ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಲಾಲ್‌ಭಾಗ್ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ’’ಶ್ರೀಯುತ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಲಾಲ್‌ಭಾಗ್ ಶಾಖೆಯಲ್ಲಿ ಜರಗಿತು. ಈ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶ್ರೀ ಶಶಿಧರ್ ಹೆಗ್ಡೆ ಯವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಉದ್ಟಾಟಿಸಿದರು.

ಕಾರ್ಯಕ್ರಮ ಉದ್ಟಾಟಿಸಿ ಮಾತನಾಡಿದ ಮಾಜಿ ಮೇಯರ್ ಶ್ರೀ ಶಶಿಧರ್ ಹೆಗ್ಡೆ ರವರು ಮಾತಾನಾಡಿ ಆತ್ಮಶಕ್ತಿ ಸಹಕಾರಿ ಸಂಘವು ಕ್ರೀಯಾಶೀಲ ಅಧ್ಯಕ್ಷರು ಹಾಗೂ ಉತ್ತಮ ಆಡಳಿತ ಮಂಡಳಿ ನಿರ್ದೇಶಕರನ್ನು ಹೊಂದಿ ಬ್ಯಾಂಕಿOಗ್ ಕ್ಷೇತ್ರದಲ್ಲಿ ಇತಿಹಾಸವನ್ನು ಹೊಂದಿದೆ. ಜಗತ್ತಿನಲ್ಲೇ ಅನೇಕ ಸರಕಾರಿ ಹಾಗೂ ಖಾಸಗಿ ಬ್ಯಾಂಕ್‌ಗಳು ದೊಡ್ಡ ಮಟ್ಟದಲ್ಲಿ ಬೆಳೆದಿದ್ದು, ಅವುಗಳಲ್ಲಿ ಆತ್ಮಶಕ್ತಿ ಸಂಘವು ಬೆಳೆದಿರುವುದು ತುಂಬಾ ಸಂತೋಷದ ವಿಷಯ . ಸಹಕಾರ ಕ್ಷೇತ್ರದಲ್ಲಿ ಈ ಸಂಘವು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಆರ್ಥಿಕತೆಯ ಜೊತೆಗೆ ಮಹಿಳೆಯರಿಗೆ ಉತ್ತಮ ಸ್ಥಾನಮಾನದೊಂದಿಗೆ ಸ್ವಾವಲಂಬಿಯಾಗುವ ಅವಕಾಶ ಕಲ್ಪಿಸಿಕೊಟ್ಟಿದೆ.ಸಂಘವು ಇನ್ನು ಮುಂದೆಯೂ ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಹಾಗೂ ಉತ್ತಮ ಭಾಂಧವ್ಯವನ್ನು ಹೊಂದುವ ಮೂಲಕ ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಲಿ ಎಂದು ಹಾರೈಸಿದರು.
ಸಂಘದ ಸದಸ್ಯರಾದ ಶ್ರೀ ಪಿ ಸುರೇಂದ್ರ ರಾವ್ ಇವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದು ದಕ್ಷಿಣ ಕನ್ನಡದ ಉತ್ತಮ ಸಹಕಾರಿ ಸಂW ಎಂದು ಪ್ರಶಂಶಿಸಿದರು. ಸದಸ್ಯರಾದ ಶ್ರೀ ಮಂಜುನಾಥ್ ಶೆಣೈ ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಲಾದ ಗ್ರಾಹಕರ ಸಭೆಗೆ ಸಂತಸವನ್ನು ವ್ಯಕ್ತಪಡಿಸಿದರು. ವಕೀಲರಾದ ಶ್ರೀಮತಿ ಲ್ಯಾನಿ ಮರಿಯಾ ಪಿಂಟೋ ಸಿಬ್ಬಂದಿಗಳ ನಗುಮೊಗದ ಸೇವೆಯೇ ಗ್ರಾಹಕರನ್ನು ಸೆಳೆಯಲು ಕಾರಣವಾಗಿದೆ ಎಂದರು. ಸದಸ್ಯರಾದ ಶ್ರೀ ರಾಜಾರಾಮ್ ನಾಯಕ್, ಬಿ ರಾಮಚಂದ್ರ ಶಾನ್ ಭಾಗ್ ಗ್ರಾಹಕರ ಸಭೆಗೆ ಶುಭವನ್ನು ಹಾರೈಸಿ ಸಂಘವು ಇನ್ನಷ್ಟು ಉತ್ತುಂಗಕ್ಕೆ ಏರಿ ಹಲವಾರು ಶಾಖೆಗಳನ್ನು ತೆರೆದು ಜನರಿಗೆ ಉತ್ತಮ ಸೇವೆಯನ್ನು ನೀಡುವಂತಾಗಲಿ ಎಂದು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ “ಸಹಕಾರ ರತ್ನ’’ ಶ್ರೀಯುತ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ ಗ್ರಾಹಕ ಸಭೆಯ ಮುಖ್ಯ ಉದ್ದೇಶ ಸಂಘ ಮತ್ತು ಸದಸ್ಯರ ಬಾಂದವ್ಯ ವನ್ನು ಬೆಸೆಯುವುದು. ಸದಸ್ಯರು ಮತ್ತು ಗ್ರಾಹಕರು ಉತ್ತಮ ಅಭಿಪ್ರಾಯªನ್ನು ತಿಳಿಸಿದ್ದಲ್ಲಿ ಮಾತ್ರ ಕಾರ್ಯಗತ ಮಾಡಲು ಸಾಧ್ಯವಾಗುತ್ತದೆ. ಸಂಘವು ಈ ಕಿರು ಅವಧಿಯಲ್ಲಿ ಬೆಳೆಯಬೇಕಾದರೆ ಸಂಘದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಸಾದ್ಯವಾಗಿದೆ. ಸಂಘದಲ್ಲಿ ಲಭ್ಯವಿರುವ ವಾಹನ, ಆರೋಗ್ಯ ವಿಮಾ ಸೌಲಭ್ಯ
ವನ್ನು ಹಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಪಡೆದುಕೊಳ್ಳುವಂತೆ ವಿನಂತಿದರು. ಆಯ್ದ ರಜಾ ದಿನಗಳಲ್ಲಿಯೂ ಇ ಸ್ಟಾಂಪಿAಗ್ ಲಭ್ಯವಿದ್ದು ಇದರ ಪ್ರಯೋಜವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಜಿ ಪರಮೇಶ್ವರ ಪೂಜಾರಿ, ಶ್ರೀ ಸೀತಾರಾಮ್ ಎನ್ , ಶ್ರೀ ಬಿ ಪಿ ದಿವಾಕರ್, ಶ್ರೀ ಗೋಪಾಲ್ ಎಮ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಹಾಗೂ ಮತ್ತಿತ್ತರರು ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಗ್ರಾಹಕರು ಭಾಗವಹಿಸಿದ್ದರು.
ಶಾಖೆಯ ಸಿಬ್ಬಂದಿ ಶ್ರೀಮತಿ ಸುಮಲತಾರವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ರವಿಕಲಾ ಇವರು ವಂದಿಸಿದರು. ಕುಮಾರಿ ಪ್ರತೀಕ್ಷ ಕಾರ್ಯಕ್ರಮ ನಿರೂಪಿಸಿದರು.