ಕೇರ್ ಇನ್ಸೂರೆನ್ಸ್ ಕಂಪೆನಿಯ ಅಂತಾರಾಷ್ಟಿçÃಯ ಸಮ್ಮೇಳನವು ನೆದರ್‌ಲ್ಯಾಂಡನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆಯಿತು. ಈ ಸಮ್ಮೇಳನದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟçಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರಿಗೆ ಕೇರ್ ಇನ್ಸೂರೆನ್ಸ್ ಕಂಪೆನಿಯ ರಾಷ್ಟಿçÃಯ ಮುಖ್ಯಸ್ಥರಾದ ಶ್ರೀ ಶರ್ಮಿಲ್ ಮೋದಿರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ವಲಯ ಮುಖ್ಯಸ್ಥರಾದ ಶ್ರೀ ಜಗದೇವ್ ಸಿಂಗ್, ಶ್ರೀ ಹರಿಂದಾಮ್ ಸಿನ್ಹ ಮತ್ತಿತ್ತರರು ಉಪಸ್ಥಿತರಿದ್ದರು.


ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ಸೇವೆಯ ಜೊತೆಗೆ ಆರೋಗ್ಯ ಪೂರ್ಣ ಸ್ವಸ್ಥ ಸಮಾಜ ನಿರ್ಮಾಣಕ್ಕೆ ನಿರಂತರವಾಗಿ ಆರೋಗ್ಯ ಕ್ಷೇತ್ರದಲ್ಲಿ ಸೇವೆಯನ್ನು ಸಲ್ಲಿಸುತ್ತಾ ಬರುತ್ತಿದೆ. ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು ಸಂಘವು ಈಗಾಗಲೇ ಒಟ್ಟು ೬೩ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, ಈ ಶಿಬಿರಗಳಲ್ಲಿ ಕಡುಬಡವರಿಗೆ ಉಚಿತ ಔಷದಿ ವಿತರಣೆ, ಆರೋಗ್ಯ ತಪಾಸಣೆ, ದಂತ ತಪಾಸಣೆ ಮತ್ತು ಚಿಕಿತ್ಸೆ, ಉಚಿತ ಆರೋಗ್ಯ ಕಾರ್ಡ್ ವಿತರಣೆ, ೪೦೦ಕ್ಕೂ ಮಿಕ್ಕಿ ಕಣ್ಣಿನ ಶಸ್ತçಚಿಕಿತ್ಸೆ ಹಾಗೂ ೧೪,೦೦೦ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆಯನ್ನು ಸಂಘದ ವತಿಯಿಂದ ಮಾಡಲಾಗಿದೆ. ಅಲ್ಲದೇ ವಿಮಾ ಕ್ಷೇತ್ರದ ೮ಕ್ಕೂ ಅಧಿಕ ಕಂಪೆನಿಗಳೊAದಿಗೆ ಒಡಂಬಡಿಕೆ ಮಾಡಿಕೊಂಡು ಆರೋಗ್ಯ, ವಾಹನ ಹಾಗೂ ಜೀವ ವಿಮಾ ಸೇವೆಯನ್ನು ಸಂಘದ ಸದಸ್ಯರಿಗೆ ಸ್ಮರ್ಧಾತಕ ದರದಲ್ಲಿ ನೀಡುತ್ತಾ ಬರುತ್ತಿದ್ದು, ಹೆಚ್ಚಿನ ಗ್ರಾಹಕರು ಇದರ ಪ್ರಯೋಜನವನ್ನು ಪಡೆದಿದ್ದಾರೆ. ಸಂಘವು ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಸತತ ೮ ವರ್ಷಗಳಿಂದ ಪ್ರಶಸ್ತಿಗಳನ್ನು ಪಡೆದಿರುವ ಸಂಸ್ಥೆಯಾಗಿದೆ.