
ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್. ಪಿ , ನಿರ್ದೇಶಕರಾದ ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಹಿರಿಯ ಯೋಗ ಶಿಕ್ಷಕಿಯಾದ ಶ್ರೀಮತಿ ವಿದ್ಯಾ ಹಾಗೂ ಸಂಘದ ಸಿಬ್ಬಂದಿ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.