿಸಿರುವ ಸುಮಾರು 50ಕ್ಕೂ ಮಿಕ್ಕಿ ವಿವಿಧ ಸಂಘ ಸಂಸ್ಥೆಗಳಿಗೆ ವೈದ್ಯರಿಗ್ರೆ ಹಾಗೂ ವೈದ್ಯರ ತಂಡದವರಿಗೆ ಸಂಘದ ಪರವಾಗಿ ಗೌರವಪೂರ್ವಕವಾಗಿ ಅಭಿನಂದನೆಯನ್ನು ಸಲ್ಲಿಸಲಾಯಿತು. ಶಿಬಿರದಲ್ಲಿ ತಜ್ಞ ವೈದ್ಯರು ಗಳಿಂದ ಕ್ಯಾನ್ಸರ್ ಹಾಗೂ ಇತರ ಕಾಯಿಲೆಗಳ ಕುರಿತು ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಸುಮಾರು 500 ಕ್ಕೂ ಮಿಕ್ಕಿ ಸಾರ್ವಜನಿಕರು ಶಿಬಿರದ ಸದುಪಯೊಗವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಇಂಡಿಯನ್ ರೆಡ್‍ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ ಮಂಗಳೂರು ದ.ಕ ಇದರ ಮುಖ್ಯಸ್ಥರಾದ ಸಿ ಎ ಶಾಂತರಾಮ್ ಶೆಟ್ಟಿ, ಯೆನೆಪೋಯ ಆರ್ಯುವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವ್ಯವಸ್ಥಾಪಕರಾದ ಡಾ.ಲಕ್ಷ್ಮಿಶ ಉಪಾಧ್ಯಾಯ, ಸಮುದಾಯ ದಂತ ವಿಭಾಗ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆ ವಿಭಾಗದ ಮುಖ್ಯಸ್ಥೆ ಡಾ. ರೇಖಾ ಪಿ ಶೆಣೈ, ಸಮುದಾಯ ದಂತ ವಿಭಾಗ ಯೆನೆಪೊಯ ದಂತ ಕಾಲೇಜು ಮತ್ತು ಆಸ್ಪತ್ರೆಯ ಪ್ರಿನ್ಸಿಪಾಲ್ ಡಾ. ಲಕ್ಷ್ಮೀಕಾಂತ ಚಾತ್ರ, ಜುಲೇಖಾ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಒಂಕೋಲಜಿ ಅಸಿಸ್ಟೆಂಟ್ ಪೆÇ್ರಫೆಸರ್ ಡಾ. ಲೆಪಾಕ್ಷಿ, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಸ್ಥಾಪಕಾಧ್ಯಕ್ಷರಾದ ಶ್ರೀ ವಾಮನ್ ಕೆ, ಯುವವಾಹಿನಿ ಮಂಗಳೂರು ಮಹಿಳಾ ಘಟಕ ಅಧ್ಯಕ್ಷರಾದ ಶ್ರೀಮತಿ ಸರಸ್ವತಿ, ಯೂತ್ ಸೆಂಟರ್ (ರಿ) ಪಡೀಲ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಉದಯ್ ಕೆ. ಪಿ,ನ್ಯೂ ಫ್ರೆಂಡ್ಸ್ ಕ್ಲಬ್ (ರಿ) ಪಡೀಲ್ ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಜೀತೇಶ್ ಪಡೀಲ್ , ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮಂಗಳೂರು ಇದರ ಸಹ ಸಂಚಾಲಕರಾದ ಶ್ರೀಮತಿ ರಮಣಿ ಶೆಟ್ಟಿ, ಗರೋಡಿ ಕಂಕನಾಡಿ ಬಿಲ್ಲವ ಸೇವಾ ಸಮಾಜದ ಅಧ್ಯಕ್ಷರಾದ ಶ್ರೀ ಭರತೇಶ್ ಅಮೀನ್, ಪ್ರಶಾಂತಿ ಮಹಿಳಾ ಮಂಡಳಿಯ ಸ್ಥಾಪಕಾಧ್ಯಕ್ಷರಾದ ಶ್ರೀ ಶೈಲಜಾ ಸತೀಶ್ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕಾರದ ಶ್ರೀ ಜಿ. ಪರಮೇಶ್ವರ ಪೂಜಾರಿ,ಶ್ರೀ ಆನಂದ ಎಸ್.ಕೊಂಡಾಣ , ಶ್ರೀ ಸೀತಾರಾಮ್ ಎನ್,ಶ್ರೀ ರಮಾನಾಥ್ ಸನಿಲ್,ಶ್ರೀ ಗೋಪಾಲ ಎಮ್, ಶ್ರೀಮತಿ ಉಮಾವತಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್, ಸಂಘದ ಸಲಹಾ ಸಮಿತಿಯ ಸದಸ್ಯರುಗಳು, ಹಾಗೂ ಸಂಘದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್. ಪಿ ವಂದಿಸಿದರು. ಸಂಘದ ಸಿಬ್ಬಂದಿಗಳಾದ ಶ್ರೀಮತಿ ಧನಲಕ್ಷೀ, ಕುಮಾರಿ ಮೇಘಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.