ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಕಾಪು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ರೋಟರಿ ಕ್ಲಬ್‌ನ ಸಹಭಾಗಿತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಮತ್ತು ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈಯನ್ಸ್ ಮುಕ್ಕ ಇಲ್ಲಿಯ ವೈದ್ಯರ ಸಹಕಾರದೊಂದಿಗೆ ಹೊಸ ಮಾರಿಗುಡಿ ಬಳಿಯಲ್ಲಿರುವ ಸಂಘದ ವಠಾರದಲ್ಲಿ ನ. 28ರಂದು ಉಚಿತ ನೇತ್ರ ತಪಾಸಣಾ ಮತ್ತು ದಂತಾ ಚಿಕಿತ್ಸಾ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ವ್ಯ.ಸೇ.ಸ. ಸಂಘದ ಅಧ್ಯಕ್ಷ ಮತ್ತು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಐಕಳಭಾವ ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಅಲ್ಪಾವಧಿಯಲ್ಲಿಯೇ 30 ಶಾಖೆಗಳನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು ರಾಜ್ಯಕ್ಕೆ ಮಾದರಿಯಾದ ಸಂಸ್ಥೆಯಾಗಿ ಮೂಡಿಬರುತ್ತಿದೆ. ಬ್ಯಾಂಕಿOಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು ಕಾಪುವಿನ ಜನತೆಯ ಪೂರ್ಣ ಆಶೀರ್ವಾದ ಮತ್ತು ಸಹಕಾರ ಸಂಘದ ಮೇಲಿರಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮಾತನಾಡಿ, ಕಾಪು ಮಾರಿಯಮ್ಮನ ಸನ್ನಿದಿಯಲ್ಲಿ ಶಾಖೆಯನ್ನು ಆರಂಭಿಸಿ, ಸಂಘದ ಪ್ರಥಮ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ಹಮ್ಮಿಕೊಳ್ಳುವ ಮೂಲಕ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇತರೆಲ್ಲಾ ಸಹಕಾರಿ ಸಂಘಗಳಿಗೆ ಮಾದರಿಯಾಗಿ ಮೂಡಿ ಬಂದಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತನಾಡಿ, ನಮ್ಮ ಸಂಘದ ಪ್ರತೀ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಈಗಾಗಲೇ 56 ಶಿಬಿರಗಳನ್ನು ನಡೆಸಲಾಗಿದೆ. ಈವರೆಗೆ 12000 ಕ್ಕೂ ಅಧಿಕ ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗಿದೆ. ಮುಂದಿನ ಡಿ. 10 ರಂದು ಮಂಗಳಾದೇವಿಯಲ್ಲಿ ಮಹಿಳೆಯರ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದ್ದು ಶಿಬಿರದಲ್ಲಿ ಮ್ಯಾಮೋಗ್ರಾಮ್, ಪ್ಯಾಪ್ ಸ್ಮೀಯರ್ ಪರೀಕ್ಷೆಗಳನ್ನು ನಡೆಸಲಾಗುವುದು. ಶಿಬಿರಾರ್ಥಿಗಳು ವೈದ್ಯರು ನೀಡಿದ ಸಲಹೆಗಳನ್ನು ಪಡೆದುಕೊಂಡು ಪ್ರಾರಂಭದಲ್ಲೇ ತಮ್ಮ ಆರೋಗ್ಯ ಸಮಸ್ಯೆಗಳನ್ನು ತಿಳಿದು ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವoತಾಗಲಿ ಎಂಬ ಆಶಯ ನಮ್ಮದಾಗಿದೆ ಎಂದರು.
ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಕಾಪು ರೋಟರಿ ಕ್ಲಬ್ ಅಧ್ಯಕ್ಷ ರಾಜೇಂದ್ರನಾಥ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಮ್ ಕಾಪು, ಬಿಲ್ಲವ ಸಹಾಯಕ ಸಂಘ ಕಾಪು (ರಿ.)ಇದರ ನಿಕಟ ಪೂರ್ವ ಅಧ್ಯಕ್ಷರಾದ ಮಾಧವ ಆರ್. ಪಾಲನ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ಸದಾಶಿವ ಭಟ್, ರೋಟರಿ ಕ್ಲಬ್ ವಲಯ ಸಂಯೋಜಕರಾದ ಶ್ರೀನಿವಾಸ ರಾವ್‌ರವರು ಶುಭ ಹಾರೈಸಿದರು.
ಉಡುಪಿ ಪ್ರಸಾದ್ ನೇತ್ರಾಲಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಮೋಹನ್ ಪ್ರಸಾದ್ ಮತ್ತು ಶ್ರೀನಿವಾಸ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈಯನ್ಸ್ ಮುಕ್ಕ ವಿಭಾಗದ ಡಾ| ವಿದ್ಯಾ ಭಟ್ ಹಲ್ಲಿನ ಶುಚಿತ್ವದ ಬಗ್ಗೆ ವಿವರಿಸಿದರು. ಸುಮಾರು ೩೦೦ಕ್ಕೂ ಅಧಿಕ ಮಿಕ್ಕಿ ಶಿಬಿರದಲ್ಲಿ ಪಾಲ್ಗೊಂಡು ದಂತ ಚಿಕಿತ್ಸೆ, ಕಣ್ಣಿನ ತಪಾಸಣೆಯಲ್ಲಿ ಭಾಗವಹಿಸಿದ್ದು ಶಿಬಿರಾರ್ಥಿಗಳಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಯಿತು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ ಸನಿಲ್, ಗೋಪಾಲ್ ಎಂ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಕಾಪು ಮಹಾಬಲ ಮಾಲ್ ನ ಆಡಳಿತ ನಿರ್ದೇಶಕ ಯೋಗಿಶ್ ಶೆಟ್ಟಿ, ಕಾಪು ಶ್ರೀ ಲಕ್ಷಿ÷್ಮÃಜನಾರ್ದನ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಮೋಹನ್ ಎಮ್. ಬಂಗೇರ, ಉಡುಪಿ ಪ್ರಸಾದ್ ನೇತ್ರಾಲಯ ವೈದ್ಯೆ ಡಾ| ಅಹನ, ಕಾಪು ಯುವವಾಹಿನಿ ನಿಯೋಜಿತ ಅಧ್ಯಕ್ಷ ಸೂರ್ಯನಾರಾಯಣ, ಪೊಯ್ಯ ಪೊಡಿಕಲ್ಲ ಗರೋಡಿ ಸೇವಾ ಯುವ ಸಮಿತಿ ಮಾಜಿ ಅಧ್ಯಕ್ಷ ಸುರೇಶ್ ಅಂಚನ್, ಕಾಪು ರೋಟರಿ ಕ್ಲಬ್‌ನ ಪದಾಧಿಕಾರಿಗಳಾದ ಬಾಲಕೃಷ್ಣ ಆಚಾರ್ಯ, ಮನೋಹರ್ ರಾವ್ ಕೆ., ಲಕ್ಷಿ÷್ಮÃನಾರಾಯಣ ತಂತ್ರಿ, ಮಾಧವ ಸಾಲ್ಯಾನ್ ಹಾಗೂ ಮತ್ತಿತರರು ಉಪಸ್ಧಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ಸ್ವಾತಿ ಸ್ವಾಗತಿಸಿದರು. ಶಾಖಾಧಿಕಾರಿ ಚೈತ್ರ ವಂದಿಸಿದರು. ಮಾನವ ಸಂಪನ್ಮೂಲ ಅಧಿಕಾರಿ ದೀಪಿಕ ಸನಿಲ್ ಕಾರ್ಯಕ್ರಮ ನಿರೂಪಿಸಿದರು.