ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್, ಮಂಗಳೂರು ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಬೆಂಗಳೂರು ಇದರ ಸಮನ್ವಯದಲ್ಲಿ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪೆÇ್ಲೀಮಾ ಇದರ 60ನೇ ಅಧಿವೇಶನದ ಉದ್ಘಾಟನಾ ಸಮಾರಂಭ ಹಾಗೂ 43 ಮತ್ತು 44ನೇ ಅಧಿವೇಶನದ ರ್ಯಾಂಕ್ ವಿಜೇತರಿಗೆ ಪದಕ ಪ್ರಧಾನ ಸಮಾರಂಭವು ದಿನಾಂಕ: 08.07.2023 ರಂದು “ಆತ್ಮಶಕ್ತಿ ಸೌಧ”, ”,ಬೈರಾಡಿಕೆರೆ ಹತ್ತಿರ, ಪಡೀಲ್, ಮಂಗಳೂರು ಇಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‍ರವರ ಅಧ್ಯಕ್ಷತೆ ಜರುಗಿತು.


ಕಾರ್ಯಕ್ರಮವನ್ನು ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ(ನಿ.) ಬೆಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಮ್. ಎನ್ ರಾಜೇಂದ್ರ ಕುಮಾರ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಲ್ಪಾವಧಿಯಲ್ಲಿ 30 ಶಾಖೆಯನ್ನು ತೆರೆದು ಸಾಧನೆಯನ್ನು ಮೆರೆದಂತಹ ಸಹಕಾರಿ ಸಂಘ, ಸಿಬ್ಬಂದಿಗಳ ಶಿಸ್ತುನ್ನು ಶ್ಲಾಘಿಸಿ, ಚಲದಿಂದ ಎಲ್ಲವನ್ನೂ ಸಾಧಿಸಲು ಸಾಧ್ಯ, ಪ್ರಶಿಕ್ಷಣದ ಮಹತ್ವ, ಕೋ- ಆಪರೇಶನ್ ಎಂದರೆ ಏನು ಮತ್ತು ಅದರ ಅರ್ಥ ಮತ್ತು ಪರಿಕಲ್ಪನೆಯ ಮಹತ್ವ, ದೇಶದಲ್ಲಿರುವ ಅನೇಕ ಸಹಕಾರಿ ಸಂಘದಲ್ಲಿ ಉದ್ಯೋಗ ಸೃಷ್ಟಿಯಾಗುತ್ತಿದ್ದು, ಅಭ್ಯರ್ಥಿ ಸಂದರ್ಶನ, ಹುದ್ದೆಗೆ ಆಯ್ಕೆ ಮಾಡುವಾಗ ಸದರಿ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪೆÇ್ಲೀಮ ಇದರ ಪ್ರಾಮುಖ್ಯತೆ ಅತ್ಯಗತ್ಯವೆಂದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್ ಮುಖ್ಯ ಅತಿಥಿಯಾಗಿ ಮಾತನಾಡಿ ಸರಕಾರದ ಹಲವು ಯೋಜನೆಗಳ ಅನುಷ್ಠಾನ ಮಾಡುವುದರಲ್ಲಿ ಮಹತ್ವದ ಕೊಡುಗೆಯನ್ನು ಸಹಕಾರಿ ಸಂಘಗಳು ನೀಡುತ್ತಿದೆ, ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪೆÇ್ಲೀಮ ಕೋರ್ಸು ಸಹಕಾರಿ ಸಂಘಗಳ ಬೆಳವಣಿಗೆಯಲ್ಲಿ ಜಿûರೋ ಎನ್.ಪಿ.ಎ ಕಾಯ್ದುಕೊಳ್ಳಲು ಪೂರಕವಾಗಿದೆ. ಸುಮಾರು 7 ವರ್ಷಗಳಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಬೆಂಗಳೂರು ಜೊತೆಗೂಡಿಕೊಂಡು ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪೆÇ್ಲೀಮ ನಡೆಸುವುದು ಹೆಮ್ಮೆಯ ವಿಷಯ, ದೂರದ ಬೆಂಗಳೂರಿಗೆ ತೆರಲುವ ಅವಶ್ಯಕತೆಯಿಲ್ಲವೆಂದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ ನವದೆಹಲಿಯ ನ್ಯಾಷನಲ್ ಕೌನ್ಸಿಲ್ ಫಾರ್ ಕೋ-ಆಪರೇಟಿವ್ ಟ್ರೈನಿಂಗ್ (ಎನ್.ಸಿ.ಸಿ.ಟಿ) ಇದರ ಅಂಗಸಂಸ್ಥೆ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಮ್) ಬೆಂಗಳೂರು, ಇವರಿಂದ ನಡೆಸಲ್ಪಡುವ ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪೆÇ್ಲೀಮ ತರಬೇತಿಯನ್ನು ಕಳೆದ ಎಳು ವರ್ಷಗಳಿಂದ ಮಂಗಳೂರನ್ನು ಕೇಂದ್ರಿಕೃತವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯ ಸಹಕಾರಿಗಳಿಗೆ ನೇರವಾಗುವ ನಿಟ್ಟಿನಲ್ಲಿ ನಿರಂತರವಾಗಿ ನಡೆಸುತ್ತಾ ಬಂದಿರುತ್ತದೆ.
ಈಗಾಗಲೇ ಸುಮಾರು 600ಕ್ಕೂ ಮಿಕ್ಕಿ ಶಿಕ್ಷಣಾರ್ಥಿಗಳು ಸಹಕಾರ ನಿರ್ವಹಣೆಯಲ್ಲಿ ಉನ್ನತ ಡಿಪೆÇ್ಲೀಮ ತರಬೇತಿಯನ್ನು ಪಡೆದಿದ್ದು, ಈ ತರಬೇತಿಯಲ್ಲಿ ಪ್ರಥಮ ರ್ಯಾಂಕ್ ಪಡೆದ ಗ್ಲೋರಿಯ ಕ್ರೇಡಿಟ್ ಕೋ-ಆಪರೇಟಿವ್ ಸೊಸೈಟಿಯ ಸಿಬ್ಬಂದಿ ಶ್ರೀಮತಿ ಒಲಿವಿಯ ಪ್ರಶಾಂತಿ ರೆಬೆಲ್ಲೋ ಚಿನ್ನದ ಪದಕ, ದ್ವಿತೀಯ ರ್ಯಾಂಕ್ ಪಡೆದ ಖಾಸಗಿ ಸಂಸ್ಥೆಯಲ್ಲಿ ಲೆಕ್ಕಿಗರಾಗಿರುವ ಕುಮಾರಿ ಮಧುರ ಹಾಗೂ ತೃತೀಯ ರ್ಯಾಂಕ್ ಪಡೆದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಿಬ್ಬಂದಿಯಾದ ಶ್ರೀಮತಿ ಅಕ್ಷತಾ ರವರಿಗೆ ಬೆಳ್ಳಿಯ ಪದಕವನ್ನು ನೀಡಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲ(ನಿ.) ಬೆಂಗಳೂರು ಇದರ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಮ್. ಎನ್ ರಾಜೇಂದ್ರ ಕುಮಾರ್ ರವರಿಗೆ ಅಂತರ್‍ರಾಷ್ಟ್ರೀಯ ಪ್ರಶಸ್ತಿ ಲಭಿಸಿದ ಹಿನ್ನಲೆಯಲ್ಲಿ ಸಂಘದ ಸಿಬ್ಬಂದಿಗಳು ಮತ್ತು ಎಚ್.ಡಿ.ಸಿ.ಎಮ್ ಶಿಕ್ಷಣಾರ್ಥಿಗಳ ವತಿಯಿಂದ ಗೌರವಿಸಲಾಯಿತು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಎರಡನೇ ಬಾರಿಗೆ ಆಯ್ಕೆಯಾದ ಶ್ರೀ ಡಿ. ವೇದವ್ಯಾಸ್ ಕಾಮತ್‍ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಲಿ.) ಮಂಗಳೂರು ಇದರ ನಿರ್ದೇಶಕರಾದ ಶ್ರೀ ಶಶಿಕುಮಾರ್ ರೈ ಬಲ್ಯೋಟ್ಟು, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ., ನಿರ್ದೇಶಕರುಗಳಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್ ಕೊಂಡಾಣ, ಸೀತಾರಾಮ್ ಎನ್, ಶ್ರೀ ರಮನಾಥ್ ಸನಿಲ್, ಶ್ರೀ ಬಿ.ಪಿ ದಿವಾಕರ್, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ, ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತು ಕರ್ನಾಟಕ ರಾಜ್ಯ ಕೋ-ಆಪರೇಟಿವ್ ಅಪೆಕ್ಸ್ ಬ್ಯಾಂಕ್(ಲಿ.) ಬೆಂಗಳೂರು ಇದರ ನಿವೃತ್ತ ಅಧಿಕಾರಿ ಶ್ರೀ ಎಸ್. ಜಿ. ಕುಲಕರ್ಣಿ ಮತ್ತು ಆರ್.ಐ.ಸಿ.ಎಮ್ ಬೆಂಗಳೂರು ಇದರ ತರಬೇತಿ ಸಮನ್ವಯ ಅಧಿಕಾರಿ ಹಾಗೂ ಉಪನ್ಯಾಸಕರಾದ ಶ್ರೀ ಸುರೇಶ್ ಪಿ.ಎನ್ ಉಪಸ್ಥಿತರಿದ್ದರು. ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ರವರು ವಂದಿಸಿದರು, ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.