ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಕಾಪು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಕಾಪು ರೋಟರಿ ಕ್ಲಬ್ ಇವರ ಸಹಭಾಗಿತ್ವದಲ್ಲಿ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇವರ ನುರಿತ ತಜ್ಞ ವೈದ್ಯರ ಸಹಕಾರದೊಂದಿಗೆ ಹೊಸ ಮಾರಿಗುಡಿ ಬಳಿಯಲ್ಲಿರುವ ಸಂಘದ ವಠಾರದಲ್ಲಿ ನ. 22 ರಂದು ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಪು ವ್ಯ.ಸೇ.ಸ. ಸಂಘದ ಅಧ್ಯಕ್ಷರು ಮತ್ತು ಎಸ್.ಸಿ.ಡಿ.ಸಿ.ಸಿ ಬ್ಯಾಂಕ್‌ನ ನಿರ್ದೇಶಕರಾದ ಐಕಳಭಾವ ದೇವಿಪ್ರಸಾದ್ ಶೆಟ್ಟಿ ರವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಂಗಳೂರಿನಲ್ಲಿ ಸ್ವಂತ ಕಟ್ಟಡವನ್ನು ಹೊಂದಿ, ಅಲ್ಪಾವಧಿಯಲ್ಲಿಯೇ 33 ಶಾಖೆಗಳನ್ನು ತೆರೆದು, ಠೇವಣಿ ಮತ್ತು ಸಾಲ ನೀಡುವಿಕೆಯಲ್ಲಿ ಪ್ರತಿ ವರ್ಷ ಲಾಭಗಳಿಸಿ, ಪ್ರಗತಿಯ ಪಥದಲ್ಲಿ ಸಾಗುತ್ತಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಆತ್ಮಕ್ಕೆ ಹತ್ತಿರವಾಗಿರುವ ಸಹಕಾರಿ ಸಂಘವಾಗಿ ವಿಶ್ವಾಸವನ್ನು ಗಳಿಸಿ ರಾಜ್ಯಕ್ಕೆ ಮಾದರಿಯಾದ ಸಂಸ್ಥೆಯಾಗಿ ಮೂಡಿ ಬರುತ್ತಿದೆ. ಬ್ಯಾಂಕಿ0ಗ್ ಕ್ಷೇತ್ರದ ಜೊತೆಗೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೂಡ ಹಮ್ಮಿಕೊಂಡು ಬರುತ್ತಿದ್ದು, ಕಾಪುವಿನ ಜನತೆಯ ಪೂರ್ಣ ಆಶೀರ್ವಾದ ಮತ್ತು ಸಹಕಾರ ಸಂಘದ ಮೇಲಿರಲಿ ಎಂದು ಶುಭ ಹಾರೈಸಿದರು.

ಕಾಪು ಪುರಸಭೆಯ ಅಧ್ಯಕ್ಷರಾದ ಕುಮಾರಿ ಹರಿಣಾಕ್ಷಿ ದೇವಾಡಿಗರವರು ಮಾತನಾಡಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಇತರೆಲ್ಲಾ ಸಹಕಾರಿ ಸಂಘಗಳಿಗೆ ಮಾದರಿಯಾಗಿ ಉನ್ನತವಾಗಿ ಅಭಿವೃದ್ಧಿ ಹೊಂದಲಿ ಎಂದರು.
ರೋಟರಿ ಕ್ಲಬ್ ಕಾಪು ಇದರ ಅಧ್ಯಕ್ಷರಾದ ರೋ. ಬಾಲಕೃಷ್ಣ ಎಸ್. ಆಚಾರ್ಯ ಇವರು ಮಾತನಾಡಿ ನಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಉತ್ತಮವಾಗಿ ಜೀವನ ನಡೆಸಲು ನೆಮ್ಮದಿಯ ಆರೋಗ್ಯ ಅವಶ್ಯಕವಾಗಿ ಬೇಕಾಗಿರುತ್ತದೆ. ಇಂತಹ ಆರೋಗ್ಯ ಶಿಬಿರವನ್ನು ನಡೆಸುತ್ತಾ ಬಂದಿರುವ0ತಹ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾರ್ಯ ಬಹಳ ಪ್ರಶಂಸನೀಯ ಹಾಗೂ ಶ್ಲಾಘನೀಯ ಎಂದರು.
ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ.ವಾಸುದೇವ ಶೆಟ್ಟಿ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ನಮ್ಮ ಸಂಘದ ಪ್ರತೀ ಶಾಖೆಗಳ ವಾರ್ಷಿಕೋತ್ಸವ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿದ್ದು 77ನೇ ಉಚಿತ ಆರೋಗ್ಯ ಶಿಬಿರವು ಇದಾಗಿದೆ. ಈವರೆಗೆ 16,500ಕ್ಕೂ ಅಧಿಕ ಮಂದಿಗೆ ಉಚಿತವಾಗಿ ಕನ್ನಡಕ ವಿತರಿಸಲಾಗಿದೆ. ಶಿಬಿರಾರ್ಥಿಗಳು ವೈದ್ಯರು ನೀಡಿದ ಸಲಹೆಗಳನ್ನು ಪಡೆದುಕೊಂಡು ಪ್ರಾರಂಭದಲ್ಲೇ ತಮ್ಮ ಆರೋಗ್ಯ ಸಮಸ್ಯೆಗಳನ್ನು ತಿಳಿದು ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವAತಾಗಲಿ ಎಂಬ ಆಶಯ ನಮ್ಮದಾಗಿದೆ. ಸಂಘದ ಸದಸ್ಯರು ಮತ್ತು ಗ್ರಾಹಕರ ಪ್ರೋತ್ಸಾಹದಿಂದ ಸಂಘವು ರೂ. 250 ಕೋಟಿಗೂ ಅಧಿಕ ಠೇವಣಿ, ರೂ.200 ಕೋಟಿಗೂ ಅಧಿಕ ಸಾಲ ವಿತರಿಸಿದೆ. ಸಂಘವು ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ 7 ಬಾರಿ ರಾಜ್ಯ ಪ್ರಶಸ್ತಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿ0ದ 9 ವರ್ಷಗಳಿಂದ “ಸಾಧನಾ ಪ್ರಶಸ್ತಿ”, ಆರೋಗ್ಯ ವಿಮೆ ಯೋಜನೆಯ ಗುರಿ ಮೀರಿದ ಸಾಧನೆಗಾಗಿ ಸತತ 9 ವರ್ಷಗಳಿಂದ “ವಿಮಾ ಪ್ರಶಸ್ತಿ” ಮತ್ತು ಕರ್ನಾಟಕ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ(ನಿ) ಬೆಂಗಳೂರು ಇವರಿಂದ ಸತತ 10 ವರ್ಷಗಳಿಂದ ಇ-ಸ್ಟಾಂಪಿ0ಗ್ ಸೇವೆಗೆ ರಾಜ್ಯ ಹಾಗೂ ಜಿಲ್ಲಾ ಪ್ರಶಸ್ತಿ ಪಡೆಯಲು ಸಂಘದ ಸದಸ್ಯರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರ ಕಠಿಣ ಪರಿಶ್ರಮದಿಂದ ಮತ್ತು ಕಾರ್ಯದಕ್ಷತೆಯಿಂದ ಸಾಧ್ಯವಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮಾನಾಥ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ದಿ ಕೇಂದ,್ರ ಯೆನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ, ದೇರಳಕಟ್ಟೆ ಹಾಗೂ ಸಮುದಾಯ ದಂತ ವಿಭಾಗ , ಯೆನೆಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇದರ ವೈದ್ಯರಾದ ಡಾ| ವಿನು ಮತ್ತು ಶಾಹಿಲ್, ರೋಟರಿ ಕ್ಲಬ್‌ನ ಪದಾಧಿಕಾರಿಗಳಾದ ಶ್ರೀ ಶ್ರೀನಿವಾಸ ರಾವ್, ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಸದಸ್ಯರಾದ ಶ್ರೀ ರತ್ನಾಕರ್ ಶೆಟ್ಟಿ, ಕಾಪು ಬಿಲ್ಲವ ಸಹಾಯಕ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಮಾಧವ ಸಾಲ್ಯಾನ್ ಉಪಸ್ಧಿತರಿದ್ದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕಾಪು ಶಾಖೆಯ ಶಾಖಾಧಿಕಾರಿ ಶ್ರೀಮತಿ ಸುಮನ ಪ್ರವೀಣ್ ಸ್ವಾಗತಿಸಿ, ಶ್ರೀಮತಿ ಚೈತ್ರಾ ದಿನೇಶ್ ವಂದಿಸಿದರು. ಹಿರಿಯ ಶಾಖಾಧಿಕಾರಿ ಶ್ರೀಮತಿ ಸ್ವಾತಿ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು.