ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಮಂಗಳೂರು ಇದರ ಸ್ಥಾಪನಾ ದಿನಾಚರಣೆ ಪ್ರಯುಕ್ತ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಗುರುಮಂದಿರದ ಪ್ರತಿಷ್ಠಾ ವರ್ಧಂತ್ಯುತ್ಸವದ ಪ್ರಯುಕ್ತ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ್ರ , ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ), ದೇರಳಕಟ್ಟೆ ಹಾಗೂ ಶ್ರೀನಿವಾಸ ಇನ್ಸ್ಟ್ಯೂಟ್ ಆಫ್ ಡೆಂಟಲ್ ಸಾಯನ್ಸ್, ಮುಕ್ಕ ಇವರ ನುರಿತ ತಜ್ಞ ವೈದ್ಯ ತಂಡದವರಿAದ ಉಚಿತ ವೈದ್ಯಕೀಯ, ನೇತ್ರ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಸಿ.ಎಸ್.ಸಿ ಮಂಗಳೂರು ಇದರ ವತಿಯಿಂದ ವಿಶ್ವಕರ್ಮ, ಆಯುಷ್ಮಾನ್ ಭಾರತ್, ಇಶ್ರಮ್ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ, ಜಪ್ಪಿನಮೊಗರು ಇಲ್ಲಿ ಜರುಗಿತು.


ಈ ಕಾರ್ಯಕ್ರಮವನ್ನು ಜಪ್ಪಿನಮೊಗರುವಿನ ಉದ್ಯಮಿಗಳಾದ ಶ್ರೀ ಲಕ್ಷಿ÷್ಮÃನಾರಾಯಣ ಕಂರ್ಬಿಸ್ಥಾನ ಇವರು ಉದ್ಘಾಟಿಸಿ , ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಕಾಳಜಿ ಮಾಡುತ್ತಿರುವುದು ಪ್ರಶಂಸನೀಯ ಎಂದರು. ಸಂಘವು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರ ನೇತ್ರತ್ವದಲ್ಲಿ ತುಂಬಾ ಒಳ್ಳೆಯ ಸೇವೆಯನ್ನು ನೀಡುತ್ತಿದೆ ಹಾಗೂ ಮುಂದಕ್ಕೂ ಜನರಿಗೆ ಉತ್ತಮ ಸೇವೆಯನ್ನು ನೀಡುವಂತೆ ಭಗವಂತನು ಸೌಭಾಗ್ಯವನ್ನು ನೀಡಲೆಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸ್ಥಳೀಯ ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಶ್ರೀಮತಿ ವೀಣಾಮಂಗಳರವರು ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಪ್ರತೀ ವರ್ಷ ಶಿಬಿರವನ್ನು ಏರ್ಪಡಿಸುತ್ತಿದ್ದು, ಈ ಶಿಬಿರದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಕೈ ಜೋಡಿಸುತ್ತಾ ಬಂದಿರುವುದರ ಜೊತೆಗೆ ಉತ್ತಮ ರೀತಿಯಲ್ಲಿ ಈ ಬಾರಿ ವಿಶ್ವಕರ್ಮ, ಆಯುಷ್ಮಾನ್ ಭಾರತ್, ಇಶ್ರಮ್ ಕಾರ್ಡ್ ಉಚಿತ ನೋಂದಣಿ ಶಿಬಿರವನ್ನು ಆಯೋಜಿಸಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು ೬೦ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ೬೧ನೇ ಶಿಬಿರವು ಇದಾಗಿದೆ ಎಂದರು. ಸಂಘವು ಪ್ರತಿ ವರ್ಷ ಜಪ್ಪಿನಮೊಗರುವಿನ ಜನತೆಯ ಆರೋಗ್ಯದ ಕಾಳಜಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ.) ಜಪ್ಪಿನಮೊಗರು ಇದರ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಾ ಬರುತ್ತಿದೆ. ಜನರು ತಮ್ಮ ಆರೋಗ್ಯ ಕಡೆಗೆ ಗಮನವನ್ನು ಹರಿಸಬೇಕು ಹಾಗೂ ಸರಕಾರದಿಂದ ದೊರೆಯುವ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಮತ್ತು ವಿವಿಧ ಕುಶಲ ಕರ್ಮಿಗಳಿಗೆ ವಿಶ್ವಕರ್ಮ ಯೋಜನೆಯ ನೋಂದಣಿ ಮಾಡಿಸಿ ತಾವು ಸ್ವಂತ ಉದ್ಯೋಗ ಮಾಡಿ ತಮ್ಮ ವ್ರತ್ತಿಯಲ್ಲಿ ಸ್ವತಂತ್ರ÷್ಯರಾಗಬೇಕು ಹಾಗೂ ಇಶ್ರಮ್ ಕಾರ್ಡ್ನ ಪ್ರಯೋಜನ ಪಡೆಯುವಂತೆ ತಿಳಿಸಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷಧಿ ವಿತರಣೆ , ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ೨೦೦೦೦ಕ್ಕೂ ಮಿಕ್ಕಿ ಜನರು ಪ್ರಯೋಜನ ಪಡೆದಿದ್ದು, ಒಟ್ಟು ೧೩,೦೦೦ ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ). ಸಿ.ಎಸ್.ಸಿ ಮಂಗಳೂರು ಇದರ ವತಿಯಿಂದ ವಿಶ್ವಕರ್ಮ, ಆಯುಷ್ಮಾನ್ ಭಾರತ್, ಇಶ್ರಮ್ ಕಾರ್ಡ್ ಉಚಿತ ನೋಂದಣಿ ಶಿಬಿರವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷರಾದ ಶ್ರೀ ನಾಗರಾಜ್ ಬಿ.ವಿ, ರವರು ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಜಪ್ಪಿನಮೊಗರು ಕಂರ್ಬಿಸ್ಥಾನದ ದೈವ ಪಾತ್ರಿಯಾದ ಶ್ರೀ ಉಮನ್ ಪೂಜಾರಿ, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃಧ್ಧಿ ಕೇಂದ್ರ , ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಆರೋಗ್ಯ ಅಧಿಕಾರಿಯಾದ ಡಾ. ಅಜ್ಮಲ್, ಶ್ರೀನಿವಾಸ ಇನ್ಸ್ಟ್ಯೂಟ್ ಆ¥s಼ï ಡೆಂಟಲ್ ಸಾಯನ್ಸ್ನ ದಂತ ವೈದ್ಯರಾದ ಡಾ. ಅದ್ರ ಎಮ್. ಪಿ. , ಡಾ. ಅನ್ವಿಕಾ ಅಶೋಕ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ರಮಾನಾಥ್ ಸನಿಲ್, ಶ್ರೀ ಗೋಪಾಲ್ ಎಂ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ದಿನೇಶ್ ಅಂಚನ್, ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಮತಿ ಚಂದ್ರಶೇಖರ್, ಸಂಘದ ಎಲ್ಲಾ ಪದಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿಸಿ ಟ್ರಸ್ಟ್ನ ಮೇಲ್ವಿಚಾರಕರಾದ ಶ್ರೀಮತಿ ಸರಸ್ವತಿ ಹಾಗೂ ಮತ್ತಿತ್ತರರು ಉಪಸ್ಧಿತರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು ೨೫೦ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ದಂತ ತಪಾಸಣಾ, ಉಚಿತ ಔಷಧಿ ವಿತರಣೆ ಮತ್ತು ಕಣ್ಣಿನ ತಪಾಸಣೆ ಮಾಡಲಾಯಿತು..
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಕಾರ್ಯದರ್ಶಿಯಾದ ಶ್ರೀ ಅಶೋಕ್ ತಂದೊಳಿಗೆ ಇವರು ಸ್ವಾಗತಿಸಿ ಕೋಶಾಧಿಕಾರಿಯಾದ ಶ್ರೀ ಚಿತ್ರಾಕ್ಷ ಪೂಜಾರಿ ಯವರು ವಂದಿಸಿದರು. ಸಂಘದ ಪದಾಧಿಕಾರಿ ಶ್ರೀ ಚಂದ್ರಹಾಸ ಕಟ್ಟಪುಣಿ ಕಾರ್ಯಕ್ರಮ ನಿರೂಪಿಸಿದರು,