ಈ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಸಹಕಾರ ಸಚಿವರಾದ ಶ್ರೀ ಕೆ. ಎನ್. ರಾಜಣ್ಣ ಹಾಗೂ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ, ಮಾನ್ಯ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2023 ನೇ ಸಾಲಿನ “ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಇವರಿಗೆ ನೀಡಿ ಗೌರವಿಸಿದರು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಶ್ರೀ ಯು.ಟಿ ಖಾದರ್ ,ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್, ಮಾನ್ಯ ಶಾಸಕರು ಹಾಗೂ, ,ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ್ ಡಿ.ಕಾಮತ್,ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಭರತ್ ಶೆಟ್ಟಿ ವೈ.ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಎ. ಸುವರ್ಣ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಶ್ರೀ ಸುಧೀರ್ ಶೆಟ್ಟಿ ಕಣ್ಣೂರು,ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಕೆ.ಪಿ. ಸುಚರಿತ ಶೆಟ್ಟಿ, ಶ್ರೀ ಮಂಜುನಾಥ ಪ್ರಸಾದ್ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಸಹಕಾರ ಇಲಾಖೆ, ಕರ್ನಾಟಕ ಸರ್ಕಾರ ಕ್ಯಾಪ್ಟನ್ ಡಾ. ಕೆ. ರಾಜೇಂದ್ರ ಸಹಕಾರ ಸಂಘಗಳ ಉಪನಿಬಂಧಕರು, ಕರ್ನಾಟಕ ರಾಜ್ಯ ಬೆಂಗಳೂರು.,ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ನಿರ್ದೇಶಕರುಗಳಾದ ಶ್ರೀ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಬಿ.ಸಿ. ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎಸ್. ನವೀನ್, ದ.ಕ. ಜಿಲ್ಲಾ ಕೇಂದ್ರ ಸಹಕಾರ್ ಬ್ಯಾಂಕಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಕೆ. ಗೋಪಾಲಕೃಷ್ಣ ಭಟ್,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ,ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್. ಶ್ರೀಧರ್, ದ.ಕ. ಜಿಲ್ಲೆಯ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಹೆಚ್.ಎನ್,ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ವಿವೇಕ್ ಡಿ, ಮುಲ್ಕಿ-ಮೂಡಬಿದ್ರೆ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಅಭಯ್ಚಂದ್ರ ಜೈನ್ ಮತ್ತಿತ್ತರ ಗೌರವ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮವು ನೇರವೇರಿತು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ. ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಮ್, ಶ್ರೀ ಬಿ.ಪಿ ದಿವಾಕರ್ಹಾಗೂ ಶ್ರೀಮತಿ ಉಮಾವತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.