ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ಅಪಘಾತದಿಂದ ಒಂದು ಕಾಲು ಮುರಿತಕ್ಕೆ ಒಳಗಾದ ಸಂಘದ ಸದಸ್ಯರಾದ ಶ್ರೀ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್‌ನ್ನು ಹಸ್ತಾಂತರಿಸುವ ಕಾರ್ಯಕ್ರಮವು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ” ಬೈರಾಡಿಕೆರೆ, ಪಡೀಲ್‌ನಲ್ಲಿ ಜರುಗಿತು. ಸ್ಕೂಟರ್ ಹಸ್ತಾಂತರ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ದಿನಕರ್ ಕುಲಾಲ್ ರವರು ನಡೆಸಿಕೊಟ್ಟರು.

filter: 0; fileterIntensity: 0.0; filterMask: 0; brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (0.6564815, 0.83409697);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;

ಈ ಕಾರ್ಯಕ್ರಮದಲ್ಲಿ ಸಂಘದ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್ ಪಿ, ನಿರ್ದೇಶಕರಾದ ಶ್ರೀ ಜಿ. ಪರಮೇಶ್ವರ ಪೂಜಾರಿ, ಶ್ರೀ ಸೀತಾರಾಮ್ ಎನ್, ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮತ್ತು ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ ಇದರ ಗೌರವ ಅಧ್ಯಕ್ಷರಾದ ಶ್ರೀ ವಾಮನ್ ಕೆ., ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ಜನಾರ್ಧನ ಅತ್ತಾವರ , ಸಂಘದ ಹಿರಿಯ ಸದಸ್ಯರಾದ ಶ್ರಿ ಕೃತೀಶ್ ಕುಮಾರ್ ಮತ್ತಿತ್ತರರು ಪಾಲ್ಗೊಂಡಿದ್ದರು.

ಸAಘವು ಕೇವಲ ಆರ್ಥಿಕ ಚಟುವಟಿಕೆಗಳಿಗಷ್ಟೇ ಸೀಮಿತವಾಗಿರದೆ ಸಮಾಜಸೇವೆಯಲ್ಲಿ ಕೂಡಾ ತನ್ನ ಸೇವೆಯನ್ನು ವ್ಯಾಪಿಸಿಕೊಂಡಿದೆ. ಮುಖ್ಯವಾಗಿ ೮೫ಕ್ಕೂ ಮಿಕ್ಕಿ ಉಚಿತ ವೈದ್ಯಕೀಯ ಶಿಬಿರ, 850ಕ್ಕೂ ಮಿಕ್ಕಿ ಕಣ್ಣಿನ ಶಸ್ತçಚಿಕಿತ್ಸೆ, 19000ಕ್ಕೂ ಮಿಕ್ಕಿ ಉಚಿತ ಕನ್ನಡಕ ವಿತರಣೆ, ಉಚಿತ ಔಷದಿ ವಿತರಣೆ, ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ವಿತರಣೆ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಅರ್ಹ ವಿದ್ಯಾರ್ಥಿಗಳಿಗೆ ಐ.ಎ.ಎಸ್/ ಕೆ.ಎ.ಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಉಚಿತ ಪ್ರೇರಣಾ ಶಿಬಿರ ಆಯೋಜನೆ, ಸರ್ಕಾರಿ ಪ್ರೌಡ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಡವಿಧ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೋತ್ತರಗಳನ್ನು ದಿನಪತ್ರಿಕೆಗಳ ಸಹಯೋಗದೊಂದಿಗೆ ವಿತರಣೆ, ಸಾರ್ವಜನಿಕರ ಉಪಯೋಗಕ್ಕಾಗಿ ಬಸ್ಸು ತಂಗುದಾಣ ನಿರ್ಮಾಣ, ದಶಮಾನೋತ್ಸವ ಸಂದರ್ಭದಲ್ಲಿ ಅರ್ಹ ಬಡ ಕುಟುಂಬದ ಸಂಘದ ಸದಸ್ಯರ ಮನೆ ನಿರ್ಮಾಣ ಇತ್ಯಾದಿ ಸಮಾಜ ಮುಖಿ ಕಾರ್ಯಕ್ರಮಗಳ ಜೊತೆಗೆ ಈ ದಿನ ಅಪಘಾತದಿಂದ ಕಾಲು ಮುರಿತಕ್ಕೆ ಒಳಗಾದ ಸಂಘದ ಸದಸ್ಯರಾದ ಶ್ರೀ ಲತೀಶ್ ಕುಮಾರ್ ಕೆ ಇವರಿಗೆ ನಿತ್ಯ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಕೊಡುಗೆಯಾಗಿ ಸ್ಕೂಟರ್‌ನ್ನು ಹಸ್ತಾಂತರಿಸಿದೆ.