ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತೊಕ್ಕೊಟ್ಟು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ “ಸಹಕಾರ ರತ್ನ” ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ತೊಕ್ಕೊಟ್ಟು ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಕೆ. ರಘುಚಂದ್ರ ಬಳ್ಳಾಲ್ , ಶ್ರೀ ಪಿ. ಸಂಜೀವ ಶೆಟ್ಟಿ ಮತ್ತು ಶ್ರೀ ಚಂದ್ರಶೇಖರ್ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಘಾಟಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಸಂಘದ ಅಭಿವೃದ್ಧಿಯಲ್ಲಿ ಆಡಳಿತ ಮಂಡಳಿಯೊಂದಿಗೆ ಸಿಬ್ಬಂದಿ ವರ್ಗ, ಎಲ್ಲಾ ಸದಸ್ಯರು ಹಾಗೂ ಗ್ರಾಹಕರ ಸಹಕಾರದಿಂದ ಪ್ರತಿ ವರ್ಷದಂತೆ ಈ ವರ್ಷವು ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಸಂಘವು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಶಾಖೆಗಳನ್ನು ತೆರೆದು ಗ್ರಾಹಕರಿಗೆ ಇನ್ನೂ ಉತ್ತಮ ರೀತಿಯ Œಸೇವೆಗಳನ್ನು ನೀಡುವುದಾಗಿ ತಿಳಿಸಿದರು. ಸಂಘದ ಪ್ರತಿ ಶಾಖೆಗಳಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸುತ್ತಿದ್ದು, ಮುಂಬರುವ ದಿನಗಳಲ್ಲಿ ತೊಕ್ಕೊಟ್ಟು ಶಾಖೆಯಲ್ಲೂ ಉಚಿತ ವೈದ್ಯಕೀಯ ಶಿಬಿರವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು. ಸಂಘವು ಮಾನ್ಸೂನ್ ಕೊಡುಗೆಯಾಗಿ ಚಿನ್ನಾಭರಣ ಈಡಿನ ಸಾಲಗಳ ಮೇಲೆ ವಿಶೇಷ ಬಡ್ಡಿ ದರ ಶೇ 8.88 ರ ಜೊತೆಗೆ ಉಚಿತ ಕೊಡುಗೆಯನ್ನು ನೀಡುತ್ತಿದ್ದು,ಠೇವಣಿಗಳ ಮೇಲೆ ಕೂಡಾ ಆಕರ್ಷಕ ಬಡ್ಡಿಯನ್ನು ನೀಡುವ ಮೂಲಕ ಗ್ರಾಹಕ ಸೈಹಿ ಸಹಕಾರಿ ಸಂಘವಾಗಿ ಗುರುತಿಸಿ ಕೊಂಡಿದೆ ಎಂದು ತಿಳಿಸಿದರು. ಸಂಘದಲ್ಲಿ ಲಭ್ಯವಿರುವ ಸೇವೆಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಗ್ರಾಹಕರಲ್ಲಿ ವಿನಂತಿಸಿದರು.
ಸಂಘದ ಸದಸ್ಯರಾದ ಶ್ರೀ ಕೆ. ರಘುಚಂದ್ರ ಬಳ್ಳಾಲ್ ಸಂಘದ ವಾರ್ಷಿಕೋತ್ಸವಕ್ಕೆ ಶುಭವನ್ನು ಹಾರೈಸಿ, ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು. ಶ್ರೀ ಪಿ. ಸಂಜೀವ ಶೆಟ್ಟಿ ಮಾತನಾಡಿ ಸಂಘವು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿದೆ. ಸಿಬ್ಬಂದಿಗಳ ಉತ್ತಮ ರೀತಿಯ ಸೇವೆಯನ್ನು ಶ್ಲಾಘಿಸಿದರು ,ಸಂಘವು ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಗ್ರಾಹಕರಿಗೆ ಸೇವೆಯನ್ನು ನೀಡುವಂತಾಗಲಿ ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ದಿವಾಕರ್ ಬಿ.ಪಿ, ಶ್ರೀಮತಿ ಉಮಾವತಿ , ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ ರೋಡ್ ಶಾಖೆಯ ಹಿರಿಯ ಶಾಖಾಧಿಕಾರಿಯಾದ ಶ್ರೀಮತಿ ಹರಿಣಾಕ್ಷಿ ಪ್ರಶಾಂತ್ ಸ್ವಾಗತಿಸಿ, ತೊಕ್ಕೊಟ್ಟು ಶಾಖೆಯ ಗುಮಾಸ್ತೆಯಾದ ಕುಮಾರಿ ರತಿಕರವರು ವಂದಿಸಿದರು. ತೊಕ್ಕೊಟ್ಟು ಶಾಖೆಯ ಪ್ರಭಾರ ಶಾಖಾಧಿಕಾರಿಯಾದ ಶ್ರೀಮತಿ ಭವ್ಯರವರು ನಿರೂಪಿಸಿದರು.