ರಾಷ್ಟಿಯ ಪತ್ರಿಕಾ ದಿನಾಚರಣೆ ಮತ್ತು ಸುವರ್ಣ ಕರ್ನಾಟಕ ಸಂಭ್ರಮದ ಪ್ರಯುಕ್ತ ಪತ್ರಕರ್ತರ ವೇದಿಕೆ ಬೆಂಗಳೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ ಹಾಗೂ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಬೆಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಸಮಾರಂಭವು ಜರುಗಿತು.

ಸಹಕಾರ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟç ಮಟ್ಟದಲ್ಲಿ ಸಲ್ಲಿಸಿದ ಅಭೂತಪೂರ್ವ ಸೇವೆಯನ್ನು ಗುರುತಿಸಿ ಮಂಗಳೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಚಿಂತಕರು ಮತ್ತು ನಿವೃತ್ತ ಡಿ.ಸಿ.ಪಿ.ಯವರಾದ ಶ್ರೀ ಬಸವರಾಜ್ ಮಾಲಗತ್ತಿಯವರು ನೀಡಿ ಗೌರವಿಸಿದರು. ಈ ಕಾರ್ಯಕ್ರಮವು ಬೆಳಗಾಂನ ಹಿರಿಯ ನ್ಯಾಯವಾದಿಗಳಾದ ಶ್ರೀ ಕೆ.ಎಲ್ ಕುಂದರಗಿಯವರ ಸಮ್ಮೇಳನ ಅಧ್ಯಕ್ಷತೆಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಶ್ರೀ ವಿ.ಎಸ್. ಕೃಷ್ಣ, ಹಿರಿಯ ಪತ್ರಕರ್ತರಾದ ಶ್ರೀ ಜಾಣಗೆರೆ ವೆಂಕಟರಾಮಯ್ಯ, ಶ್ರೀ ದೊಡ್ಡಪ್ಪಗೌಡ ಪಾಟೀಲ್ ನರಿಬೋಳಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಶ್ರೀ ಶಿವನಾಂದ ತಗಡೂರು, ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ಸಂಗಮೇಶ್ ಬಾದವಾಡಗಿ, ಕರ್ನಾಟಕ ರಕ್ಷಣಾ ವೇದಿಕೆ, ಜನಸೇನೆ, ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಶ್ರೀ ಗೋಪಾಲಗೌಡರು ಆರ್.ಪಿ., ಪತ್ರಕರ್ತರುಗಳಾದ ಶ್ರೀ ಶ್ರೀಕಾಂತ್, ಶ್ರೀ ಎಸ್.ಕೆ ರಾಜು, ಶ್ರೀ ವೈ ಮಂಜುನಾಥ್, ಪತ್ರಕರ್ತರು ಹಾಗೂ ಸಾಹಿತಿಗಳಾದ ಶ್ರೀ ಬಿ.ಎಸ್.ಮಾಲಿಪಾಟೀಲ್ ಕಲಬುರಗಿ., ಡಾ.ಬಿ.ಆರ್. ಹಿರೇಮಠ, ಸಾಹಿತಿಗಳು, ಬೆಂಗಳೂರು. ಮತ್ತಿತ್ತರರು ಉಪಸ್ಥಿತರಿದ್ದರು. ಡಾ. ಸಿದ್ದಯ್ಯ ಪುರಾಣಿಕ್ ಸ್ಮಾರಕ ಟ್ರಸ್ಟ್ನ ಶ್ರೀ ಮಹೇಶ್ ಸೂರ್ವೆ ಕಾರ್ಯಕ್ರಮ ನಿರೂಪಿಸಿದರು.