
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು ಇದರ ಅಧ್ಯಕ್ಷರಾದ ಶ್ರೀ ಜಿ.ಟಿ. ದೇವೇಗೌಡರು ರವರು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರ ಗೌರವ ಉಪಸ್ಥಿತಿಯಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ 2025 ನೇ ಸಾಲಿನ “ಉತ್ತಮ ಆಡಳಿತಾತ್ಮಕ ಸಹಕಾರಿ ಸಂಘ” ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರಿಗೆ ನೀಡಿ ಗೌರವಿಸಿದರು.
ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರಾದ ಶ್ರೀ ಯು.ಟಿ ಖಾದರ್ ಪರೀದ್, ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ಪಾಲ್ ಎ. ಸುವರ್ಣ, ಕರ್ನಾಟಕ ವಿಧಾನ ಪರಿಷತ್ನ ಸದಸ್ಯರಾದ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ, ಶ್ರೀ ಐವನ್ ಡಿಸೋಜ, ಶ್ರೀ ಕಿಶೋರ್ ಕುಮಾರ್ ಬೊಟ್ಯಾಡಿ, ನಬಾರ್ಡ್ ನ ಮುಖ್ಯ ಮಹಾಪ್ರಬಂಧಕಾರದ ಡಾ. ಸುರೇಂದ್ರ ಬಾಬು, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ಇದರ ಅಧ್ಯಕ್ಷರಾದ ಶ್ರೀ ರವಿರಾಜ್ ಹೆಗ್ಡೆ, ರಾಜ್ಯ ಸಹಕಾರ ಸಂಘಗಳ ನಿಭಂದಕರಾದ ಶ್ರೀ ಟಿ.ಎಚ್. ಎಂ. ಕುಮಾರ್, ಮೈಸೂರು ಪ್ರಾಂತ ಸಹಕಾರ ಸಂಘಗಳ ಜಂಟಿ ನಿಬಂಧಕರಾದ ಶ್ರೀ ಪ್ರಸಾದ್ ರೆಡ್ಡಿ ಪಿ., ದ.ಕ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ರಮೇಶ್ ಎಚ್.ಎನ್., ಉಡುಪಿ ಸಹಕಾರ ಸಂಘಗಳ ಉಪನಿಬಂಧಕಿಯಾದ ಶ್ರೀಮತಿ ಲಾವಣ್ಯಾ ಕೆ . ಆರ್. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾದ ಐಕಳಬಾವ ದೇವಿಪ್ರಸಾದ ಶೆಟ್ಟಿ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಕೆ.ಎಸ್ ನವೀನ್, ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಲಿಂಗರಾಜ್,
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶ್ರೀ ಟಿ.ಜಿ ರಾಜರಾಮ್ ಭಟ್, ಶ್ರೀ ಭಾಸ್ಕರ್ ಎಸ್. ಕೋಟ್ಯಾನ್, ಶ್ರೀ ವಾದಿರಾಜ ಶೆಟ್ಟಿ, ಶ್ರೀ ಎಸ್.ಬಿ. ಜಯರಾಮ ರೈ, ಶ್ರೀ ಅಶೋಕ್ ಕುಮಾರ್ ಶೆಟ್ಟಿ, ಶ್ರೀ ಎಸ್. ಬಿ. ಜಯರಾಮ ರೈ, ಶ್ರೀ ಸದಾಶಿವ ಉಳ್ಳಾಲ್, ಶ್ರೀ ಎಮ್. ಮಹೇಶ್ ಹೆಗ್ಡೆ, ಶ್ರೀ ಮೋನಪ್ಪ ಶೆಟ್ಟಿ, ಶ್ರೀ ಜೈರಾಜ್ ಬಿ. ರೈ, ಶ್ರೀ ಕುಶಾಲಪ್ಪ ಗೌಡ, ಶ್ರೀ ಎಸ್.ಎನ್.ಮನ್ಮಥ, ಶ್ರೀ ರಾಜೇಶ್ ರಾವ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಕೆ. ಗೋಪಾಲಕೃಷ್ಣ ಭಟ್, ನಬಾರ್ಡ್ ಡಿಡಿಎಂ ಶ್ರೀಮತಿ ಸಂಗೀತಾ ಕರ್ತಾ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ಶ್ರೀ ಆನಂದ ಎಸ್. ಕೊಂಡಾಣ, ಶ್ರೀ ರಮಾನಾಥ್ ಸನಿಲ್, ಶ್ರೀ ಮುದ್ದು ಮೂಡುಬೆಳ್ಳೆ, ಶ್ರೀ ಗೋಪಾಲ್ ಎಮ್, ಶ್ರೀಮತಿ ಉಮಾವತಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಭಾಗವಹಿಸಿದ್ದರು.
ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಮ್.ಎನ್. ರಾಜೇಂದ್ರ ಕುಮಾರ್ ರವರು ಸ್ವಾಗತಿಸಿದರು. ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶ್ರೀ ಶಶಿ ಕುಮಾರ್ ರೈ ಬಾಲ್ಯೊಟ್ಟು ರವರು ವಂದಿಸಿದರು. ಶ್ರೀ ನಿತೇಶ್ ಶೆಟ್ಟಿ ಎಕ್ಕಾರು ನಿರೂಪಿಸಿದರು.