ಈ ಕಾರ್ಯಕ್ರಮವನ್ನು ಡಾ|| ಅಶಿತ್ ಪ್ರೊಫೆಸರ್, ಡಿಪಾರ್ಟ್ಮೆಂಟ್ ಆಫ್ ಒರ್ಥೊಡೊಂಟಿಸ್ಟ್ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಂಗಳೂರು ಇವರು ಉದ್ಘಾಟಿಸಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಉನ್ನತಿಗೆ ಮುಖ್ಯವಾದ ಕಾರಣ ಎಂದರು. ಸಮಾಜದ ಜನರು ಯಾವುದೇ ರೋಗ ಬರುವವರೆಗೆ ಕಾಯಬಾರದು ಅದಕ್ಕೂ ಮುನ್ನ ಖಾಯಿಲೆಯ ಬಗ್ಗೆ ಮುನ್ನೆಚ್ಚರಿಗೆ ವಹಿಸಿ ಇಂತಹ ಶಿಬಿರದ ಉಪಯೋಗ ಪಡೆದು ಕೊಳ್ಳುವಂತೆ ವಿನಂತಿಸಿದರು.
ಈ ಕಾರ್ಯಕ್ರಮದ ಮುಖ್ಯ ಅಥಿತಿಯಾಗಿ ಆಗಮಿಸಿದ ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರಾದ ಶ್ರೀ ಶ್ರೀಧರ ಭಟ್ ಇವರು ಮಾತನಾಡಿ ಸಹಕಾರ ಸಂಘವು ಕೇವಲ ಲಾಭದ ದೃಷ್ಟಿಯಿಂದ ಕೆಲಸ ಮಾಡದೇ ಸಹಕಾರ ತತ್ವದ ಮೂಲಕ ಸಹಕಾರ ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಸಂಘವು ಉನ್ನತಿಯತ್ತ ಸಾಗುತ್ತದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಈ ನಿಟ್ಟಿನಲ್ಲಿ ಉನ್ನತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅಥಿತಿಯಾದ ಮಡಂತ್ಯಾರ್ ಗ್ರಾಮ ಪಂಚಾಯತಿನ ಅಧ್ಯಕ್ಷರಾದ ಶ್ರೀಮತಿ ರೂಪಾ ನವೀನ್ ಇವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಡಂತ್ಯಾರಿನಲ್ಲಿ ಶಾಖೆಯನ್ನು ತೆರೆದು ಪ್ರಥಮ ವರ್ಷ ಪೂರೈಸುತ್ತಿರುವ ಈ ಶುಭ ಸಂದರ್ಭದಲ್ಲಿ ಇಂತಹ ಬೃಹತ್ ವೈದ್ಯಕೀಯ ಶಿಬಿರವನ್ನು ಆಯೋಜಿಸಿ ಮಡಂತ್ಯಾರ್ ಜನತೆಗೆ ತುಂಬಾ ಉಪಯುಕ್ತವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತಾನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು ೫೮ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ೫೯ನೇ ಶಿಬಿರವು ಇದಾಗಿದೆ ಎಂದರು. ಹಣವನ್ನು ಯಾವಾಗ ಬೇಕಾದರೂ ಸಂಪಾದಿಸಬಹುದು ಆದರೆ ಆರೋಗ್ಯವನ್ನು ಸಂಪಾದಿಸಿಲು ಸಾಧ್ಯವಿಲ್ಲ , ಜನರು ತಮ್ಮ ಆರೋಗ್ಯ ಕಡೆಗೆ ಗಮನವನ್ನು ಹರಿಸಬೇಕೆಂದು ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷಧಿ ವಿತರಣೆ , ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೨,೦೦೦ ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಾರ್ವಜನಿಕರು ನಮ್ಮೊಂದಿಗೆ ಕೈ ಜೋಡಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಅಂಚೆ ಇಲಾಖೆ- ಪುತ್ತೂರು ವಿಭಾಗದ ಸಹಯೋಗದೊಂದಿಗೆ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವನ್ನು ಆಯೋಜಿಸಲಾಯಿತು
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಗೋಪಾಲ್ ಎಂ, ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ.) ಮಡವು ಇದರ ಕಾರ್ಯದರ್ಶಿ ಶ್ರೀ ವಿನುತ್ ಕೊಡ್ಲಕ್ಕೆ, ಜೆಸಿಐ ಮಡಂತ್ಯಾರು ಇದರ ಅಧ್ಯಕ್ಷರಾದ ಶ್ರೀ ವಿಕೇಶ್ ಮಾನ್ಯ ಹಾಗೂ ಪೂರ್ವಾಧ್ಯಕ್ಷರಾದ ಶ್ರೀ ಅಶೋಕ್ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರಾದ ಶ್ರೀ ಶ್ರೀಧರ್ ಭಟ್, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ರೀಜನಲ್ ಆಪರೇಷನಲ್ ಮ್ಯಾನೇಜರ್‌ರಾದ ಶ್ರೀಮತಿ ಶೈಲಾ ಲೋಬೊ, ಮಡಂತ್ಯಾರು ಪಂಚಾಯತ್ ಅಧ್ಯಕ್ಷರು ಶ್ರೀಮತಿ ರೂಪ ನವೀನ್, ಸದಸ್ಯರಾದ ಶ್ರೀ ವಿಶ್ವನಾಥ್ ಪೂಜಾರಿ, ಶ್ರೀ ದುರ್ಗಾ ಕಾಂಪ್ಲೆûûಕ್ಸ್ ಕಲಾ ಸಭಾಂಗಣದ ಮಾಲಿಕರಾದ ಶ್ರೀ ತಿಮ್ಮಪ್ಪ ಗೌಡ , ಮಡಂತ್ಯಾರು ಶಾಖೆಯ ಶಾಖಾಧಿಕಾರಿ ಕುಮಾರಿ ಸುರಕ್ಷ ಹಾಗೂ ಮತ್ತಿತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೩೦೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಉಚಿತ ಔಷಧಿ ವಿತರಣೆ, ಕಣ್ಣಿನ ತಪಾಸಣೆ ಮತ್ತು ಕ್ಯಾನ್ಸರ್ ತಪಾಸಣೆ ಮಾಡಲಾಯಿತು..
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಇವರು ಸ್ವಾಗತಿಸಿ ಹಿರಿಯ ಶಾಖಾಧಿಕಾರಿ ಶ್ರೀಮತಿ ರವಿಕಲಾ ವಂದಿಸಿದರು. ಮಾನವ ಸಂಪನ್ಮೂಲ ಅಧಿಕಾರಿ ಶ್ರೀಮತಿ ದೀಪಿಕ ಸನಿಲ್‌ರವರು ಕಾರ್ಯಕ್ರಮ ನಿರೂಪಿಸಿದರು,