ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಇದರ ಸ್ಥಾಪನಾ ದಿನಾಚರಣೆಯ ಪ್ರಯುಕ್ತ ‘ಆತ್ಮಶಕ್ತಿ ಸೌಧ’ ಸಭಾಂಗಣ, ಪಡೀಲ್‌ನಲ್ಲಿ ಜರುಗಿದ ಸಮಾರಂಭದಲ್ಲಿ ಸಂಘದಲ್ಲಿ ಸೇವೆ ಸಲ್ಲಿಸಿರುತ್ತಿರುವ ಪಿಗ್ಮಿ ಸಂಗ್ರಾಹಕರಿಗೆ ಉಚಿತ ಆರೋಗ್ಯ ವಿಮಾ ಕಾರ್ಡ್ ಅನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ವೇದವ್ಯಾಸ ಕಾಮತ್‌ರವರು ವಿತರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ ಸಂಘದ ಬೆಳವಣಿಗೆಗೆ ಸಹಕಾರ ನೀಡಿದ ಸರ್ವರನ್ನು ಅಭಿನಂದಿಸಿ, ಸಂಘದ ಪಿಗ್ಮಿ ಸಂಗ್ರಹಕಾರರು ಸಂಘದ ಅಡಿಪಾಯವಾಗಿದ್ದು, ಸಂಘದಲ್ಲಿ ೧೦೦ಕ್ಕೂ ಅಧಿಕ ಪಿಗ್ಮಿ ಸಂಗ್ರಾಹಕರು ಸೇವೆ ಸಲ್ಲಿಸುತ್ತಿದ್ದು, ಅವರ ಆರೋಗ್ಯದ ಕಾಳಜಿಯಿಂದ ಉಚಿತ ಆರೋಗ್ಯ ವಿಮೆಯನ್ನು ಸಂಘದ ವತಿಯಿಂದ ನೀಡಲಾಗುತ್ತಿದೆ. ಈ ಸಂದರ್ಭದಲ್ಲಿ ಸಂಘದಲ್ಲಿ ೨ ವರ್ಷಕ್ಕೂ ಅಧಿಕ ಸೇವೆ ಸಲ್ಲಿಸುತ್ತಿರುವ ಪಿಗ್ಮಿ ಸಂಗ್ರಾಹಕರಿಗೆ ಸಂಘದ ವತಿಯಿಂದ ಉಚಿತ ಆರೋಗ್ಯ ವಿಮಾ ಕಾರ್ಡ್ ಅನ್ನು ವಿತರಿಸಲಾಗುತ್ತಿದೆ ಎಂದರು.
ಈ ಕಾರ್ಯಕ್ರಮದಲ್ಲಿ ನಝೀಮಾ ಇನ್ಸುಟ್ಯೂಟ್ ಆ¥s಼ï ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಯು.ಟಿ.ಝುಲ್ಫಿಕರ್ ಅಹಮದ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಪ್ರಕಾಶನ ಮತ್ತು ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷರಾದ ಶ್ರೀ ವಾಮನ್ ಕುದ್ರೋಳಿ, ಸಂಘದ ನಿರ್ದೇಶಕರಾದ ಶ್ರೀ ಜಿ ಪರಮೇಶ್ವರ ಪೂಜಾರಿ, ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ಸೀತಾರಾಮ್ ಎನ್., ಶ್ರೀ ರಮಾನಾಥ ಸನಿಲ್, ಶ್ರೀ ಚಂದ್ರಹಾಸ ಮರೋಳಿ, ಶ್ರಿ ಬಿ.ಪಿ.ದಿವಾಕರ್, ಶ್ರೀ ಗೋಪಾಲ್ ಎಮ್. ಮತ್ತು ಶ್ರೀಮತಿ ಉಮಾವತಿ ಹಾಗೂ ಸಂಘದ ಸಲಹೆಗಾರರಾದ ಶ್ರೀ ಅಶೋಕ್ ಕುಮಾರ್, ಸಂಘದ ಪಿಗ್ಮಿ ಏಜೆಂಟರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಈ ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ ಸ್ವಾಗತಿಸಿ, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ವಂದಿಸಿದರು. ಸಂಘದ ಶಾಖಾಧಿಕಾರಿ ಶ್ರೀಮತಿ ಧನಲಕ್ಷಿ÷್ಮ ಕಾರ್ಯಕ್ರಮ ನಿರೂಪಿಸಿದರು.