
ಶ್ರೀ ಕೆ. ಶಿವಪ್ರಸಾದ್ ಆಚಾರ್ಯ ರವರು ಮಾತನಾಡಿ “ಕೆ.ಸಿ. ರೋಡ್ ಶಾಖೆಯಲ್ಲಿ ಸಿಬ್ಬಂದಿಗಳ ಗ್ರಾಹಕ ಸ್ನೇಹಿ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶ್ರೀ ಅಬ್ಬಾಸ್ ಉಚ್ಚಿಲ ರವರು ಮಾತನಾಡಿ “ಕೆ.ಸಿ. ರೋಡ್ ಶಾಖೆಯು ಎರಡು ವರುಷದಲ್ಲಿ ಈ ಭಾಗದ ಜನತೆಗೆ ತನ್ನ ಕಾರ್ಯವೈಖರಿಯಿಂದ ತುಂಬಾ ಹತ್ತಿರವಾಗಿದೆ. ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡುವಂತೆ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಲ್ಲಿ ಮನವಿಯನ್ನು ಮಾಡಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿŒ “ಸಂಘದ ಬೆಳವಣಿಗೆಗೆ ಕೇವಲ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ಮಾತ್ರವಲ್ಲದೆ ಗ್ರಾಹಕರು ಕೂಡ ಕಾರಣೀಭೂತರು. ಈ ನಿಟ್ಟಿನಲ್ಲಿ ಸಂಘದ ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಗ್ರಾಹಕ ಸಭೆಯನ್ನು ನಡೆಸಿ, ಗ್ರಾಹಕರ ಸಲಹೆ ಸೂಚನೆಗಳನ್ನು ಪಡೆದುಕೊಂಡು ಕಾರ್ಯರೂಪಕ್ಕೆ ತರಲಾಗುತ್ತಿದೆ. ಸಂಘವು ಪ್ರಸ್ತುತ ೩೩ ಶಾಖೆಗಳೊಂದಿಗೆ ಕಾರ್ಯಚರಿಸುತ್ತಿದ್ದು, ಈ ಸಾಲಿನಲ್ಲಿ ಇನ್ನೂ ಎರಡು ನೂತನ ಶಾಖೆಗಳನ್ನು ಆರಂಬಿಸುವುದಾಗಿ ತಿಳಿಸಿದರು. ಸಂಘವು ಪ್ರತಿ ವರ್ಷದಂತೆ ಈ ವರ್ಷವೂ ಉತ್ತಮ ಲಾಭವನ್ನು ಗಳಿಸಿದ್ದು, ಗ್ರಾಹಕರಿಗೆ ಒಳ್ಳೆಯ ಡಿವಿಡೆಂಡ್ ನೀಡುವುದಾಗಿ ತಿಳಿಸಿದರು. ಮತ್ತು ಶಾಖೆಯ ಕಟ್ಟಡ ಉದ್ಘಾಟಣೆ ಸಮಯದಲ್ಲಿ ಮಾಲೀಕರಾದ ಶ್ರೀ ಅಬ್ಬಾಸ್ ಉಚ್ಚಿಲರವರ ಪ್ರೋತ್ಸಾಹವನ್ನು ನೆನಪಿಸಿದರು. ಕೆ.ಸಿ. ರೋಡ್ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಸದಸ್ಯ ಗ್ರಾಹಕರಿಗೆ ಚಿನ್ನಾಭರಣಗಳಿಗೆ ಅಧಿಕ ಮೌಲ್ಯದೊಂದಿಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲಗಳನ್ನು ನೀಡುತ್ತಿದ್ದೇವೆ. ಸಂಸ್ಥೆಯು ಕೇವಲ ಬ್ಯಾಂಕಿAಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತು ವಾಹನ ವಿಮಾ ಸೌಲಭ್ಯಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಸುಮಾರು ೮೬ಕ್ಕೂ ಮಿಕ್ಕಿ ಉಚಿತ ಆರೋಗ್ಯ ಶಿಬಿರಗಳನ್ನು ಸಂಘವು ಆಯೋಜಿಸಿ ಜನರ ಆರೋಗ್ಯದ ಕಡೆಗೆ ಹೆಚ್ಚಿನ ಕಾಳಜಿ ವಹಿಸುವಂತೆ ಮಾಡುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶ್ರೀ ಆನಂದ್ ಎಸ್ ಕೊಂಡಾಣ, ಮುಖ್ಯ ಕಾರ್ಯನಿರ್ವಹಣಾದಿಕಾರಿ ಶ್ರೀಮತಿ ಸೌಮ್ಯ ವಿಜಯ್ ಮತ್ತಿತ್ತರರು ಉಪಸ್ಥಿತರಿದ್ದರು.
ಸಂಘದ ಕೆ.ಸಿ. ರೋಡ್ ಶಾಖೆಯ ಸಿಬ್ಬಂದಿಯಾದ ಕು. ಮೇಘಶ್ರೀ ಪಿ. ಎನ್. ಸ್ವಾಗತಿಸಿ , ಶ್ರೀಮತಿ ವಿದ್ಯಾ ಹರೀಶ್ ರವರು ವಂದಿಸಿದರು. ಶಾಖಾಧಿಕಾರಿ ಶ್ರೀ ಶಿವರಾಮ ಕಾರ್ಯಕ್ರಮ ನಿರೂಪಿಸಿದರು.