ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ, ಎಲ್ಲಾ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷŒವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘದಲ್ಲಿ ಲಭ್ಯವಿರುವ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು. ಸಂಘವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಇನ್ನೂ ಉತ್ತಮ ರೀತಿಯ Œಸೇವೆಗಳನ್ನು ನೀಡುವುದಾಗಿ ತಿಳಿಸಿದರು. ಸಂಘದ ಹೆಚ್ಚಿನ ಶಾಖೆಗಳಲ್ಲಿ ಮಹಿಳಾ ಸಿಬ್ಬಂದಿಗಳು ಶಾಖಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇದು ಮಹಿಳಾ ಸಬಲೀಕರಣಕ್ಕೆ ಕಾರಣವಾಗಿದೆ ಎಂದರು. ಸಂಘದ ಪ್ರತಿ ಶಾಖೆಗಳಲ್ಲೂ ವಾರ್ಷಿಕೋತ್ಸವ ಪ್ರಯುಕ್ತ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ ದಿನಗಳಲ್ಲಿ ನೀರುಮಾರ್ಗ ಶಾಖೆಯಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುವ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ತಿಳಿಸಿದರು. ಸಂಘವು ಮನ್ಸೂನ್ ಕೊಡುಗೆಯಾಗಿ ಚಿನ್ನಾಭರಣ ಈಡಿನ ಸಾಲಗಳ ಮೇಲೆ ಅತೀ ಕಡಿಮೆ ಬಡ್ಡಿ ದರ ಶೇ 8.88 ರ ಜೊತೆಗೆ ಉಚಿತ ಕೊಡುಗೆಯನ್ನು ನೀಡುವ ಮತ್ತು ಠೇವಣಿಗಳ ಮೇಲೆ ಶೇ 9.25ರಷ್ಟು ಬಡ್ಡಿಯನ್ನು ನೀಡುವ ಯೋಜನೆಯನ್ನು ಹಮ್ಮಿ ಕೊಂಡಿದೆ ಎಂದು ತಿಳಿಸಿದರು.
ಸಂಘದ ಸದಸ್ಯರಾದ ಶ್ರೀಮತಿ ರಂಜಿನಿರವರು ಸಂಘದ ವಾರ್ಷಿಕ ಕಾರ್ಯಕ್ರಮಕ್ಕೆ ಶುಭವನ್ನು ಹಾರೈಸಿ, ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಸಮಾಜಕ್ಕೆ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು. ಶ್ರೀಮತಿ ದಯಾವತಿಯವರು ಮಾತನಾಡಿ ಸಂಘವು ನನ್ನ ಗೃಹದ ಪುರ್ನನಿರ್ಮಾಣ ಮಾಡಿ ನನಗೆ ಸಹಾಯ ಹಸ್ತ ನೀಡಿದ ಹಾಗೇ ಸಮಾಜದ ಎಲ್ಲಾ ವರ್ಗದ ಜನರಿಗೂ ಸಹಾಯ ನೀಡುವಂತಾಗಲಿ ಎಂದರು.
ಸಂಘದ ಸದಸ್ಯರಾಗಿರುವ ಶ್ರೀಯುತ ಶ್ರೀ ಪುಟ್ಟಸ್ವಾಮಿ ಎಚ್ ರವರು ಸಂಘದ ನೂತನ ಶಾಖೆಯನ್ನು ಶೀಘ್ರದಲ್ಲಿ ಮೈಸೂರಿನಲ್ಲಿ ತೆರೆಯುವಂತಾಗಲಿ ಹಾಗೂ ಸಂಘದ ಸಿಬ್ಬಂದಿಗಳ ನಗುಮೊಗದ ಸೇವೆಯು ಗ್ರಾಹಕರನ್ನು ಆತ್ಮಶಕ್ತಿ ಸಂಘದತ್ತ ಸೆಳೆಯಲು ಕಾರಣವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ಬಿ.ಪಿ ದಿವಾಕರ, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ , ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಸಂಘದ ನೀರುಮಾರ್ಗ ಶಾಖೆಯ ಶಾಖಾಧಿಕಾರಿಯಾದ ಶ್ರೀ ಸಂದೀಪ್ ಸ್ವಾಗತಿಸಿ, ಸಿಬ್ಬಂದಿಯಾದ ಶ್ರೀಮತಿ ಟೀಷ್ಮ ವಂದಿಸಿದರು. ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ದೀಪಿಕ ಸನಿಲ್ ನಿರೂಪಿಸಿದರು.